ಶಿಡ್ಲಘಟ್ಟ: ಕನ್ನಡ ಸಾಹಿತ್ಯದ ಬೆಳವಣಿಗೆಗೆ ಪರಿಷತ್ತಿನ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ರವಿಕುಮಾರ್(MLA Ravikumar) ಹೇಳಿದರು.
ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉದ್ಘಾಟನೆ ಹಾಗೂ ಬಸವೇಶ್ವರ ಜಯಂತಿ ಅಂಗವಾಗಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಹಿತ್ಯ ಪರಿಷತ್ತು ಸದಾ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಚೇರಿ ಆರಂಭವಾಗಿರುವುದು ಸಾಹಿತ್ಯ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿದೆ. ಗ್ರಾಮೀಣ ಮಟ್ಟದಲ್ಲೂ ಕನ್ನಡ ಸಾಹಿತ್ಯವನ್ನು ವ್ಯಾಪಕವಾಗಿ ಹರಡುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: N Ravi Kumar Column: ದೇಶಕ್ಕೆ ಮಹತ್ತರ ಕೊಡುಗೆ ನೀಡಿರುವ ಆರೆಸ್ಸೆಸ್
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಗನ ಸಿಂಧು,ಇಓ ಹೇಮಾವತಿ ಆರ್, ಸಿಪಿಐ ಆನಂದ್,ಬAಕ್ ಮುನಿಯಪ್ಪ,ತಾದೂರು ರಘು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ರೂಪಸಿ ರಮೇಶ್, ಮೊಹಮ್ಮದ್ ಖಾಸಿಂ, ಎಸ್ ವಿ ನಾಗರಾಜ ರಾವ್, ಟಿಟಿ ನರಸಿಂಹಪ್ಪ, ಸುಂದರಾ ಚಾರಿ, ಸುರೇಶ್, ಈ ಧರೆ ಪ್ರಕಾಶ್ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರುಗಳು ಇನ್ನು ಅನೇಕರು ಹಾಜರಿದ್ದರು.