ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ನವೀನ್ ಕಿರಣ್ ಹುಟ್ಟುಹಬ್ಬ; ಬೀದಿಬದಿ ವ್ಯಾಪಾರಿಗಳಿಗೆ ಹಣ್ಣು, ಬ್ರೆಡ್ ವಿತರಣೆ

ಕೆ.ವಿ.ನವೀನ್ ಕಿರಣ್ ಅವರ 48ನೇ ಹುಟ್ಟುಹಬ್ಬದ ಅಂಗವಾಗಿ ಸಮಾನ ಮನಸ್ಕರ ಪರಿಸರ ಸಂರಕ್ಷಣೆ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಏಳು ದಿನಗಳ ಸಮಾಜ ಸೇವಾ ಸಪ್ತಾಹದ ಎರಡನೇ ದಿನ ಬೀದಿಬದಿ ವ್ಯಾಪಾರಿಗಳಿಗೆ ಬ್ರೆಡ್ ಹಾಗೂ ಹಣ್ಣುಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.

ಚಿಕ್ಕಬಳ್ಳಾಪುರ: ಕೆ.ವಿ.ನವೀನ್ ಕಿರಣ್ ಅವರ 48ನೇ ಹುಟ್ಟುಹಬ್ಬದ ಅಂಗವಾಗಿ ಸಮಾನ ಮನಸ್ಕರ ಪರಿಸರ ಸಂರಕ್ಷಣೆ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಏಳು ದಿನಗಳ ಸಮಾಜ ಸೇವಾ ಸಪ್ತಾಹದ ಎರಡನೇ ದಿನ ಬೀದಿಬದಿ ವ್ಯಾಪಾರಿಗಳಿಗೆ ಬ್ರೆಡ್ ಹಾಗೂ ಹಣ್ಣುಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಸ್ಲಾಂ ಪಾಷಾ ಮಾತನಾಡಿ, ನವೀನ್ ಕಿರಣ್ ಅವರ ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸು ತ್ತಿರುವುದು ಶ್ಲಾಘನೀಯ. ರಕ್ತದಾನ, ಅನ್ನದಾನ ಹಾಗೂ ಶಿಕ್ಷಣಕ್ಕೆ ನೆರವು ಸೇರಿದಂತೆ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಬಡವರ ಸಂಕಷ್ಟಗಳಿಗೆ ಸ್ಪಂದಿಸುವ ಅವರ ಸೇವಾ ಮನೋಭಾವ ಇನ್ನಷ್ಟು ಜನರಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ: Chikkaballapur News: ಕಾಂಗ್ರೆಸ್‌ನಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು: ಮಂಜುನಾಥ್

ಕೆ.ವಿ. ನವೀನ್ ಕಿರಣ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಗುಂಪುಮರದ ಆನಂದ್ ಮಾತನಾಡಿ, ನವೀನ್ ಕಿರಣ್ ಅವರು ಪ್ರತಿವರ್ಷ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಅನೇಕರಿಗೆ ನೆರವಾಗಿದ್ದಾರೆ. ಬಡವರ ಪಾಲಿನ ಆಶಾಕಿರಣವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕೆ.ಎಸ್. ನಾರಾಯಣಸ್ವಾಮಿ, ಶಿಕ್ಷಕ ಮುರಳಿ ಮೋಹನ್ ರಾಜ್, ಗೋಪಿನಾಥ್, ವೆಂಕಟೇಶ್, ಸೊಣ್ಣಮ್ಮ, ವೆಂಕಟಮ್ಮ, ನಾಗಮಣಿ, ಲಕ್ಷ್ಮೀ, ಗೌರಮ್ಮ, ರೆಡ್ಡಿ, ಸೀನಪ್ಪ, ಮುನಿ ವೆಂಕಟಮ್ಮ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.