ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagepally News: ಶಾಸಕರ ಕರೆ ಸ್ವೀಕರಿಸದ ಅಧಿಕಾರಿ ಅಮಾನತು

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯ ಕ್ರಮಗಳ ಬಗ್ಗೆ ಮಾತನಾಡಲು ಬಿಂದುಮಣಿ ಅವರಿಗೆ ಶಾಸಕರು ಮೂರು ದಿನ ಕರೆ ಮಾಡಿದ್ದಾರೆ. ಆದರೆ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಬಿಂದುಮಣಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಇಲಾಖೆಯನ್ನು ಕೋರಿದ್ದರು.

ಶಾಸಕರ ಕರೆ ಸ್ವೀಕರಿಸದ ಅಧಿಕಾರಿ ಅಮಾನತು

-

Ashok Nayak Ashok Nayak Aug 31, 2025 11:38 PM

ಬಾಗೇಪಲ್ಲಿ: ತಾಲ್ಲೂಕು ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ ಅವರ ಕರೆ ಸ್ವೀಕರಿಸದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದುಮಣಿ ಎಂ.ಎಲ್.ಅವರನ್ನು ಕೆಲಸದಿಂದ ಅಮಾನತು ಗೊಳಿಸಲಾಗಿದೆ.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡಲು ಬಿಂದುಮಣಿ ಅವರಿಗೆ ಶಾಸಕರು ಮೂರು ದಿನ ಕರೆ ಮಾಡಿದ್ದಾರೆ. ಆದರೆ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಬಿಂದುಮಣಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯನ್ನು ಕೋರಿದ್ದರು.

ಇದನ್ನೂ ಓದಿ: Child Marriage: ಬಾಲಕಿಯನ್ನು ವಿವಾಹವಾದ ಗ್ರಾಪಂ ಅಧ್ಯಕ್ಷನ ವಿರುದ್ಧ ಕಾನೂನು ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

'ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸದೆ, ಸರ್ಕಾರಿ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಬೇಜವಾಬ್ದಾರಿ ತೋರಿದ್ದಾರೆ. ಆದ್ದರಿಂದ ಇವರನ್ನು ಅಮಾನತುಗೊಳಿಸುವಂತೆ' ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು, ಇಲಾಖೆಯ ಅಧೀನ ಕಾರ್ಯದರ್ಶಿಗೆ ಪ್ರಸ್ತಾವ ಸಹ ಸಲ್ಲಿಸಿ ದ್ದರು.

ಈ ಪ್ರಸ್ತಾವ ಆಧರಿಸಿ, 'ಬಿಂದುಮಣಿ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಕೆಲಸದಿಂದ ಅಮಾನತುಗೊಳಿಸಲಾಗಿದೆ' ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.