MLA K H Puttaswamy Gowda: ಗ್ಯಾರಂಟಿ ಯೋಜನೆಯ ಸೌಲಭ್ಯ ಎಲ್ಲರಿಗೂ ತಲುಪಲಿ: ಶಾಸಕ ಪುಟ್ಟಸ್ವಾಮಿಗೌಡ ಕರೆ
ನೆರೆಯ ಆಂಧ್ರ ಪ್ರದೇಶ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಲೂಕಿನಲ್ಲಿ ಅನಕ್ಷರಸ್ಥರು ಮತ್ತು ಬಡವರ ಸಂಖ್ಯೆ ಹೆಚ್ಚಿದ್ದು, ಪಂಚ ಗ್ಯಾರಂಟಿ ಯೋಜನೆ(5 Guarantee Scheme)ಗಳ ಅನುಷ್ಠಾನ ದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನಿಗಾ ವಹಿಸ ಬೇಕು
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪುವಂತೆ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡರು ಹೇಳಿದರು. -
ಗೌರಿಬಿದನೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಗಳ ಸೌಲಭ್ಯ ತಲುಪುವಂತೆ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡರು(MLA K H Puttaswamy Gowda) ಹೇಳಿ ದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ಮಹಿಳೆಯರ ಸಬಲೀಕರಣವೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶವಾಗಿದೆ ಎಂದರು.
ನೆರೆಯ ಆಂಧ್ರ ಪ್ರದೇಶ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಲೂಕಿನಲ್ಲಿ ಅನಕ್ಷರಸ್ಥರು ಮತ್ತು ಬಡವರ ಸಂಖ್ಯೆ ಹೆಚ್ಚಿದ್ದು, ಪಂಚ ಗ್ಯಾರಂಟಿ ಯೋಜನೆ(5 Guarantee Scheme)ಗಳ ಅನುಷ್ಠಾನ ದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನಿಗಾ ವಹಿಸ ಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ರಂಗರಾಜು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆಸರೆಯಾಗಿವೆ. ಪ್ರಮುಖ ಇಲಾಖೆ ಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಕೈಜೋಡಿಸ ಬೇಕು ಎಂದು ಹೇಳಿದರು.
ಯೋಜನೆಗಳ ಕುರಿತು ಬಹುತೇಕರಿಗೆ ಸಮರ್ಪಕ ಮಾಹಿತಿ ಇಲ್ಲದಿರುವುದರಿಂದ ಅರ್ಹ ಫಲಾನು ಭವಿಗಳಿಗೆ ಅಗತ್ಯ ಮಾಹಿತಿಯನ್ನು ತಲುಪಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಇಒ ಜಿ.ಕೆ. ಹೊನ್ನಯ್ಯ, ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.