ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಖಾತಾ ಆಂದೋಲನ: 211 ಫಲಾನುಭವಿಗಳಿಗೆ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಅವರು 211 ಫಲಾನುಭವಿಗಳಿಗೆ ಖಾತಾಗಳನ್ನು ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಾಲಕ್ಕೆ ಖಾತಾಗಳು ಕೈ ಸೇರಬೇಕೆಂಬ ಉದ್ದೇಶದಿಂದ ಪ್ರತಿ ವಾರ ಖಾತಾ ಅದಾಲತ್ ಕಾರ್ಯಕ್ರಮ ವನ್ನು ನಗರಸಭೆ ಆವರಣದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ

211 ಫಲಾನುಭವಿಗಳಿಗೆ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

ನಗರದ ನಗರಸಭೆ ಆವರಣದಲ್ಲಿ ನಡೆದ ಖಾತಾ ಅದಾಲತ್ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಅವರು 211 ಫಲಾನುಭವಿಗಳಿಗೆ ಖಾತಾಗಳನ್ನು ವಿತರಣೆ ಮಾಡಿದರು.

Profile Ashok Nayak Apr 9, 2025 9:47 PM

ಗೌರಿಬಿದನೂರು: ನಗರದ ನಗರಸಭೆ ಆವರಣದಲ್ಲಿ ನಡೆದ ಖಾತಾ ಅದಾಲತ್ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಅವರು 211 ಫಲಾನುಭವಿಗಳಿಗೆ ಖಾತಾಗಳನ್ನು ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಾಲಕ್ಕೆ ಖಾತಾಗಳು ಕೈ ಸೇರಬೇಕೆಂಬ ಉದ್ದೇಶದಿಂದ ಪ್ರತಿ ವಾರ ಖಾತಾ ಅದಾಲತ್ ಕಾರ್ಯಕ್ರಮ ವನ್ನು ನಗರಸಭೆ ಆವರಣದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ಮೂರು ತಿಂಗಳಿಂದ 2700 ಖಾತಾಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದ್ದೇವೆ.

ಇದನ್ನೂ ಓದಿ: Chikkaballapur News: ಒತ್ತುವರಿ ತೆರವು ವೇಳೆ ಅಧಿಕಾರಿಗಳ ಹಾಗೂ ಒತ್ತುವರಿದಾರರ ನಡುವೆ ಮಾತಿನ ಜಟಾಪಟಿ

ಸಾರ್ವಜನಿಕರು ಯಾವುದೇ  ಸಮಸ್ಯೆ ಗಳಿದ್ದರು ನೇರವಾಗಿ ನಗರಸಭೆಗೆ ದೂರು ನೀಡಬಹುದು ಯಾವುದೇ ಮದ್ಯವರ್ತಿಗಳ ಮೇಲೆ ಅವಲಂಬಿತರಾಗಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ, ನಗರಸಭೆ ಅಧ್ಯಕ್ಷ ಲಕ್ಷ್ಮಿ ನಾರಾಯಣ ಪ್ಪ, ಉಪಾಧ್ಯಕ್ಷ ಫರೀದ್, ಪೌರಾಯುಕ್ತೆ ಡಿ ಎಂ ಗೀತಾ, ಚಂದ್ರ ಮೋಹನ್  ಸೇರಿದಂತೆ ಎಲ್ಲಾ ನಗರಸಭೆ ಸದಸ್ಯರು ಉಪಸ್ಥಿತರಿದ್ದರು.