ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MP Dr.K.Sudhakar: ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್

ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು. ೧. ಹೈನುಗಾರರ (ಕಲ್ಯಾಣ) ಮಸೂದೆ, 2024. ಈ ಮಸೂದೆಯು ಭಾರತದ ೭ ಕೋಟಿ ಡೇರಿ ಆಧಾರಿತ ಕೃಷಿ ಕುಟುಂಬ ಗಳಿಗೆ ಸಾಮಾಜಿಕ ಭದ್ರತೆಯ ನೆರವು ನೀಡುತ್ತದೆ.

ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ : ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆ ಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

೧. ಹೈನುಗಾರರ (ಕಲ್ಯಾಣ) ಮಸೂದೆ, ೨೦೨೪. ಈ ಮಸೂದೆಯು ಭಾರತದ ೭ ಕೋಟಿ ಡೇರಿ ಆಧಾರಿತ ಕೃಷಿ ಕುಟುಂಬಗಳಿಗೆ ಸಾಮಾಜಿಕ ಭದ್ರತೆಯ ನೆರವು ನೀಡುತ್ತದೆ. ಈ ಕುಟುಂಬಗಳಲ್ಲಿ ಹೆಚ್ಚಿನವರು ಸಣ್ಣ, ಅತಿ ಸಣ್ಣ ರೈತರು ಮತ್ತು ಮಹಿಳೆಯರಿದ್ದಾರೆ.

ಪ್ರಮುಖ ಅಂಶಗಳು
ಸಂಸದರು, ತಜ್ಞರು ಮತ್ತು ರೈತ ಪ್ರತಿನಿಧಿಗಳನ್ನು ಒಳಗೊಂಡ ಡೇರಿ ರೈತರ ಕಲ್ಯಾಣ ಸಮಿತಿಯ ರಚನೆ, ಡೇರಿ ರೈತರ ಕಲ್ಯಾಣ ನಿಧಿ ಸ್ಥಾಪನೆ, ಡೇರಿ ರೈತರಿಗೆ ತಲಾ ೫೦ ಲಕ್ಷ ಅಪಘಾತ ವಿಮೆ, ಡೇರಿ ರೈತರಿಗೆ ತಲಾ ೧೦ ಲಕ್ಷ ಆರೋಗ್ಯ ವಿಮೆ, ಸರ್ಕಾರಿ ಯೋಜನೆಗಳಡಿ ಖರೀದಿಸಿದ ಜಾನುವಾರುಗಳಿಗೆ ಉಚಿತ ವಿಮೆ, ಡೇರಿ ರೈತರಿಗೆ ಮಾಸಿಕ ಪಿಂಚಣಿ,

ಇದನ್ನೂ ಓದಿ: Chikkaballapur News: ಸಾಧು ಮಠದಲ್ಲಿ ದತ್ತಾತ್ರೇಯ ಜಯಂತಿ ಸಂಭ್ರಮ : 66ನೇ ವರ್ಷದ ಪೂಜೆಗೆ ಹರಿದು ಬಂದ ಭಕ್ತಸಮೂಹ

ಅಂದಾಜು ವೆಚ್ಚ: ವಾರ್ಷಿಕ ೧೦,೦೦೦ ಕೋಟಿ, ಹವಾಮಾನದ ವೈಪರೀತ್ಯದಿಂದ ಜಾನುವಾರುಗಳ ಮೇಲೆ ಆಗುವ ಪರಿಣಾಮ, ಬೆಲೆ ಏರಿಳಿತ, ಹೆಚ್ಚುವ ವೆಚ್ಚಗಳು ಮತ್ತು ಸಾಮಾಜಿಕ ಭದ್ರತೆಯ ಸವಾಲುಗಳನ್ನು ಈ ಮಸೂದೆ ಪರಿಹರಿಸುತ್ತದೆ ಎಂದರು.

೨. ರಾಷ್ಟ್ರೀಯ ಪುಷ್ಪಕೃಷಿ ಮಂಡಳಿ ಮಸೂದೆ, ೨೦೨೪

ಭಾರತದ ಹೂವಿನ ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಈ ಮಸೂದೆ ನೆರವಾಗುತ್ತದೆ. ಹೆಚ್ಚಿನ ಮೌಲ್ಯದ ಹೂವು ಉತ್ಪಾದನೆ ಮತ್ತು ರಫ್ತು ಹೆಚ್ಚಿಸಿ ದೇಶವನ್ನು ಹೂ ಮಾರುಕಟ್ಟೆಯ ಜಾಗತಿಕ ಕೇಂದ್ರವಾಗಿ ಮಾಡಲು ಇದು ಉತ್ತೇಜನ ನೀಡುತ್ತದೆ.

ಪ್ರಮುಖ ಅಂಶಗಳು
ರಾಷ್ಟ್ರೀಯ ಪುಷ್ಪಕೃಷಿ ಮಂಡಳಿಯ ರಚನೆ. ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಪ್ರಧಾನ ಕಚೇರಿ ಸ್ಥಾಪನೆ, ದೇಶದ ವಿವಿಧೆಡೆ ಪ್ರಾದೇಶಿಕ ಕಚೇರಿಗಳು. ವೈಜ್ಞಾನಿಕ ಕೃಷಿಗೆ ಒತ್ತು, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಅಭಿವೃದ್ಧಿ, ರಫ್ತು ಪ್ರಮಾಣೀಕರಣಕ್‌ಕೆ ಸಹಾಯ, ಸಂಶೋಧನೆ ಮತ್ತು ಬೆಲೆ ಶಿಫಾರಸು, ರಾಷ್ಟ್ರೀಯ ಪುಷ್ಪಕೃಷಿ ಮಂಡಳಿ ನಿಧಿಯ ರಚನೆ

ಅಂದಾಜು ವಾರ್ಷಿಕ ವೆಚ್ಚ: ೧,೫೦೦ ಕೋಟಿ, ಒಂದು ಬಾರಿ ವೆಚ್ಚ: ೫೦ ಕೋಟಿ ಭಾರತವು ಈಗಾಗಲೇ ೭೧೭.೮೩ ಕೋಟಿ ಮೌಲ್ಯದ ಸುಮಾರು 19677 ಮೆಟ್ರಿಕ್ ಟನ್ ಪುಷ್ಪ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ. ಈ ಮಸೂದೆಯು ಉತ್ಪಾದನಾ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಈ ಕುರಿತು ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, "ನಮ್ಮ ಹೈನುಗಾರರು ಮತ್ತು ಹೂವು ಬೆಳೆಗಾರರು ಗ್ರಾಮೀಣ ಭಾರತದ ಬೆನ್ನೆಲುಬಾಗಿದ್ದಾರೆ. ಈ ಮಸೂದೆಗಳು ಅವರ ಆದಾಯವನ್ನು ಭದ್ರಪಡಿಸಿ, ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಹೊಸ ಆರ್ಥಿಕ ಅವಕಾಶಗಳನ್ನು ನೀಡು ತ್ತದೆ. ಸರಿಯಾದ ಸಾಂಸ್ಥಿಕ ಚೌಕಟ್ಟು ನೀಡುವುದರ ಮೂಲಕ, ಭಾರತವು ಪುಷ್ಪಕೃಷಿಯಲ್ಲಿ ಜಾಗತಿಕ ನಾಯಕನಾಗಬಹುದು. ಹಾಗೆಯೇ ಪ್ರತಿ ಹೈನುಗಾರರು ಸಾಮಾಜಿಕ ಭದ್ರತೆ ಮತ್ತು ಘನತೆಯನ್ನು ಪಡೆಯಬಹುದು" ಎಂದು ತಿಳಿಸಿದ್ದಾರೆ.

ರೈತರ ಕಲ್ಯಾಣ, ಗ್ರಾಮೀಣ ಉದ್ಯಮಶೀಲತೆ ಮತ್ತು ಭಾರತದ ಕೃಷಿ ಪರಿವರ್ತನೆಯ ವಿಚಾರದಲ್ಲಿ ಸಂಸದ ಡಾ.ಕೆ.ಸುಧಾಕರ್ ಅವರ ಬದ್ಧತೆಯನ್ನು ಈ ಎರಡೂ ಮಸೂದೆಗಳು ಪ್ರತಿಬಿಂಬಿಸುತ್ತವೆ.