ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA Subbareddy: ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಇರೋದು ಖಚಿತ ಎಂದ ಶಾಸಕ ಸುಬ್ಬಾರೆಡ್ಡಿ

ನಾನು ಪಕ್ಷದ ಶಿಸ್ತಿನ ಸಿಪಾಯಿ. ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿದ್ದೇನೆ. ಜೊತೆಗೆ ಪಕ್ಷದ ಬಲವರ್ಧನೆಯಲ್ಲೂ ಮುಂದಿದ್ದೇನೆ. ಡಿ.ಕೆ.ಶಿವಕುಮಾರ್‌ʼ ರವರು ಮುಖ್ಯಮಂತ್ರಿಯಾಗುವ ಸಮಯದಲ್ಲಿ ನಾನು ಸಹ ವರಿಷ್ಟರಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದೆ. ಆಗ ಅವರು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು.

ಸಚಿವ ಸ್ಥಾನದ ಕುರಿತು ಶಾಸಕ ಸುಬ್ಬಾರೆಡ್ಡಿ ಮಾತನಾಡಿದರು.

ಗುಡಿಬಂಡೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಬಾಗೇಪಲ್ಲಿ-ಗುಡಿಬಂಡೆ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ(Bagepalli-Gudibande MLA Subba reddy) ಅವರು ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಸಚಿವ ಸಂಪುಟದ ಎರಡನೇ ಪಟ್ಟಿ ಬಿಡುಗಡೆಯಾಗಲಿದ್ದು, ಅದರಲ್ಲಿ ನನ್ನ ಹೆಸರು ಇರುತ್ತೆ ಎಂದು ಹೇಳಿಕೆ ನೀಡಿದ್ದಾರೆ.

ಸಚಿವ ಸ್ಥಾನದ ಕುರಿತು ಮಾತನಾಡಿರುವ ಶಾಸಕ ಸುಬ್ಬಾರೆಡ್ಡಿಯವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿ ದ್ದೇನೆ. ಜೊತೆಗೆ ಪಕ್ಷದ ಬಲವರ್ಧನೆಯಲ್ಲೂ ಮುಂದಿದ್ದೇನೆ. ಡಿ.ಕೆ.ಶಿವಕುಮಾರ್‌(D K Shiv kumar)ʼರವರು ಮುಖ್ಯಮಂತ್ರಿಯಾಗುವ ಸಮಯದಲ್ಲಿ ನಾನು ಸಹ ವರಿಷ್ಟರಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದೆ. ಆಗ ಅವರು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕಾರಣಾಂತರಗಳಿಂದ ಮೊದಲ ಪಟ್ಟಿಯಲ್ಲಿ ನನಗೆ ಸಚಿವ ಸ್ಥಾನ ಸಿಗಲಿಲ್ಲ. ಮತ್ತೊಮ್ಮೆ ಸಿಎಂ ಶಿವಕುಮಾರ್‌ ಹಾಗೂ ಹಿರಿಯ ನಾಯಕರಾದ ಸಿದ್ದರಾಮಯ್ಯನವರ ಬಳಿ ನೀವು ಕೊಟ್ಟ ಮಾತಿ ನಂತೆ ನನಗೆ ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇನೆ. ಎರಡನೇ ಪಟ್ಟಿಯಲ್ಲಿ ನನಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ಮಾತು ಕೊಟ್ಟಿದ್ದಾರೆ ಎಂದರು.

ಇದನ್ನೂ ಓದಿ: MLA S.N. Subbareddy: ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ : ರೈತರಿಗೆ ಶಾಸಕ ಸುಬ್ಬಾರೆಡ್ಡಿ ಕರೆ

ಇನ್ನೂ ಕ್ಷೇತ್ರದಲ್ಲಿ ನನ್ನ ಬೆಂಬಲಿಗರು ಹಾಗೂ ಅಭಿಮಾನಿಗಳು ನನಗೆ ಸಚಿವ ಸ್ಥಾನ ಸಿಗದೇ ಇದ್ದರೇ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಆದರೆ ಅದು ಬೇಡ, ನಾವು ಪಕ್ಷಕ್ಕೆ ನಿಷ್ಟರಾಗಿರ ಬೇಕು. ಒಂದು ಸಚಿವ ಸ್ಥಾನ ಸಿಗದೇ ಇದ್ದರೇ ಯಾವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಕ್ಷೇತ್ರದ ಎಲ್ಲ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳೋಣ ಎಂದು ಮನವಿ ಮಾಡಿದ್ದೇನೆ. ಇನ್ನೇನು ಕೆಲವೇ ದಿನಗಳಲ್ಲಿ ಎರಡನೇ ಪಟ್ಟಿ ಸಿದ್ದವಾಗಲಿದ್ದು, ಸಚಿವ ಸ್ಥಾನ ಕೊಡದೇ ಇದ್ದರೇ ಮುಂದೆ ಯಾವ ರೀತಿಯ ಹೆಜ್ಜೆ ಹಾಕಬೇಕೆಂಬುದು ತೀರ್ಮಾ ನಿಸೋಣ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಕ್ಷೇತ್ರದಲ್ಲಿನ ಸಾಕಷ್ಟು ಮುಖಂಡರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಚಿಕ್ಕಬಳ್ಳಾಫುರ ಜಿಲ್ಲೆಯಲ್ಲಿ ಹಿರಿಯ ಶಾಸಕರಾಗಿರುವ ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಲೇಬೇಕು. ಆಪರೇಷನ್ ಕಮಲ ದ ಸಮಯದಲ್ಲೂ ಸಹ ಅವರು ಪಕ್ಷಕ್ಕೆ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. 

ಒಂದು ವೇಳೆ ಅವರಿಗೆ ಅಧಿಕಾರದ ಆಸೆಯಿದ್ದರೇ ಅಂದೇ ಅವರು ಪಕ್ಷ ಬಿಟ್ಟು ಬಿಜೆಪಿಯಲ್ಲಿ ಸಚಿವ ರಾಗುತ್ತಿದ್ದರು. ಈ ಭಾಗದ ಜನರ ನಂಬಿಕೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಪಕ್ಷಕ್ಕೆ ನಿಷ್ಠೆ ಯಾಗಿದ್ದಾರೆ. ಗಡಿ ಭಾಗ ಹಾಗೂ ಹಿಂದುಳಿದ ಭಾಗವಾದ ಈ ಕ್ಷೇತ್ರಕ್ಕೆ ತಪ್ಪದೇ ಸಚಿವ ಸ್ಥಾನ ನೀಡಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ನಾವು ಎಂತಹ ಹೋರಾಟಕ್ಕಾದರೂ, ಪಕ್ಷ ತೊರೆಯಲೂ ಸಹ ಸಿದ್ದವಾಗಿದ್ದೇವೆ ಎಂದು ಆಕ್ರೋಷವಾಗಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.