ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ದೇವೇಗೌಡರ 94ನೇ ಜನ್ಮದಿನದಲ್ಲಿ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ. ಬಹುಮಾನ ನೀಡಿದ ಜನಪರ ಶಾಸಕ

ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (Former Prime Minister HD Deve Gowda) ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳುಹಿಸುವ ಅಗತ್ಯವಿದೆ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನ ದೇಶಕ್ಕೆ ಇನ್ನಷ್ಟು ಅವಶ್ಯಕವಾಗಿದೆ ಎಂದು ಶಾಸಕ ಬಿ.ಎನ್ ರವಿಕುಮಾರ್ (MLA B.N.Ravikumar) ಅಭಿಪ್ರಾಯಪಟ್ಟರು.

ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ  ಹೆಚ್.ಡಿ.ದೇವೇಗೌಡ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳುಹಿಸುವ ಅಗತ್ಯವಿದೆ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನ ದೇಶಕ್ಕೆ ಇನ್ನಷ್ಟು ಅವಶ್ಯಕವಾಗಿದೆ ಎಂದು ಶಾಸಕ ಬಿ.ಎನ್ ರವಿಕುಮಾರ್ ಅಭಿಪ್ರಾಯಪಟ್ಟರು.

ಶಿಡ್ಲಘಟ್ಟ: ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ(Former Prime Minister HD Deve Gowda) ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳುಹಿಸುವ ಅಗತ್ಯವಿದೆ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನ ದೇಶಕ್ಕೆ ಇನ್ನಷ್ಟು ಅವಶ್ಯಕವಾಗಿದೆ ಎಂದು ಶಾಸಕ ಬಿ.ಎನ್ ರವಿಕುಮಾರ್ (MLA B.N.Ravikumar) ಅಭಿಪ್ರಾಯಪಟ್ಟರು.

ನಗರದ ವ್ಯಾಪ್ತಿಯ ಹಂಡಿಗನಾಳ ಗ್ರಾಮದ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಎಚ್.ಡಿ.ದೇವೇಗೌಡ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇವೇಗೌಡರು ರೈತರ ಪರ ನಿರಂತರ ಹೋರಾಟ ನಡೆಸಿದ ಅಪರೂಪದ ನಾಯಕರು. ಸಾಮಾನ್ಯ ಜನರ ಸಮಸ್ಯೆಗಳನ್ನು ರಾಷ್ಟ್ರಮಟ್ಟದಲ್ಲಿ ಪ್ರಸ್ತಾಪಿಸಿ ದೇಶದ ರಾಜಕಾರಣದಲ್ಲಿ ವಿಶಿಷ್ಟ ಗುರುತು ಮೂಡಿಸಿದ ಮಹಾನ್ ನಾಯಕರು ಎಂದು ಬಣ್ಣಿಸಿದರು.

ಇದನ್ನೂ ಓದಿ: Shidlaghatta News: ಜನರ ವಿಶ್ವಾಸವೇ ನನ್ನ ರಾಜಕೀಯ ಶಕ್ತಿ: ಪುಟ್ಟು ಆಂಜಿನಪ್ಪ

೨೦೨೮ರ ವೇಳೆಗೆ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಮಲ್ಲೇಶ್ ಬಾಬು ಮಾತನಾಡಿ, ದೇವೇಗೌಡರು ದೇಶದ ರಾಜಕಾರಣ ದಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ನಾಯಕರು. ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸಿದ ಅವರು ಸಾಮಾನ್ಯ ಜನರ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಎಂದರು.

ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅವಧಿಯಲ್ಲೂ ಗ್ರಾಮೀಣಾಭಿವೃದ್ಧಿ ಹಾಗೂ ರೈತರ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಇಂತಹ ಮಹಾನ್ ನಾಯಕನ ಜನ್ಮದಿನವನ್ನು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.

ಇದೇ ವೇಳೆ ಶಾಸಕ ಬಿ.ಎನ್ ರವಿಕುಮಾರ್ ಅವರಿಗೆ ಬರುವ ಸಂಬಳದಲ್ಲೇ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ಮತ್ತು ಬಹುಮಾನಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಕೆಲಸ. ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣದ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ಕೆಂಚಾರ್ಲಹಳ್ಳಿ ಕೃಷ್ಣಾರೆಡ್ಡಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ. ವೆಂಕಟೇಶ್, ನಗರ ಘಟಕ ಅಧ್ಯಕ್ಷೆ ಮಂಜುಳಮ್ಮ, ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕೋಲಾರ ಜಿಲ್ಲಾ ಜೆಡಿಎಸ್ ಮುಖಂಡ ವಕ್ಕಲ್ಲೇರಿ ರಾಮು, ಗಂಜಿಗುAಟೆ ನರಸಿಂಹಮೂರ್ತಿ, ಇ. ತಿಮ್ಮಸಂದ್ರ ಶಿವಾರೆಡ್ಡಿ, ಜೆ.ವಿ. ಸದಾಶಿವ, ತಿಮ್ಮನಾಯಕನಹಳ್ಳಿ ರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸನ್ಮಾನ
ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ ರೂ.1 ಲಕ್ಷ, ದ್ವಿತೀಯ ಬಹುಮಾನವಾಗಿ ಇಬ್ಬರಿಗೆ ತಲಾ 50 ಸಾವಿರ ಹಾಗೂ ತೃತೀಯ ಬಹುಮಾನವಾಗಿ 25 ಸಾವಿರ ನಗದು ಹಣ ನೀಡಿ ಸನ್ಮಾನಿಸಲಾಯಿತು. ಜೊತೆಗೆ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ತಲಾ 15 ಸಾವಿರ ನೀಡಿ ಗೌರವಿಸಲಾಯಿತು.