MLC Election: ಅ.23ರಂದು ಇಂದು ಎಂಎಲ್‌ಸಿ ಚುನಾವಣೆ: ಜಿಲ್ಲೆಯಲ್ಲಿ ಸಕಲ ಸಿದ್ಧತೆ ಪೂರ್ಣ
ರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಅ.23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಲೋಪಕ್ಕೆ ಅವಕಾಶ ನೀಡದೆ, ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಸೂಚಿಸಿದರು.
-
ಚಿಕ್ಕಬಳ್ಳಾಪುರ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಅ.23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಲೋಪಕ್ಕೆ ಅವಕಾಶ ನೀಡದೆ, ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ನಡೆದ ಮಸ್ಟರಿಂಗ್ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ ಮಾತನಾಡಿದರು.
ಇದನ್ನೂ ಓದಿ: Chitradurga accident: ಚಿತ್ರದುರ್ಗದಲ್ಲಿ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಚಾಲಕ, ಪ್ರಯಾಣಿಕ ಸಾವು, 15 ಮಂದಿಗೆ ಗಾಯ
ಜಿಲ್ಲೆಯಲ್ಲಿ ಒಟ್ಟು 26,262 ಮತದಾರರು ನೋಂದಾಯಿಸಿಕೊಂಡಿದ್ದು, ಸುಗಮ ಮತದಾನಕ್ಕಾಗಿ 36 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ ಆರರಿಂದ ಎಂಟು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಗತ್ಯ ಮೂಲಸೌಕರ್ಯ ಹಾಗೂ ಚುನಾವಣಾ ಸಾಮಗ್ರಿಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಮತದಾನ ಪ್ರಕ್ರಿಯೆಯು ಮಸ್ಟರಿಂಗ್‌ನಿಂದ ಆರಂಭವಾಗಿ ಮತದಾನ ಮತ್ತು ಡಿಮಸ್ಟರಿಂಗ್‌ವರೆಗೆ ಯಾವುದೇ ಗೊಂದಲಗಳಿಲ್ಲದೆ ನಡೆಯಬೇಕು. ಪ್ರಿಸೈಡಿಂಗ್ ಅಧಿಕಾರಿಗಳು, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಇತರ ಚುನಾವಣಾ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ಈಗಾಗಲೇ ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದ್ದು, ತರಬೇತಿಯಲ್ಲಿ ತಿಳಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್ ಮಾತನಾಡಿ, ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಹಂತದಲ್ಲಿ ಸಮಸ್ಯೆಗಳು ಎದುರಾದರೆ ಕಾನೂನುಬದ್ಧವಾಗಿ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದಲ್ಲಿ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತಂದು ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಪ್ರತಿ ಮತಗಟ್ಟೆಯಲ್ಲಿ ಪ್ರಿಸೈಡಿಂಗ್ ಅಧಿಕಾರಿಯೇ ಮುಖ್ಯಸ್ಥರಾಗಿದ್ದು, ಪೊಲೀಸ್ ಸಿಬ್ಬಂದಿ ಅವರ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕು. ಮತಗಟ್ಟೆಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮತಗಟ್ಟೆಯೊಳಗೆ ಯಾರಿಗೂ ಮೊಬೈಲ್ ಫೋನ್ ತರಲು ಅವಕಾಶ ನೀಡಬಾರದು. ಪೊಲೀಸ್ ಸಿಬ್ಬಂದಿಯೂ ಕರ್ತವ್ಯದ ವೇಳೆ ಮೊಬೈಲ್ ಬಳಸಬಾರದು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ 36 ಮತಗಟ್ಟೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಮಸ್ಟರಿಂಗ್ ಕಾರ್ಯದ ಬಳಿಕ ಚುನಾವಣಾ ಸಾಮಗ್ರಿಗಳನ್ನು ಸ್ವೀಕರಿಸಿದ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ವಾಹನಗಳಲ್ಲಿ ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿದರು.