NAREGA: ನರೇಗಾ ಯೋಜನೆಯ ವಿವಿಧ ಕಾಮಗಾರಿಗಳ ವೀಕ್ಷಣೆ: ಉಪಕಾರ್ಯದರ್ಶಿ ಅತೀಕ್ ಪಾಷ
ತಾಲೂಕಿನ ನಕ್ಕಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಟನಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ

ಗೌರಿಬಿದನೂರು : ಗೌರಿಬಿದನೂರು ತಾಲ್ಲೂಕಿನ ನಕ್ಕಲಹಳ್ಳಿ ಮತ್ತು ಹುದುಗೂರು ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತೀಕ್ ಪಾಷ ಅವರು ಭೇಟಿ ನೀಡಿ ನಿರ್ಮಾಣ ಹಂತದ ಗ್ರಾಮ ಪಂಚಾಯತಿ ಕಟ್ಟಡವನ್ನು ಪರಿಶೀಲಿಸಿದರು.
ತಾಲೂಕಿನ ನಕ್ಕಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಟನಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಹಾಜರಾತಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದರು ಹಾಗೂ ನರೇಗಾ ಯೋಜನೆಯಲ್ಲಿ ನಿರ್ಮಾಣ ಮಾಡಿರುವ ಶಾಲಾ ಕಾಂಪೌAಡ್, ಶೌಚಾಲಯ, ಚರಂಡಿ ಕಾಮಗಾರಿಯನ್ನು ವೀಕ್ಷಿಸಿದರು.
ಆ ನಂತರ ಹುದುಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳು ಹಾಗೂ ಪಿ.ಆರ್.ಇ.ಡಿ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ಶಾಲಾ ಕಟ್ಟಡದ ರೂಫಿಂಗ್ ಹಾಗೂ ನರೇಗಾ ಯೋಜನೆಯಡಿ ನಿರ್ಮಿಸುತ್ತಿರುವ ಶೌಚಾಲಯ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಎಡಿಪಿಸಿ ಹರೀಶ್, ಸಹಾಯಕ ನಿರ್ದೇಶಕ (ಗ್ರಾ.ಉ) ಕರಿಯಪ್ಪ. ಪಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಪಾಪಣ್ಣ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಾಜು.ಕೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಎ.ಆರ್, ತಾಲ್ಲೂಕು ನರೇಗಾ ಸಿಬ್ಬಂದಿ ಸುಜಯ್, ಅನಿತ, ರಾಜೇಶ್, ಶಿವಕುಮಾರ್, ಬುರಾನ್ ಖಾನ್ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ರವರು ಹಾಜರಿದ್ದರು.