Chimul Election: ಚಿಮೂಲ್ ಚುನಾವಣೆಗೆ ನಾಮಪತ್ರ ಸಲ್ಲಿಕೆ
ಕಳೆದ ಎರಡು ದಶಕಗಳಿಂದ ಕಾರ್ಯಕರ್ತೆಯಾಗಿ ಪಕ್ಷದ ಸಂಘಟನೆಗಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಈ ಹಿಂದೆ ಎಪಿಎಂಸಿ ಮಾರುಕಟ್ಟೆಯ ಅಧ್ಯಕ್ಷೆಯಾಗಿದ್ದಾಗ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು ಹಾಗೂ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರ ಒತ್ತಾಯದಿಂದ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ
-
ಗೌರಿಬಿದನೂರು: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕರ ಆಯ್ಕೆಗಾಗಿ ನಡೆಯಲಿರುವ ಚುನಾವಣೆಗೆ ಗೌರಿಬಿದನೂರು ಮಹಿಳಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಮುಖಂಡ ರಾದ ಮುನಿಲಕ್ಷ್ಮಮ್ಮ ಪಕ್ಷದ ಮುಖಂಡರೊಡನೆ ತೆರಳಿ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ: Gauribidanur News: ಕೆಎಚ್ಪಿ ಬಣದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಈ ವೇಳೆ ಮಾತನಾಡಿ, ಕಳೆದ ಎರಡು ದಶಕಗಳಿಂದ ಕಾರ್ಯಕರ್ತೆಯಾಗಿ ಪಕ್ಷದ ಸಂಘಟನೆಗಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಈ ಹಿಂದೆ ಎಪಿಎಂಸಿ ಮಾರುಕಟ್ಟೆಯ ಅಧ್ಯಕ್ಷೆಯಾಗಿದ್ದಾಗ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ಪಕ್ಷದ ಕಾರ್ಯಕರ್ತರು ಹಾಗೂ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರ ಒತ್ತಾಯದಿಂದ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದರು.
ಈ ಸಂಧರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮಾಜಿ ಜಿಲ್ಲಾಧ್ಯಕ್ಷ ಎನ್ಎಂ. ರವಿನಾರಾಯಣರೆಡ್ಡಿ, ಜಿಪಂ ಮಾಜಿ ಸದಸ್ಯ ವೇಮಾರೆಡ್ಡಿ, ಭಾರತೀಯ ಜನತಾ ಪಾರ್ಟಿಯ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ರಂಗನಾಥ್, ನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು