ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Salute to Nari Shakti: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಬಿಸಿಯೂಟ ನೌಕರರ ಅ.13ರಂದು ‘ನಾರಿ ಶಕ್ತಿ ನಮನ’ ಕಾರ್ಯಕ್ರಮ

ಸಮಾಜದ ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ನಗು ಮೂಡಿಸುವುದು, ಆತ್ಮವಿಶ್ವಾಸ ತುಂಬುವುದು ತಮ್ಮ ಸಮಾಜಮುಖಿ ಕಾರ್ಯಕ್ರಮಗಳ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಭಾವನೆಗಳನ್ನು ತುಂಬುವುದಿಲ್ಲ. ಇತರರೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಂದ ಪ್ರೇರಣೆ ಪಡೆದು ಜನರಿಗೆ ಅನುಕೂಲವಾಗುವ ಕಾರ್ಯಗಳನ್ನು ಕೈಗೊಳ್ಳಲಿ ಎಂದರು.

ಚಿಕ್ಕಬಳ್ಳಾಪುರ: ಜನಸೇವೆ ಮಾಡುವಾಗ ಯಾವುದೇ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿ ಕೊಳ್ಳುವುದಿಲ್ಲ. ಮಹಿಳಾ ಸಿಬ್ಬಂದಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ತಮ್ಮ 48ನೇ ಹುಟ್ಟುಹಬ್ಬದ ಅಂಗವಾಗಿ ಅ.13ರಂದು ‘ನಾರಿ ಶಕ್ತಿ ನಮನ’(Salute to Nari Shakti) ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಸಂದೀಪ್ ಬಿ. ರೆಡ್ಡಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿ ಯರು ಹಾಗೂ ಬಿಸಿಯೂಟ ನೌಕರರನ್ನು ತಾಯಿ–ಸಹೋದರಿಯರಂತೆ ಗೌರವಿಸಿ, ಅರಿಶಿನ–ಕುಂಕುಮ, ಭಾಗಿನ ಹಾಗೂ ಕಿರು ಕಾಣಿಕೆ ನೀಡಲಾಗುವುದು. ಅ.13ರಂದು ಸಮಾರಾಸ್ ಹೋಟೆಲ್ ಪಕ್ಕದ ಖಾಲಿ ಜಾಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಮನವಿ

ಸಮಾಜದ ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ನಗು ಮೂಡಿಸುವುದು, ಆತ್ಮವಿಶ್ವಾಸ ತುಂಬುವುದು ತಮ್ಮ ಸಮಾಜಮುಖಿ ಕಾರ್ಯಕ್ರಮಗಳ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಭಾವನೆಗಳನ್ನು ತುಂಬುವುದಿಲ್ಲ. ಇತರರೂ ಇಂತಹ ಸಮಾಜಮುಖಿ ಕಾರ್ಯಕ್ರಮ ಗಳಿಂದ ಪ್ರೇರಣೆ ಪಡೆದು ಜನರಿಗೆ ಅನುಕೂಲವಾಗುವ ಕಾರ್ಯಗಳನ್ನು ಕೈಗೊಳ್ಳಲಿ ಎಂದರು.

ಭಗತ್ ಸಿಂಗ್ ಅವರ ಚಿಂತನೆ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯವೈಖರಿ ಕುರಿತು ಟೀಕಿಸಿದರು.

ಜನಪ್ರತಿನಿಧಿಗಳು ವೈಯಕ್ತಿಕ ಟೀಕೆಗಳಿಗೆ ಬದಲಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ಗ್ರಾಮಗಳಲ್ಲಿ ಸ್ವೀಕರಿಸಿದ ಅರ್ಜಿಗಳು ಹಾಗೂ ದೂರುಗಳಲ್ಲಿ ಎಷ್ಟು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗಿದೆ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.