Chikkaballapur News: ಅನ್ನಭಾಗ್ಯ 10 ಕೆ.ಜಿ ಅಕ್ಕಿ ವಿತರಣೆಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚಾಲನೆ
ಪಡಿತರ ವಿತರಣೆ ಕುರಿತು ಹಲವು ದೂರುಗಳಿದ್ದು, ನ್ಯಾಯ ಬೆಲೆ ಅಂಗಡಿ ಮಾಲೀಕರ ಸಭೆ ನಡೆಸಿ ಈ ಕುರಿತು ಎಚ್ಚರಿಕೆ ನೀಡಲಾಗಿದೆ. ಅಂಗಡಿ ಮಾಲೀಕರ ಕುಂದು-ಕೊರತೆಗಳ ಬಗ್ಗೆಯೂ ಗಮನ ಹರಿಸಲಾಗಿದೆ. ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರು ಯಾವುದೇ ಲೋಪಗಳಿಗೆ ಎಡೆಮಾಡದೆ ಯೋಜನೆಯನ್ನು ಜನರಿಗೆ ತಲುಪಿಸಬೇಕು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ, ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದರು

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ೧೦ ಕೆ.ಜಿ ಅಕ್ಕಿ ವಿತರಣೆ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಚಾಲನೆ ನೀಡಿದರು.

ಬಾಗೇಪಲ್ಲಿ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ವಿತರಣೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚಾಲನೆ ನೀಡಿದರು. ಪಟ್ಟಣದ ಹೊರವಲ ಯದ ಪ್ರವಾಸ ಮಂದಿರದ ಘಂಟಂವಾರಿಪಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿ ವಿತರಿ ಸುವ ಮೂಲಕ ಚಾಲನೆ ನೀಡಿದ ಅವರು, ಮಾರ್ಚ್ ತಿಂಗಳಿನಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದೆ. ಈ ಬಾರಿ ಫೆಬ್ರವರಿ ತಿಂಗಳ ೫ ಕೆ.ಜಿ. ಸೇರಿ 15 ಕೆ.ಜಿ ನೀಡಲಾ ಗುತ್ತಿದ್ದು ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳು ವಂತೆ ತಿಳಿಸಿದರು.
ಇದನ್ನೂ ಓದಿ: Chikkaballapur Crime: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು
ಪಡಿತರ ವಿತರಣೆ ಕುರಿತು ಹಲವು ದೂರುಗಳಿದ್ದು, ನ್ಯಾಯ ಬೆಲೆ ಅಂಗಡಿ ಮಾಲೀಕರ ಸಭೆ ನಡೆಸಿ ಈ ಕುರಿತು ಎಚ್ಚರಿಕೆ ನೀಡಲಾಗಿದೆ. ಅಂಗಡಿ ಮಾಲೀಕರ ಕುಂದು-ಕೊರತೆಗಳ ಬಗ್ಗೆಯೂ ಗಮನ ಹರಿಸಲಾಗಿದೆ. ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರು ಯಾವುದೇ ಲೋಪಗಳಿಗೆ ಎಡೆಮಾಡದೆ ಯೋಜನೆಯನ್ನು ಜನರಿಗೆ ತಲುಪಿಸಬೇಕು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ, ಎಲ್ಲ ೫ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದರು.
ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆ ಕುರಿತು ಅಪಸ್ವರ ಎತ್ತಿ ಸರ್ಕಾರ ದಿವಾಳಿಯಾಗು ತ್ತದೆ ಎಂದು ಟೀಕಿಸಿದ್ದವು. ಈಗ ಈ ಯೋಜನೆ ಅಡಿಯಲ್ಲಿ ಹೆಚ್ಚುವರಿ 10 ಕೆ.ಜಿ ವಿತರಣೆ ಮಾಡುವ ಮೂಲಕ ವಿರೋಧ ಪಕ್ಷಗಳಿಗೆ ಉತ್ತರ ನೀಡಿದೆ ಎಂದು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ಶ್ರೀನಿವಾಸ್, ಘಂಟAವಾರಿಪಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷ ಹೆಚ್.ಎಸ್.ನವೀನ್, ಬಾಗೇಪಲ್ಲಿ ತಾಲ್ಲೂಕು ಆಹಾರ ನಿರೀಕ್ಷಕರಾದ ಪುಷ್ಪ, ಹಾಗೂ ಸಾರ್ವಜನಿಕರು ಹಾಜರಿದ್ದರು.