ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

CHIMUL: ನಷ್ಟದಲ್ಲಿದ್ದರೂ ರೈತರ ಸೌಲಭ್ಯ ಕಡಿತವಿಲ್ಲ; ಸ್ವಂತ ಪ್ಯಾಕಿಂಗ್ ಘಟಕ ಸ್ಥಾಪನೆಗೆ ಕ್ರಮ: ಚಿಮುಲ್ ಒಕ್ಕೂಟ ಎಂದಿಗೂ ರೈತರ ಪರ: ಕೃಷ್ಣಾರೆಡ್ಡಿ

ಒಕ್ಕೂಟದ ಆಡಳಿತ ಮಂಡಳಿಯಲ್ಲಿರುವ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ನಿರ್ದೇಶ ಕರು ರೈತರ ಕುಟುಂಬದಿಂದ ಬಂದವರಾಗಿರುವುದರಿಂದ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪಶು ಆಹಾರದ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ ಅಧಿಕಾರಿಗಳು ಹಾಗೂ ಪಶುವೈದ್ಯರ ತಂಡದಿಂದ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ

ಚಿಮುಲ್ ಒಕ್ಕೂಟ ಎಂದಿಗೂ ರೈತರ ಪರ: ಕೃಷ್ಣಾರೆಡ್ಡಿ

-

Profile
Ashok Nayak Sep 7, 2026 9:12 PM

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಿಮುಲ್) ಪ್ರಸ್ತುತ ಆರ್ಥಿಕ ನಷ್ಟದಲ್ಲಿದ್ದರೂ ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾರ್ಯನಿರ್ವಹಿಸುತ್ತಿದ್ದು, ರೈತರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕಡಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಚಿಮುಲ್(CHIMUL) ನಿರ್ದೇಶಕ ಕೆ.ಎನ್.ಕೃಷ್ಣಾರೆಡ್ಡಿ ತಿಳಿಸಿದರು.

ನಗರದ ಚಿಮುಲ್ ಶಿಬಿರ ಕಚೇರಿಯಲ್ಲಿ ಕೈವಾರ ಹಾಗೂ ಚೇಳೂರು ಕ್ಷೇತ್ರದ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾದೇಶಿಕ ಸಭೆಯಲ್ಲಿ ಮಾತನಾಡಿದ ಅವರು, ಹಾಲಿನ ದರ, ಪಶು ಆಹಾರದ ಗುಣಮಟ್ಟ, ರೈತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಒಕ್ಕೂಟದ ಪ್ರಸ್ತುತ ಸ್ಥಿತಿಗತಿ ಕುರಿತು ವಿವರಿಸಿದರು.

ಒಕ್ಕೂಟದ ಆಡಳಿತ ಮಂಡಳಿಯಲ್ಲಿರುವ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ನಿರ್ದೇಶಕರು ರೈತರ ಕುಟುಂಬದಿಂದ ಬಂದವರಾಗಿರುವುದರಿಂದ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪಶು ಆಹಾರದ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ ಅಧಿಕಾರಿಗಳು ಹಾಗೂ ಪಶುವೈದ್ಯರ ತಂಡದಿಂದ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ: CHIMUL: ಹಾಲಿನ ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಸಾವಿರಾರು ಹಾಲು ಉತ್ಪಾದಕರ ಪ್ರತಿಭಟನೆ

ಹಿಂದಿನ ಲೆಕ್ಕಪತ್ರದಲ್ಲಿ ಕೆಲವು ಮೊತ್ತಗಳನ್ನು ಲಾಭದ ರೂಪದಲ್ಲಿ ತೋರಿಸಲಾಗಿತ್ತು. ಆದರೆ ಇತ್ತೀಚಿನ ಲೆಕ್ಕಪರಿಶೋಧನಾ ವರದಿಯಲ್ಲಿ ಒಕ್ಕೂಟಕ್ಕೆ ಆರ್ಥಿಕ ನಷ್ಟ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಹಾಲಿನ ಪ್ಯಾಕಿಂಗ್‌ಗಾಗಿ ಹೊರಗಿನ ಘಟಕಗಳನ್ನು ಅವಲಂಬಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ನಷ್ಟವನ್ನು ಕಡಿಮೆ ಮಾಡಿ ಒಕ್ಕೂಟವನ್ನು ಆರ್ಥಿಕವಾಗಿ ಬಲಪಡಿಸುವ ಉದ್ದೇಶದಿಂದ ಸ್ವಂತ ಪ್ಯಾಕಿಂಗ್ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ. ಸುಮಾರು 100 ಕೋಟಿ ರೂಪಾಯಿ ವೆಚ್ಚದ ಯೋಜನೆಯಡಿ ಘಟಕ ಸ್ಥಾಪನೆಗೆ ಚಾಲನೆ ನೀಡಲಾಗಿದ್ದು, ಆರಂಭಿಕ ಹಂತದಲ್ಲಿ 9 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಯಂತ್ರೋಪಕರಣಗಳನ್ನು ತರಿಸಲಾಗುತ್ತಿದೆ. ಘಟಕ ಕಾರ್ಯಾ ರಂಭಿಸಿದ ಬಳಿಕ ಪ್ರತಿದಿನ ಸುಮಾರು 5 ಸಾವಿರದಿಂದ 6 ಸಾವಿರ ಪ್ಯಾಕೆಟ್ ಹಾಲು ಸಂಸ್ಕರಿಸಲು ಸಾಧ್ಯವಾಗಲಿದ್ದು, ದಿನಕ್ಕೆ ಸುಮಾರು 7.5 ಲಕ್ಷ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ ಎಂದರು.

ಈ ಉಳಿತಾಯದಿಂದ ಒಕ್ಕೂಟದ ಸಾಲ ಮರುಪಾವತಿಸುವುದರ ಜತೆಗೆ ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಸೌಲಭ್ಯ ಹಾಗೂ ಸಹಕಾರ ನೀಡಲು ಅನುಕೂಲವಾಗಲಿದೆ ಎಂದು ಕೃಷ್ಣಾರೆಡ್ಡಿ ಹೇಳಿದರು.

ನಿರ್ದೇಶಕರಾದ ಕೆ.ಎನ್. ಅವಲಪ್ಪ, ನಂದನಾಂ ಶ್ರೀರಾಮರೆಡ್ಡಿ ಮಾತನಾಡಿದರು. ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಗೋಪಾಲಕೃಷ್ಣ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಮುನಿನಾರಾಯಣಪ್ಪ, ಮಹೇಶ್, ರಾಜು, ಗೌತಮ್, ಕಾವ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.