ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಅಪಘಾತದಲ್ಲಿ ಬಾಗೇಪಲ್ಲಿಯ ಪತ್ರಕರ್ತ ನರಸಿಂಹಮೂರ್ತಿ ಸಾವು

Bagepalli News: ಬಾಗೇಪಲ್ಲಿ ತಾಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿಯ ಮಾಡಪ್ಪಲ್ಲಿ ಗ್ರಾಮದ ನಿವಾಸಿ ನರಸಿಂಹಮೂರ್ತಿ ಬಾಗೇಪಲ್ಲಿ ತಾಲೂಕು ವಿಜಯ ಕರ್ನಾಟಕ ದಿನಪತ್ರಿಕೆ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಬಾಗೇಪಲ್ಲಿ ಗೂಳೂರು ಮಾರ್ಗದ ಪೋತೆಪಲ್ಲಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಇವರು ಮೃತಪಟ್ಟಿದ್ದಾರೆ.

Road Accident: ಅಪಘಾತದಲ್ಲಿ ಬಾಗೇಪಲ್ಲಿಯ ಪತ್ರಕರ್ತ ನರಸಿಂಹಮೂರ್ತಿ ಸಾವು

-

Prabhakara R Prabhakara R Sep 21, 2025 7:59 PM

ಬಾಗೇಪಲ್ಲಿ: ಬಾಗೇಪಲ್ಲಿ ಗೂಳೂರು ಮಾರ್ಗದ ಪೋತೆಪಲ್ಲಿ ಕ್ರಾಸ್ ಬಳಿ ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪತ್ರಕರ್ತ ಎಂ.ಎಲ್.ನರಸಿಂಹಮೂರ್ತಿ (38) ಮೃತಪಟ್ಟಿದ್ದಾರೆ. ಪ್ರಜಾವಾಣಿ, ಪಬ್ಲಿಕ್ ನ್ಯೂಸ್ ಆ್ಯಪ್‌ನಲ್ಲಿ ಕಾರ್ಯ ನಿರ್ವಹಿಸಿದ್ದ ಇವರು ಪ್ರಸ್ತುತ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಬಾಗೇಪಲ್ಲಿ ಗೂಳೂರು ಮಾರ್ಗ ರಸ್ತೆಯ ಪೋತೆಪಲ್ಲಿ ಕ್ರಾಸ್ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನರಸಿಂಹಮೂರ್ತಿ ಅವರ ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

ಬಾಗೇಪಲ್ಲಿ ತಾಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿಯ ಮಾಡಪ್ಪಲ್ಲಿ ಗ್ರಾಮದ ನಿವಾಸಿ ನರಸಿಂಹಮೂರ್ತಿ ಬಾಗೇಪಲ್ಲಿ ತಾಲೂಕು ವಿಜಯ ಕರ್ನಾಟಕ ದಿನಪತ್ರಿಕೆ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ಪತ್ನಿ, ನಾಲ್ಕು ವರ್ಷದ ಗಂಡು ಮಗು, ಆರು ತಿಂಗಳ ಹೆಣ್ಣು ಮಗು ಇದೆ. ಪತ್ರಕರ್ತ ನರಸಿಂಹಮೂರ್ತಿಯ ಆಕಸ್ಮಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಾಗೇಪಲ್ಲಿಯ ಸಾರ್ವಜನಿಕ ಆಸ್ಪತ್ರೆ ಬಳಿ ಜಮಾಯಿಸಿದ ಪೋಷಕರು, ಪತ್ನಿ ಹಾಗೂ ಬಂಧು ಬಳಗದ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಇವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಬಾಗೇಪಲ್ಲಿ ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡ ಬಂದ ಕ್ಯಾಂಟರ್ ಚಾಲಕ ಎದುರುಗಡೆ ದಿಕ್ಕಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗಡೆ ಬಿದ್ದ ನರಸಿಂಹಮೂರ್ತಿ ಮೇಲೆ ವಾಹನ ಹರಿದಿದೆ ಎನ್ನಲಾಗಿದ್ದು ಹೆಲ್ಮೆಟ್ ಛಿಧ್ರವಾಗಿ ತಲೆ ಭಾಗಕ್ಕೆ ತೀವ್ರ ಗಾಯವಾಗಿದ್ದರಿಂದ ಸ್ಥಳದಲ್ಲಿಯೇ ಪ್ರಾಣಹೋಗಿದೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ವಾಹನವನ್ನು ವೇಗವಾಗಿ ಚಲಾಯಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತಕ್ಕೆ ಕಾರಣವಾಗಿರುವ ಕ್ಯಾಂಟರ್ ಚಾಲಕನ ವಿರುದ್ದ ಕ್ರಮಜರುಗಿಸುವಂತೆ ಪಾಲಕರು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ಕ್ಯಾಂಟರ್ ವಾಹನ ಹಾಗೂ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.

ಕುರಿ ಮೇಯಿಸಿಕೊಂಡು ಜೀವನ ಸಾಗಿಸುವ ಬಡ ಕುಟುಂಬದ ಪತ್ರಕರ್ತ ನರಸಿಂಹಮೂರ್ತಿ ವಿಜಯ ಕರ್ನಾಟಕ ದಿನಪತ್ರಿಕೆ ವರದಿಗಾರನಾಗಿ ಹಾಗೂ ಪತ್ರಿಕಾ ವಿತರಕನಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಭಾನುವಾರ ಬೆಳಗಿನ ಜಾವ ಪತ್ರಿಕೆ ವಿತರಣೆ ಮಾಡಲು ಬಾಗೇಪಲ್ಲಿಗೆ ಬರುತ್ತಿದ್ದ ವೇಳೆ ರಸ್ತೆ ಅಪಘಾತ ನಡೆದಿದೆ.

ಈ ಸುದ್ದಿಯನ್ನೂ ಓದಿ | Nelamangala News: ನೆಲಮಂಗಲದಲ್ಲಿ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಘಟನಾ ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣ ರೆಡ್ಡಿ, ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ, ಪತ್ರಕರ್ತರು, ಹೋರಾಟಗಾರರು, ಶಿಕ್ಷಣ ಇಲಾಖೆ ಸಿಬ್ಬಂದಿ ವರ್ಗದವರು ಆಗಮಿಸಿ ಸಂತಾಪ ಸೂಚಿಸಿದ್ದಾರೆ.