ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅ.26ಕ್ಕೆ ನೂತನ ಟ್ರಸ್ಟ್ ಕಛೇರಿ ಲೋಕಾರ್ಪಣೆ: ಸಮುದಾಯದ ಏಳಿಗೆಗೆ ಮಹರ್ಷಿ ವಾಲ್ಮೀಕಿ ನಾಯಕ ಅಭಿವೃದ್ಧಿ ಟ್ರಸ್ಟ್ ಸ್ಥಾಪನೆ

ಸಮುದಾಯದ ಏಳಿಗೆಗಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸ ಲಾಗಿದೆ. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ನೆರವು ನೀಡುವುದು, ಆರೋಗ್ಯ ಸಂಬಂಧಿತ ಸಹಾಯ ಒದಗಿಸು ವುದು, ಸಾಮೂಹಿಕ ವಿವಾಹಗಳನ್ನು ಆಯೋಜಿಸುವುದು ಹಾಗೂ ವಿವಿಧ ಸೌಲಭ್ಯಗಳಿಂದ ವಂಚಿತ ರಾದವರಿಗೆ ನೆರವು ನೀಡುವುದು ಟ್ರಸ್ಟ್‌ನ ಪ್ರಮುಖ ಉದ್ದೇಶಗಳಾಗಿವೆ

ಅ.26ಕ್ಕೆ ನೂತನ ಟ್ರಸ್ಟ್ ಕಛೇರಿ ಲೋಕಾರ್ಪಣೆ

-

Profile
Ashok Nayak Oct 24, 2026 11:08 PM

ಚಿಕ್ಕಬಳ್ಳಾಪುರ: ಸಮುದಾಯದ ಸರ್ವಾಂಗೀಣ ಅಭಿವೃದ್ಧಿ, ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ನೆರವು ಹಾಗೂ ಸೌಲಭ್ಯ ವಂಚಿತರಿಗೆ ಸಹಾಯ ಮಾಡುವ ಉದ್ದೇಶದಿಂದ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಅಭಿವೃದ್ಧಿ ಟ್ರಸ್ಟ್ ನೋಂದಣಿ ಮಾಡಲಾಗಿದೆ ಎಂದು ನಿವೃತ್ತ ಸಬ್‌ಇನ್ಸ್‌ಪೆಕ್ಟರ್ ನಂಜುಂಡಯ್ಯ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಮುದಾಯದ ಅಭಿವೃದ್ಧಿಗೆ ಅಗತ್ಯವಾದ ಕಾರ್ಯ ಯೋಜನೆಗಳನ್ನು ರೂಪಿಸಲಾಗಿದ್ದು, ಅ.26ರಂದು ಪೊಲೀಸ್ ಭವನದಲ್ಲಿ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: Chikkaballapur News: ದತ್ತಾತ್ರೇಯ ಮಂದಿರದಲ್ಲಿ ಲೋಕಕಲ್ಯಾಣಾರ್ಥ ಚಂಡಿಕಾಹೋಮ

ಸಮುದಾಯದ ಏಳಿಗೆಗಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸ ಲಾಗಿದೆ. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ನೆರವು ನೀಡುವುದು, ಆರೋಗ್ಯ ಸಂಬಂಧಿತ ಸಹಾಯ ಒದಗಿಸುವುದು, ಸಾಮೂಹಿಕ ವಿವಾಹಗಳನ್ನು ಆಯೋಜಿಸುವುದು ಹಾಗೂ ವಿವಿಧ ಸೌಲಭ್ಯಗಳಿಂದ ವಂಚಿತರಾದವರಿಗೆ ನೆರವು ನೀಡುವುದು ಟ್ರಸ್ಟ್‌ನ ಪ್ರಮುಖ ಉದ್ದೇಶಗಳಾಗಿವೆ ಎಂದು ಹೇಳಿದರು.

ನಾರಾಯಣಸ್ವಾಮಿ ಮಾತನಾಡಿ, ಸಮುದಾಯದ ಅಭಿವೃದ್ಧಿಗಾಗಿ ಸಂಘದೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸಲಾಗುವುದು. ಟ್ರಸ್ಟ್‌ನ ಕಚೇರಿ ಉದ್ಘಾಟನೆ ಕುರಿತು ಸಮುದಾಯದ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಟ್ರಸ್ಟ್ ನ ನೂತನ ಪದಾಧಿಕಾರಿಗಳು: ಟ್ರಸ್ಟ್‌ನ ಅಧ್ಯಕ್ಷರಾಗಿ ನಂಜುಂಡಯ್ಯ, ಕಾರ್ಯದರ್ಶಿಯಾಗಿ ಮಾಜಿ ಸೈನಿಕ ಚಂದ್ರಶೇಖರ್ ಟಿ., ಉಪಾಧ್ಯಕ್ಷರಾಗಿ ಘಂಟಿಗಾನಹಳ್ಳಿ ಶಿವಕುಮಾರ್ ಹಾಗೂ ಖಜಾಂಚಿಯಾಗಿ ಪ್ರಕಾಶ್ ಸಿ. ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಮುನಿಕೃಷ್ಣಪ್ಪ ಮತ್ತು ಮಣಿಕಂಠ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.