ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagepally News: ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ: ಕೆ.ಟಿ.ವೀರಾಂಜನೇಯಲು

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯ ವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರು ಮಾಡಿ. ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು

ಬಾಗೇಪಲ್ಲಿ: ಇಂದು ಪಲ್ಸ್ ಪೋಲಿಯೊ ಮುಕ್ತ ಭಾರತದ ಅಂಗವಾಗಿ ಭಾರತ ಸರಕಾರದ ವತಿಯಿಂದ ಪ್ರತಿ ವರ್ಷ ನಡೆಯುವ ಪಲ್ಸ್ ಪೋಲಿಯೊ ಅಭಿಯಾನವನ್ನು ಪಟ್ಟಣದ ಜ್ಞಾನ ದೀಪ್ತಿ ಶಾಲೆಯ ಮುಖ್ಯಸ್ಥ ಕೆ.ಟಿ.ವೀರಾಂಜನೇಯಲು ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವುದ ರೊಂದಿಗೆ ಚಾಲನೆ ನೀಡಿದರು.

ಇದನ್ನೂ ಓದಿ: Bagepally News: ಪೋಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು: ಮಣಿಕಂಠ ಪ್ರಿಂಟರ್ಸ್ ನ ಮಾಲೀಕರಾದ ಬಿ.ಜಿ. ಶ್ರೀನಿವಾಸ ಜಿನ್ನಿ

ತದನಂತರ ಮಾತನಾಡಿ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯ ವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರು ಮಾಡಿ. ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದರು.

ಪಲ್ಸ್ ಪೋಲಿಯೊ ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರ ಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ, ಶಾಲೆಗಳಲ್ಲಿ/ಅಂಗನ ವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ ಪೋಷಕರು ತಪ್ಪದೇ ತಮ್ಮ 5 ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಹರೀಶ್, ಮಂಜುಳಾ ,ಹಾಗೂ ಮಕ್ಕಳು ಹಾಜರಿದ್ದರು.