ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MP Dr. K. Sudhakar: ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಹಬ್ಬ ಆಚರಿಸಿದ ಸಂಸದ ಡಾ.ಕೆ.ಸುಧಾಕರ್

ದೀಪಾವಳಿ ಹಬ್ಬ ಎಂದರೆ ಇಡೀ ಕುಟುಂಬಕ್ಕೆ ಸಡಗರ ಹಾಗೂ ಸಂಭ್ರಮ. ಕೋವಿಡ್ ಸಮಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಆಗ ಸಚಿವ ನಾಗಿದ್ದ ನಾನು, ಆ ಮಕ್ಕಳನ್ನು ದತ್ತು ಪಡೆದು, ಅವರ ಹೆಸರಿನಲ್ಲಿ ಠೇವಣಿ ಮಾಡಿ ಸಂಪೂರ್ಣ ಶೈಕ್ಷಣಿಕ ನೆರವು ನೀಡುತ್ತಿದ್ದೇನೆ.

ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸುವುದರ ಮೂಲಕ ಸಂಸದ ಡಾ.ಕೆ.ಸುಧಾಕರ್ ಹಬ್ಬವನ್ನು ಅರ್ಥಪೂರ್ಣವಾಗಿಸಿದರು.

ಚಿಕ್ಕಬಳ್ಳಾಪುರ : ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸುವುದರ ಮೂಲಕ ಸಂಸದ ಡಾ.ಕೆ.ಸುಧಾಕರ್ ( MP Dr.K.Sudhakar) ಹಬ್ಬವನ್ನು ಅರ್ಥಪೂರ್ಣವಾಗಿಸಿದರು.

ಪ್ರತಿ ವರ್ಷವೂ ಸಂಸದ ಡಾ.ಕೆ.ಸುಧಾಕರ್ ಅನಾಥ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸುತ್ತಾರೆ. ಕೋವಿಡ್ ಸಮಯದಲ್ಲಿ ತಂದೆ ತಾಯಿ ಹಾಗೂ ಕುಟುಂಬವನ್ನು ಕಳೆದು ಕೊಂಡು ಅನಾಥರಾದ ಮಕ್ಕಳಿಗೆ ಸಂಸದರು ಹಲವು ರೀತಿಯಲ್ಲಿ ಬೆಂಬಲ ನೀಡಿದ್ದಾರೆ. ಅವರಿಗೆ ಇನ್ನಷ್ಟು ಪ್ರೋತ್ಸಾಹ, ಬೆಂಬಲ ನೀಡುವುದರ ಸೂಚಕವಾಗಿ ಪ್ರತಿ ವರ್ಷ ದೀಪಾವಳಿ ಹಬ್ಬವನ್ನು ಮಕ್ಕಳೊಂದಿಗೆ ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: MP Dr K Sudhakar: ಮಾರುಕಟ್ಟೆ ಅವ್ಯವಸ್ಥೆಗಳ ಬಗ್ಗೆ ಖುದ್ದು ರೈತರು ಮತ್ತು ವರ್ತಕರಿಂದ ದೂರುಗಳ ಸುರಿಮಳೆ

ಈ ವೇಳೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ದೀಪಾವಳಿ ಹಬ್ಬ ಎಂದರೆ ಇಡೀ ಕುಟುಂಬಕ್ಕೆ ಸಡಗರ ಹಾಗೂ ಸಂಭ್ರಮ. ಕೋವಿಡ್ ಸಮಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಆಗ ಸಚಿವನಾಗಿದ್ದ ನಾನು, ಆ ಮಕ್ಕಳನ್ನು ದತ್ತು ಪಡೆದು, ಅವರ ಹೆಸರಿನಲ್ಲಿ ಠೇವಣಿ ಮಾಡಿ ಸಂಪೂರ್ಣ ಶೈಕ್ಷಣಿಕ ನೆರವು ನೀಡುತ್ತಿದ್ದೇನೆ. ಈ ಮಕ್ಕಳಲ್ಲಿ ಎಲ್ಲ ಧರ್ಮ, ಜಾತಿಯವರಿದ್ದಾರೆ. ಪ್ರತಿ ವರ್ಷ ಇವರೊಂದಿಗೆ ದೀಪಾವಳಿ ಹಬ್ಬದ ಪೂಜೆ ಮಾಡಿ, ಭೋಜನ ಮಾಡುತ್ತೇನೆ. ಇದನ್ನು ಭಗವಂತನ ಸೇವೆಯಂತೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಈ ಬಾರಿಯ ಹಬ್ಬದಂದು ಚಿಕ್ಕಬಳ್ಳಾಪುರದ ಮನೆಯಲ್ಲಿ ಮಕ್ಕಳೊಂದಿಗೆ ಭೋಜನ ಮಾಡಿದ ಸಂಸದ ಡಾ.ಕೆ.ಸುಧಾಕರ್, ಅವರ ಯೋಗಕ್ಷೇಮ, ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರಿಸಿದರು.