12th International Yoga Day: ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನ : ಯೋಗಗುರು ಶ್ರೀಮತಿ ಸುನೀತಾ
ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಯೋಗ ಮಹತ್ವದ್ದಾಗಿದೆ. ಯೋಗ ಮತ್ತು ಪ್ರಾಣಾ ಯಾಮವು ಒತ್ತಡ, ಆತಂಕ ಹಾಗೂ ಖಿನ್ನತೆಯನ್ನು ಕಡಿಮೆ ಮಾಡಲು ನೆರವಾಗುತ್ತದೆ. ಏಕಾಗ್ರತೆ, ನೆನಪಿನ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಉತ್ತಮ ಫಲಿತಾಂಶ ನೀಡುತ್ತದೆ
ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು ಪ್ರತಿಯೊಬ್ಬರೂ ಕೂಡ ನಿತ್ಯವೂ ಯೋಗಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಪರಿವರ್ತನ ಯೋಗ ಸಂಸ್ಥೆಯ ನಿರ್ದೇಶಕಿ ಹಾಗೂ ಯೋಗಗುರು ಶ್ರೀಮತಿ ಸುನೀತಾ ಹೇಳಿದರು -
ಚಿಕ್ಕಬಳ್ಳಾಪುರ: ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು ಪ್ರತಿಯೊಬ್ಬರೂ ಕೂಡ ನಿತ್ಯವೂ ಯೋಗಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಪರಿವರ್ತನ ಯೋಗ ಸಂಸ್ಥೆಯ ನಿರ್ದೇಶಕಿ ಹಾಗೂ ಯೋಗಗುರು ಶ್ರೀಮತಿ ಸುನೀತಾ ಹೇಳಿದರು.
ನಗರದ ಹೊರವಲಯದ ಅಗಲಗುರ್ಕಿಯ ಬಿಜಿಎಸ್ ಇಂಗ್ಲಿಷ್ ಶಾಲೆಯಲ್ಲಿ ನಡೆದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ(12th International Yoga Day)ಯಲ್ಲಿ ಭಾಗವಹಿಸಿ ಮಾತನಾಡಿದರು.
ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿ ಕೊಳ್ಳಬೇಕು ಎಂದು ಹೇಳಿದರು.
ಯೋಗವು ಭಾರತದ ಪುರಾತನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದ್ದು, ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಸಮಗ್ರ ಜೀವನ ಪದ್ಧತಿಯಾಗಿದೆ. ಇಂದಿನ ವೇಗದ ಜೀವನಶೈಲಿಯಲ್ಲಿ ಯೋಗಾಭ್ಯಾಸವು ಆರೋಗ್ಯಕರ ಜೀವನಕ್ಕೆ ಅತ್ಯಂತ ಅಗತ್ಯವಾಗಿದೆ ಎಂದರು.
ಇದನ್ನೂ ಓದಿ: Yoga Day celebration: ಪ್ರೆಸ್ ಕ್ಲಬ್ ನಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ
ನಿಯಮಿತ ಯೋಗಾಭ್ಯಾಸದಿಂದ ದೈಹಿಕ ಆರೋಗ್ಯ ಉತ್ತಮವಾಗುತ್ತದೆ. ದೇಹದ ಸ್ನಾಯುಗಳು ಬಲಗೊಳ್ಳುವುದರ ಜೊತೆಗೆ ರಕ್ತಸಂಚಾರ ಸುಧಾರಿಸಿ, ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ವಿವಿಧ ಜೀವನಶೈಲಿ ಸಂಬಂಧಿತ ಕಾಯಿಲೆಗಳನ್ನು ತಡೆಗಟ್ಟುವಲ್ಲಿಯೂ ಯೋಗ ಸಹಕಾರಿ ಎಂದು ತಿಳಿಸಿದರು.
ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಯೋಗ ಮಹತ್ವದ್ದಾಗಿದೆ. ಯೋಗ ಮತ್ತು ಪ್ರಾಣಾ ಯಾಮವು ಒತ್ತಡ, ಆತಂಕ ಹಾಗೂ ಖಿನ್ನತೆಯನ್ನು ಕಡಿಮೆ ಮಾಡಲು ನೆರವಾಗುತ್ತದೆ. ಏಕಾಗ್ರತೆ, ನೆನಪಿನ ಶಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಉತ್ತಮ ಫಲಿತಾಂಶ ನೀಡುತ್ತದೆ ಎಂದರು.
ಶಾಲೆಯ ಪ್ರಾಂಶುಪಾಲರಾದ ಮೋಹನ್ ಕುಮಾರ್ ಡಿ.ಸಿ. ಮಾತನಾಡಿ, ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡಿದರೆ ಏಕಾಗ್ರತೆ, ನೆನಪಿನ ಶಕ್ತಿ ಮತ್ತು ಶೈಕ್ಷಣಿಕ ಸಾಧನೆ ಹೆಚ್ಚಲು ಸಹಕಾರಿ ಯಾಗುತ್ತದೆ ಎಂದು ತಿಳಿಸಿದರು. ಯೋಗವನ್ನು ವಿಶ್ವ ಮಟ್ಟದಲ್ಲಿ ಜನಪ್ರಿಯಗೊಳಿಸಿರುವುದು ಭಾರತದ ಹೆಮ್ಮೆ ಎಂದರು.
ಯೋಗವು ಕೇವಲ ವ್ಯಾಯಾಮವಲ್ಲ; ಅದು ಶಿಸ್ತು, ಆತ್ಮನಿಯಂತ್ರಣ ಮತ್ತು ಸಕಾರಾತ್ಮಕ ಚಿಂತನೆ ಗಳನ್ನು ಬೆಳೆಸುವ ಜೀವನ ವಿಧಾನವಾಗಿದೆ. ಪ್ರತಿದಿನ ಸ್ವಲ್ಪ ಸಮಯ ಯೋಗಾಭ್ಯಾಸ ಮಾಡುವು ದರಿಂದ ಆರೋಗ್ಯಕರ, ಸಂತೋಷಕರ ಮತ್ತು ಸಮತೋಲನಯುತ ಜೀವನವನ್ನು ನಡೆಸಬಹುದು ಯೋಗದ ಮಹತ್ವ ಸಾರಿದರು.
ಸುಮಾರು 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು ಹಾಗೂ ವ್ಯಾಯಾಮ ಗಳನ್ನು ಪ್ರದರ್ಶಿಸಿ ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದರು.
ಶಿಕ್ಷಣ ತಜ್ಞರು ಹಾಗೂ ಕೌನ್ಸಿಲರ್ ಕಲಾವತಿ ಕೆ.ಆರ್. ಯೋಗದ ಆರೋಗ್ಯಕರ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು