ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಜೂ.27ಕ್ಕೆ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಜಿ.ಪ್ರಭು

ಜೂ.27ರಂದು ಬಿ.ಬಿ ರಸ್ತೆಯ ರಂಗನಾಥಸ್ವಾಮಿ ದೇವಾಲಯದ ಮುಂಭಾಗದಿಂದ ಕನ್ನಡ ಭವನ ದವರೆಗೆ ಪಲ್ಲಕ್ಕಿ ಮತ್ತು ಜಾನಪದ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಮೆರ ವಣೆಗೆ ಮಧ್ಯದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಮುಂಭಾಗದಲ್ಲಿರುವ ಶ್ರೀ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.

27ಕ್ಕೆ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಇದೇ ಜೂ.27ರಂದು ನಗರದ ಕನ್ನಡ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಸಂಭ್ರಮ ಸಡಗರದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಿಳಿಸಿದರು. -

Profile
Ashok Nayak Jun 19, 2026 10:09 PM

ಚಿಕ್ಕಬಳ್ಳಾಪುರ: ಇದೇ ಜೂ.27ರಂದು ನಗರದ ಕನ್ನಡ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಸಂಭ್ರಮ ಸಡಗರದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜೂ.27ರಂದು ಬಿ.ಬಿ ರಸ್ತೆಯ ರಂಗನಾಥಸ್ವಾಮಿ ದೇವಾಲಯದ ಮುಂಭಾಗದಿಂದ ಕನ್ನಡ ಭವನದವರೆಗೆ ಪಲ್ಲಕ್ಕಿ ಮತ್ತು ಜಾನಪದ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯ ಲಿದೆ. ಮೆರವಣೆಗೆ ಮಧ್ಯದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದ ಮುಂಭಾಗದಲ್ಲಿ ರುವ ಶ್ರೀ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಆ ನಂತರ ವೇದಿಕೆ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರದಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಮಾಡಲಾಗುವುದು.

ಇದನ್ನೂ ಓದಿ: Chinthamani News: ಕೈವಾರದಲ್ಲಿ ಆರಾಧನೆ ಪ್ರಯುಕ್ತ ಹೋಮ

ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ಧತೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಕಲಾತಂಡಗಳೊAದಿಗೆ ಮೆರವಣಿಗೆ, ಸಾಧಕರ ಆಯ್ಕೆ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಇಲಾಖಾವಾರು ಕಾರ್ಯಭಾರ ಹಂಚಿಕೆ ಮಾಡಿ ಜವಾಬ್ದಾರಿ ವಹಿಸಿದರು. ಜಯಂತ್ಯೋತ್ಸವಕ್ಕೆ ಯಾವುದೇ ಲೋಪ ವಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಂಬಂಧ ಪಟ್ಟ ಜಿಲ್ಲಾ ಮತ್ತು ತಾಲೂಕು  ಮಟ್ಟದ ಅಧಿಕಾರಿಗಳಿಗೆ ನೀಡಿದರು.

ಜಿಲ್ಲೆಯ ಸಮಸ್ತ ನಾಗರಿಕರು, ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ರೈತಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ರಾಜ್ಯ ಬೀಜ ನಿಗಮಗದ ಅಧ್ಯಕ್ಷ ಎಂ. ಆಂಜಿನಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷ ಎನ್. ರಮೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ, ತಾಲ್ಲೂಕು ಒಕ್ಕಲಿಗರ ಸಂಘ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ, ಸಮುದಾಯದ ಮುಖಂಡರಾದ ಕೆ.ವಿ.ನಾಗರಾಜ್, ಗೋಪಾಲಗೌಡ ಕಲ್ವಮಂಜಲಿ, ಕ್ರೀಡಾಪಟು ಮಂಚನಬೆಲೆ ಶ್ರೀನಿವಾಸ್, ಚಿನ್ನಪ್ಪರೆಡ್ಡಿ, ವೈ.ಎಲ್.ರಾಮಚಂದ್ರರೆಡ್ಡಿ, ಜನಾರ್ಧನ್ ಮೂರ್ತಿ ಹಾಗೂ ಒಕ್ಕಲಿಗ ಸಮುದಾಯ ದ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.