ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLC Bharathi Shetty: ತಾಲೂಕು ದಂಡಾಧಿಕಾರಿಗಳ ವಿರುದ್ಧ ಎಂಎಲ್ಸಿ ಭಾರತಿ ಶೆಟ್ಟಿ ಕೆಂಡಾಮಂಡಲ

ಚಿಂತಾಮಣಿಯ ತಾಲೂಕು ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿ ಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾರತಿ ಶೆಟ್ಟಿ ಅವರು ಪಾಲ್ಗೊಂಡಿದ್ದರು.ಈ ವೇಳೆ ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಲು ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದು ಭಾರತಿ ಶೆಟ್ಟಿ ಆಕ್ರೋಶಕ್ಕೆ ಕಾರಣವಾಯಿತು.

ತಾಲೂಕು ದಂಡಾಧಿಕಾರಿಗಳ ವಿರುದ್ಧ ಎಂಎಲ್ಸಿ ಭಾರತಿ ಶೆಟ್ಟಿ ಕೆಂಡಾಮಂಡಲ

-

Profile
Ashok Nayak Apr 27, 2026 8:48 PM

ಚಿಂತಾಮಣಿ: ನಗರದಲ್ಲಿ ನಡೆದ ಮಹಿಳಾ ಮೀಸಲಾತಿ ವಿರೋಧಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಯ ವೇಳೆ ವಿಧಾನ ಪರಿಷತ್ ಸದಸ್ಯೆ ಎಂ ಎಲ್ ಸಿ ಭಾರತಿ ಶೆಟ್ಟಿ(MLC Bharathi Shetty) ಅವರು ಅಧಿಕಾರಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ತಾಲೂಕು ದಂಡಾಧಿಕಾರಿಗಳ ವಿರುದ್ಧ ಗುಡುಗಿದ್ದಾರೆ.

ಚಿಂತಾಮಣಿಯ ತಾಲೂಕು ಕಚೇರಿ ಮುಂಭಾಗ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾರತಿ ಶೆಟ್ಟಿ ಅವರು ಪಾಲ್ಗೊಂಡಿದ್ದರು.ಈ ವೇಳೆ ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಲು ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದು ಭಾರತಿ ಶೆಟ್ಟಿ ಆಕ್ರೋಶಕ್ಕೆ ಕಾರಣವಾಯಿತು.

ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಬೀದಿಯಲ್ಲಿ ನಿಂತು ಪ್ರತಿಭಟನೆ ಮಾಡು ತ್ತಿದ್ದರೂ, ಕನಿಷ್ಠ ಸೌಜನ್ಯಕ್ಕಾದರೂ ಬಂದು ಮನವಿ ಸ್ವೀಕರಿಸದ ಅಧಿಕಾರಿಗಳ ನಡೆ ಅಕ್ಷಮ್ಯ ಎಂದು ಕಿಡಿಕಾರಿದರು.

ಇದನ್ನೂ ಓದಿ: Women Reservation Bill: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಫೋನ್ ಮೂಲಕವೇ ತಾಲೂಕು ದಂಡಾಧಿಕಾರಿಗಳನ್ನು ಸಂಪರ್ಕಿಸಿದ ಅವರು, ತಾಲೂಕು ದಂಡಾಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶ್ನಿಸಿದರು. ನೀವು ಜನಸೇವಕರು ಎಂಬುದು ನೆನಪಿರಲಿ, ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ,"ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಮಾತನಾಡಿ, ತಾಲೂಕಿನಲ್ಲಿ ಮಹಿಳೆಯರ ಸಮಸ್ಯೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯವನ್ನು ಕಟುವಾಗಿ ಟೀಕಿಸಿದರು.

ಭಾರತಿ ಶೆಟ್ಟಿ ಅವರ ಭಾಷಣಕ್ಕೆ ಸಾಥ್ ನೀಡಿದ ಪ್ರತಿಭಟನಾಕಾರರು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಅಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ಘಟನೆ, ಆಡಳಿತ ವರ್ಗ ಮತ್ತು ವಿರೋಧ ಪಕ್ಷದ ನಡುವಿನ ಶೀತಲ ಸಮರಕ್ಕೆ ಸಾಕ್ಷಿಯಾಯಿತು.