ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ತಾಯಿ-ಮಗ ಸಾವು

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ ಜಲಾಶಯದ ಬಳಿ ನೀರಿನಲ್ಲಿ ಇಳಿದು ಆಟವಾಡುತ್ತಿದ್ದಾಗ ತಾಯಿ-ಮಗ ಮುಳುಗಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಪ್ರವಾಸಕ್ಕೆ ಬಂದಿದ್ದ ತಾಯಿ-ಮಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ. ನೀರಿಗೆ ಇಳಿದು ಆಟವಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರೇಖಾ (38) ಮತ್ತು ಹೇಮಂತ್ (18) ಮೃತರು.

ದೇವನಹಳ್ಳಿ ತಾಲೂಕು ಬೂದಿಗೆರೆ ಬಳಿಯ ಗಂಗವಾರ ಗ್ರಾಮದ ರಾಜು, ರೇಖಾ ದಂಪತಿ ಮಕ್ಕಳಾದ ಹೇಮಂತ್ ಮತ್ತು ದೀಪಾ ಅವರ ಜೊತೆ ಶುಕ್ರವಾರ ಜಲಾಶಯ ವೀಕ್ಷಿಸಲು ಬಂದಿದ್ದರು. ನೀರಿಗೆ ಇಳಿದಿದ್ದು ಆಟವಾಡುತ್ತಿದ್ದಾಗ ರೇಖಾ ಮತ್ತು ಮುಳುಗಿ, ಮೃತಪಟ್ಟಿದ್ದಾರೆ. ರಾಜು ಮತ್ತು ದೀಪಾ ಸಹ ನೀರು ಕುಡಿದಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರ ಜಿಲ್ಲಾ ಆಸ್ಪತ್ರೆಯಲ್ಲಿ ಶವಗಳನ್ನು ಇರಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಯಂತ್ರಕ್ಕೆ ಮಹಿಳೆಯೊಬ್ಬರು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಡತಿಪ್ಪೂರು ಮೂಲದ 45 ವರ್ಷದ ಅರಸಮ್ಮ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸಂಗ್ರಹಿಸಲಾಗುವ ಕಸವನ್ನು ಎಂಎಸ್‌ಜಿಪಿ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತದೆ. ಇಂದು ಬೆಳಗ್ಗೆ ಕಸ ವಿಂಗಡಣೆ ಕಾರ್ಯ ನಡೆಯುತ್ತಿದ್ದ ವೇಳೆ ಅರಸಮ್ಮ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಕಳೆದ ಮೂರ್ನಾಲ್ಕು ವರ್ಷದಿಂದ ಅರಸಮ್ಮ ಇಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನ ಕಸವನ್ನ ತಂದು ಈ ಘಟಕದಲ್ಲಿ ವಿಂಗಡಣೆ ಮಾಡಲಾಗುತ್ತಿತ್ತು. ಇಂದು ಬೆಳಗ್ಗೆ ಕಸ ವಿಂಗಡಣೆ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.