K H Puttaswamy Gowda: ಕೆಪಿಎಸ್ ಶಾಲೆಗೆ ಶಾಸಕರಿಂದ ಎರಡು ಬಸ್‌ಗಳ ಕೊಡುಗೆ
ಸುಮಾರು ನೂರು ವರ್ಷಗಳ ಇತಿಹಾಸ ಹೊಂದಿರುವ ಶಾಲೆಯಲ್ಲಿ ಪ್ರಸ್ತುತ 693ಕ್ಕೂ ಅಧಿಕ ವಿದ್ಯಾರ್ಥಿ ಗಳು ವ್ಯಾಸಂಗ ಮಾಡುತ್ತಿದ್ದಾರೆ. ದೂರದ ಊರುಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವಂತೆ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಹೊಸ ಬಸ್‌ಗಳನ್ನು ಖರೀದಿಸಿ ಶಾಲೆಗೆ ಕೊಡುಗೆಯಾಗಿ ನೀಡಲಾಗಿದೆ. ಅಲ್ಲದೆ, ನಾಲ್ಕು ಕೊಠಡಿಗಳ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ.
-
ಗೌರಿಬಿದನೂರು: ತಾಲೂಕಿನ ಹೊಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡಿರುವ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ (MLA K H Puttaswamy Gowda) ಅವರು ವೈಯಕ್ತಿಕ ವೆಚ್ಚದಲ್ಲಿ ಎರಡು ಹೊಸ ಬಸ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ತಜ್ಞ ಪದ್ಮಭೂಷಣ ಡಾ.ಎಚ್.ನರಸಿಂಹಯ್ಯ(Educationist Padma Bhushan Dr. H. Narasimhaiah) ಅವರು ವಿದ್ಯಾಭ್ಯಾಸ ಮಾಡಿದ ಈ ಶಾಲೆ ಯನ್ನು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.
ಇದನ್ನೂ ಓದಿ: Gauribidanur News: ಓಂ ಶಕ್ತಿ ದೇವಾಲಯದಲ್ಲಿ ಆಷಾಢ ಅಮಾವಾಸ್ಯೆ: ಭಕ್ತಿಭಾವದಿಂದ ಅಂಬಲಿ ಕಲಶೋತ್ಸವ
ಸುಮಾರು ನೂರು ವರ್ಷಗಳ ಇತಿಹಾಸ ಹೊಂದಿರುವ ಶಾಲೆಯಲ್ಲಿ ಪ್ರಸ್ತುತ 693ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದೂರದ ಊರುಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಹೊಸ ಬಸ್‌ಗಳನ್ನು ಖರೀದಿಸಿ ಶಾಲೆಗೆ ಕೊಡುಗೆಯಾಗಿ ನೀಡಲಾಗಿದೆ. ಅಲ್ಲದೆ, ನಾಲ್ಕು ಕೊಠಡಿಗಳ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ.
ಶಾಸಕರು ಬಸ್‌ಗಳಿಗೆ ಚಾಲನೆ ನೀಡಿ, ಸೋಮವಾರದಿಂದ ವಿದ್ಯಾರ್ಥಿಗಳು ಹೊಸ ಬಸ್‌ಗಳ ಮೂಲಕ ಶಾಲೆಗೆ ಆಗಮಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಮುಖಂಡರು, ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.