ಗುಡಿಬಂಡೆ: ಕೇಂದ್ರ ಸರ್ಕಾರದ ನೂತನ ಯೋಜನೆಯಾದ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಯೋಜನೆಯ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಗುಡಿಬಂಡೆಯ ಕೃಷಿ ಇಲಾಖೆಯ ಕಚೇರಿಯಲ್ಲಿ ಏರ್ಪಡಿಲಾಗಿತ್ತು.
ಈ ವೇಳೆ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಎಂಬ ನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಿಂದ ರೈತರಿಗೆ ತುಂಬಾನೆ ಅನುಕೂಲವಾಗಲಿದೆ ಎಂದರು.
ಇದನ್ನೂ ಓದಿ: Chinthamani News: ಎಂಎಸ್‌ಸಿ ಪಿಸಿಕ್ಸ್ನಲ್ಲಿ ಏಳು ಚಿನ್ನದ ಪದಕಗಳು ಪಡೆದ ರೂಫಿಯಾ.ಕೆ.ಎಂ
ಈ ಯೋಜನೆ ಅಡಿಯಲ್ಲಿ ಕೃಷಿ ಉತ್ಪನ್ನ ಹೆಚ್ಚಿಸುವುದು ಕೃಷಿಯಲ್ಲಿ ವಿವಿಧ ದವಸ ಧಾನ್ಯಗಳನ್ನು ಬೆಳೆಯುವುದು ಮತ್ತು ಸಮಗ್ರ ಕೃಷಿ ಅಭಿವೃದ್ಧಿ ಜಿಲ್ಲೆಯಲ್ಲಿ ನಿರಾವರಿ ಸೌಲಭ್ಯ ರೈತರಿಗೆ ಅಲ್ಪಾವಧಿ ದೀರ್ಘಾವದಿ ಹಣಕಾಸು ನೆರವು ಮತ್ತು ಸುಗ್ಗಿಯ ನಂತರ ಪಂಚಾಯತ್ ಮತ್ತು ಬ್ಲಾಕ್ ಲೇವಲ್ ನಲ್ಲಿ ದವಸ ಧಾನ್ಯಗಳ ದಾಸ್ತಾನು ನಿರ್ಮಾಣ ಮಾಡುವುದು ಇದರ ಗುರಿಯಾಗಿದೆ. ಈ ಯೋಜನೆ ಯಡಿ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆ ಸಹ ಆಯ್ಕೆಯಾಗಿದ್ದು, ಈ ಭಾಗದ ಜನತೆಗೆ ಹೆಚ್ಚು ಅನುಕೂಲ ವಾಗಲಿದೆ ಎಂದರು.
ಈ ವೇಳೆ ಕೃಷಿಕ ಸಮಾಜದ ಅಧ್ಯಕ್ಷ ಹೆಚ್.ಎನ್.ಮಂಜುನಾಥರೆಡ್ಡಿ ಸೇರಿದಂತೆ ಕೃಷಿಕ ಸಮಾಜದ ಸದಸ್ಯರುಗಳು, ಕೃಷಿ ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ರೈತರು ಭಾಗವಹಿಸಿದ್ದರು.