ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkaballapur News: ಮೊಬೈಲ್ ಬಳಕೆ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ: ಮುಖ್ಯೋಪಾಧ್ಯಾಯ ಹರೀಶ್

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚು ಒಲವು ತೋರುತ್ತಿರುವುದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪೋಷಕರು ಮಕ್ಕಳಿಗೆ ಸಾಧ್ಯವಾದಷ್ಟು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಅವರು ಮನವಿ ಮಾಡಿದ ಅವರು, ಮಕ್ಕಳು ಸಮಯ ವ್ಯರ್ಥ ಮಾಡದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಎಳೆಮಕ್ಕಳಿಂದ ಮೊದಲಾಗಿ ಕಾಲೇಜು ವಿದ್ಯಾರ್ಥಿಗಳ ವರೆಗೆ ಮೊಬೈಲ್ ಬಳಕೆ ಹೆಚ್ಚಿದೆ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮೊಬೈಲ್ ಕೊಡುವುದರಿಂದ ಅವರ ಮಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬುದನ್ನು ಮನೋವಿಜ್ಞಾನಿಗಳು ಹೇಳಿದ್ದಾರೆ ಎಂದು ಪ್ರೆಸಿಡೆನ್ಸಿ ಶಾಲೆಯ ಮುಖ್ಯೋಪಾಧ್ಯಾಯ ಹರೀಶ್ ತಿಳಿಸಿದರು.

ನಗರದ ಪ್ರೆಸಿಡೆನ್ಸಿ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ವಿಕ್ಟರಿ ಕಾರ್ನಿವಲ್ ಸ್ಪೋರ್ಟ್ಸ್ ಮೀಟ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚು ಒಲವು ತೋರುತ್ತಿರುವುದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪೋಷಕರು ಮಕ್ಕಳಿಗೆ ಸಾಧ್ಯವಾದಷ್ಟು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಅವರು ಮನವಿ ಮಾಡಿದ ಅವರು, ಮಕ್ಕಳು ಸಮಯ ವ್ಯರ್ಥ ಮಾಡದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಇದನ್ನೂ ಓದಿ: Chikkaballapur News: ಗ್ರಾಮೀಣ ಬಡವರಿಗೆ ಮರಣ ಶಾಸನವಾದ ವಿಬಿ-ಜಿ ರಾಮ್ (ಜಿ) ಕಾಯ್ದೆ ಹಿಮ್ಮೆಟ್ಟಿಸಿ: ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ

ಜೊತೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರುವುದು ಅಗತ್ಯವಿದೆ ಎಂದರು.ನಮ್ಮ ಶಾಲೆಯಲ್ಲಿ ಮಕ್ಕಳನ್ನು ಕೇವಲ ವಿದ್ಯಾಭ್ಯಾಸಕ್ಕೆ ಸೀಮಿತಗೊಳಿಸದೇ, ನಿರಂತರವಾಗಿ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ಮುಸ್ತಾಖ್ ಅಹ್ಮದ್ ಇಂದಿನ ಮಕ್ಕಳು ಮೊಬೈಲ್ ಗೇಮ್‌ಗಳಲ್ಲಿ ತೊಡಗಿರುವುದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಹಾನಿ ಕಾರಕವಾಗಿದೆ  ಮಕ್ಕಳು ದಿನನಿತ್ಯ ಕನಿಷ್ಠ ಒಂದು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಕರ ಜೀವನ ನಡೆಸಬಹುದು.ಅಲ್ಲದೆ ಕ್ರೀಡೆಯಲ್ಲಿ ಹೆಸರು ಗಳಿಸಿರುವ ಕ್ರೀಡಾಪಟುಗಳನ್ನು ಪ್ರೇರಣೆ ಯಾಗಿ ಪಡೆದು ದೇಶಕ್ಕೆ ಕೀರ್ತಿ ತರುವಂತೆ ಕರೆ ನೀಡಿದರು.

ಈ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಫುಟ್ಬಾಲ್ ಆಟಗಾರರಾದ ಪ್ರಜ್ವಲ್,ಫುಟ್ಬಾಲ್ ಕೋಚ್ ಬಾಲಾಜಿ ಹಾಗೂ ಕ್ರಿಕೆಟ್ ಕೋಚ್ ಉತ್ತಮ್ ಅವರು ಮಕ್ಕಳಿಗೆ ಆಟೋಟಗಳ ಮಹತ್ವದ ಬಗ್ಗೆ ತಿಳಿಸಿದರು. ಈ ವೇಳೆ ಮಾತನಾಡಿದ ಕ್ರಿಕೆಟ್ ಕೋಚ್ ಉತ್ತಮ್ ಮಾತನಾಡಿ ಇಂದಿನ ಮಕ್ಕಳು ನಾಳಿನ ದೇಶದ ಭವಿಷ್ಯವಾಗಿದ್ದು,ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲೂ ಭಾಗವಹಿಸಿ ಉತ್ತಮ ನಾಗರಿಕರಾಗಿ ದೇಶಕ್ಕೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಇದೇ ವೇಳೆ ಎಲ್‌ಕೆಜಿ ಯಿಂದ ಹತ್ತನೇ ತರಗತಿವರೆಗೆಗಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಚಟು ವಟಿಕೆಗಳಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶನ ತೋರಿದರು.ಮುಖ್ಯವಾಗಿ ಬ್ಯಾಕ್ ವಾಕ್, ಲೆಮನ್ ವಾಕ್, ಜಂಪಿಂಗ್ ವಿತ್ ಬಾಲ್ ಸ್ಪರ್ಧೆಗಳು ನಡೆದವು. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಸ್ಥಳದಲ್ಲಿಯೇ ವಿತರಿಸಲಾಯಿತು.