ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಶಾಖಾಘಾತ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಎಚ್ಚರಿಗೆ ಅಗತ್ಯ: ಜಿಲ್ಲಾಧಿಕಾರಿ ಜಿ.ಪ್ರಭು ಮನವಿ

ತಾಪಮಾನ ಹಾಗೂ ಮುನ್ಸೂ ಚನೆ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೆಲಸದ ಸ್ಥಳಗಳಲ್ಲಿ ಅಳವಡಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಹಾಗೂ ಸಾಕು ಪ್ರಾಣಿ ಗಳನ್ನು ಬಿಡಬಾರದು. ಪ್ರಯಾಣ ಮಾಡುವ ಸಮಯದಲ್ಲಿ ನೀರನ್ನು ಜೊತೆಯಲ್ಲಿ ಕೊಂಡೊ ಯ್ಯುವುದು ಸೂಕ್ತ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಜಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಜಿ.ಪ್ರಭು

ಚಿಕ್ಕಬಳ್ಳಾಪುರ : ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಶಾಖದ ಹೊಡೆತ (ಹೀಟ್ ವೇವ್ ಸ್ಟೋಕ್) ದಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವ ಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸಲಹೆಗಳನ್ನು ನೀಡಿದೆ.

ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ,ಛತ್ರಿ, ಟೋಪಿ, ಹ್ಯಾಟ್, ಟವಲ್ ಬಳಸಬೇಕು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಮಾಡುವುದು ಒಳ್ಳೆಯದು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು.ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಪ್ರೇರೇಪಣೆ ನೀಡಬೇಕು. ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ, ಎಳನೀರು ಮತ್ತು ಗ್ಲೋಕೋಸ್ (ಓ.ಆರ್.ಎಸ್) ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು.

ಇದನ್ನೂ ಓದಿ: Chikkaballapur News: ಸಾಲ ಸೌಲಭ್ಯಗಳ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ಬಹಳ ವಿಳಂಬ ಮತ್ತು ನಿರ್ಲಕ್ಷ ಧೋರಣೆ ಸಹಿಸಲ್ಲ : ಡಾ. ಎನ್ ಭಾಸ್ಕರ್

ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತ ರಿಸಬೇಕು. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆ ಹೊಂದಿರು ವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್ ಗಳ ಮಧ್ಯೆ ಇಡಬಹುದು.

ಹೀಟ್ ವೇವ್ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಪ್ರಾಣಿ, ಪಕ್ಷಿಗಳನ್ನು ನೆರಳನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಇಡಬೇಕು.ತಾಪಮಾನ ಹಾಗೂ ಮುನ್ಸೂ ಚನೆ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೆಲಸದ ಸ್ಥಳಗಳಲ್ಲಿ ಅಳವಡಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಹಾಗೂ ಸಾಕು ಪ್ರಾಣಿಗಳನ್ನು ಬಿಡಬಾರದು. ಪ್ರಯಾಣ ಮಾಡುವ ಸಮಯದಲ್ಲಿ ನೀರನ್ನು ಜೊತೆಯಲ್ಲಿ ಕೊಂಡೊಯ್ಯುವುದು ಸೂಕ್ತ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಜಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.