MLA K H Puttaswamy Gowda: ರಸ್ತೆ ಕಾಮಗಾರಿಯಲ್ಲಿ ಕಳಪೆಗೆ ಅವಕಾಶವಿಲ್ಲ: ಶಾಸಕ ಪುಟ್ಟಸ್ವಾಮಿಗೌಡ ಎಚ್ಚರಿಕೆ
ಕಳೆದ ಮೂರು ವರ್ಷಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಸುಮಾರು ₹400 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಗ್ರಾಮೀಣ ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇನ್ನೂ ಕೆಲವು ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ₹100 ಕೋಟಿ ಹೆಚ್ಚುವರಿ ಅನುದಾನ ತರಲಾಗುವುದು
-
ಗೌರಿಬಿದನೂರು: ರಸ್ತೆ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಕಳಪೆ ಕಾಮಗಾರಿ ಕಂಡುಬಂದರೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾ ಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K H Puttaswamy Gowda) ಎಚ್ಚರಿಕೆ ನೀಡಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆವರೆಗೆ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದರು.
ಇತ್ತೀಚೆಗೆ ಈ ರಸ್ತೆಯಲ್ಲಿ ಉಂಟಾಗಿದ್ದ ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ವಿಷಯ ಗಮನಕ್ಕೆ ಬಂದ ತಕ್ಷಣವೇ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: MLA K H Puttaswamy Gowda: ರಸ್ತೆ ಕಾಮಗಾರಿಯಲ್ಲಿ ಕಳಪೆಗೆ ಅವಕಾಶವಿಲ್ಲ: ಶಾಸಕ ಪುಟ್ಟಸ್ವಾಮಿಗೌಡ ಎಚ್ಚರಿಕೆ
ಕಳೆದ ಮೂರು ವರ್ಷಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಸುಮಾರು ₹400 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಗ್ರಾಮೀಣ ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇನ್ನೂ ಕೆಲವು ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ₹100 ಕೋಟಿ ಹೆಚ್ಚುವರಿ ಅನುದಾನ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆ ಮಾಜಿ ಸದಸ್ಯ ಕೆ.ಎಸ್.ಅನಂತರಾಜು ಮಾತನಾಡಿ, ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದರು. ರಸ್ತೆಯ ಧೂಳಿನಿಂದ ವ್ಯಾಪಾರಸ್ಥರೂ ಸಂಕಷ್ಟ ಅನುಭವಿಸುತ್ತಿದ್ದರು. ಶಾಸಕರ ಗಮನಕ್ಕೆ ತಂದ ತಕ್ಷಣವೇ ಒಂದೇ ರಾತ್ರಿಯಲ್ಲಿ ರಸ್ತೆ ಡಾಂಬರೀಕರಣ ನಡೆಸಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ರಸ್ತೆ ಬದಿಯ ಅಂಗಡಿ ಮಾಲೀಕರು ಶಾಸಕ ಪುಟ್ಟಸ್ವಾಮಿಗೌಡರನ್ನು ಸನ್ಮಾನಿಸಿ ಅಭಿನಂದಿಸಿದರು.
ಪರಿಶೀಲನೆ ವೇಳೆ ನಗರಸಭೆ ಆಯುಕ್ತ ರಮೇಶ್, ತಾಪಂ ಇಒ ಜಿ.ಕೆ. ಹೊನ್ನಯ್ಯ, ನಗರ ಪೊಲೀಸ್ ಠಾಣೆಯ ಪಿಎಸ್‌ಐ ವರಲಕ್ಷ್ಮಿ, ಮುಖಂಡರಾದ ವೆಂಕಟಾದ್ರಿ, ರಾಮಾಂಜಿನಪ್ಪ ಹಾಗೂ ಸ್ಥಳೀಯ ಅಂಗಡಿ ಮಾಲೀಕರು ಉಪಸ್ಥಿತರಿದ್ದರು.