Gudibande News: ಗುಡಿಬಂಡೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಸಂಪ್ರದಾಯಬದ್ದವಾಗಿ ಚಾಲನೆ ನೀಡಿದ ಅಧಿಕಾರಿಗಳು
ರಾಗಿ ಖರೀದಿಗೆ ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ತಾಲೂಕಿನಾದ್ಯಂತ ಈಗಾಗಲೇ 37839 ಕ್ವಿಂಟಲ್ ರಾಗಿ ನೋಂದಣಿಯಾಗಿದ್ದಾರೆ. ದಿನಕ್ಕೆ 1,500 ರಿಂದ 2,000 ಕ್ವಿಂಟಲ್ ರಾಗಿ ಖರೀದಿ ಮಾಡುವ ಗುರಿ ಹೊಂದಲಾಗಿದೆ. ಮುಂದಿನ 40 ದಿನಗಳ ಅವಧಿಯಲ್ಲಿ ನೋಂದಾಯಿತ ಎಲ್ಲಾ ರೈತರಿಂದಲೂ ರಾಗಿ ಖರೀದಿಸಲಾಗುವುದು. ರೈತರ ಅನುಕೂಲಕ್ಕಾಗಿ ಖರೀದಿ ಕೇಂದ್ರಗಳ ಮುಂದೆ ನೋಡಲ್ ಅಧಿಕಾರಿಗಳ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಒಳಗೊಂಡ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ
ತಾಲೂಕಿನ ಬಾಲೇನಹಳ್ಳಿ ಗ್ರಾಮದ ಬಳಿ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರಿ ರಾಗಿ ಖರೀದಿ ಕೇಂದ್ರಕ್ಕೆ ಅಧಿಕೃತವಾಗಿ ಅಧಿಕಾರಿಗಳು ಚಾಲನೆ ನೀಡಿದರು. -
ಗುಡಿಬಂಡೆ: ತಾಲೂಕಿನ ಬಾಲೇನಹಳ್ಳಿ ಗ್ರಾಮದ ಬಳಿ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರಿ ರಾಗಿ ಖರೀದಿ ಕೇಂದ್ರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಬಾರಿ ಸರ್ಕಾ ರವು ಪ್ರತಿ ಕ್ವಿಂಟಲ್ ರಾಗಿಗೆ ರೂ.4,886 ಬೆಂಬಲ ಬೆಲೆಯನ್ನು ನಿಗದಿಪಡಿಸಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇನ್ನೂ ತಹಸೀಲ್ದಾರ್ ಸಿಗ್ಬತ್ತುಲ್ಲಾ ರಾಗಿ ರಾಶಿಗೆ ಪೂಜೆ ನೆರವೇರಿಸಿ ಬಳಿಕ ಮಾತನಾಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತರು ಬೆಳೆದ ರಾಗಿಗೆ ಬೆಂಬಲ ಬೆಲೆ ಯೋಜನೆ ಯಡಿ ಪ್ರತಿ ಕ್ವಿಂಟಲ್ ರಾಗಿಗೆ ರೂ.4886 ಬೆಂಬಲ ಘೋಷಣೆ ಮಾಡಿದೆ. ಆದ್ದರಿಂದ ರೈತರು ಮಧ್ಯವರ್ತಿಗಳ ಅಥವಾ ದಳ್ಳಾಲಿಗಳ ಬಲೆಗೆ ಬೀಳಬಾರದು. ನೇರವಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ರಾಗಿಯನ್ನು ಮಾರಾಟ ಮಾಡಬೇಕು. ಇನ್ನೂ ಖರೀದಿ ಕೇಂದ್ರದ ಅಧಿಕಾರಿಗಳೂ ಸಹ ಮಧ್ಯವರ್ತಿಗಳಿಗೆ ಆಸ್ಪದ ನೀಡದೇ, ನೊಂದಣಿಯಾದ ಅರ್ಹ ರೈತ ರಿಂದ ರಾಗಿ ಖರೀದಿ ಪ್ರಕ್ರಿಯೆ ನಡೆಸಬೇಕು. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಇದನ್ನೂ ಓದಿ: Gudibande News: ವ್ಯಸನಮುಕ್ತಿಯಿಂದ ನೆಮ್ಮದಿಯ ಬದುಕಿನೆಡೆಗೆ: ಧರ್ಮಸ್ಥಳ ಯೋಜನೆಯಿಂದ ವಿಶೇಷ ಅಭಿಯಾನಕ್ಕೆ ಚಾಲನೆ
ಬಳಿಕ ಖರೀದಿ ಕೇಂದ್ರದ ಅಧಿಕಾರಿ ಮಂಜುನಾಥ್ ಮಾತನಾಡಿ, ರಾಗಿ ಖರೀದಿಗೆ ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ತಾಲೂಕಿನಾದ್ಯಂತ ಈಗಾಗಲೇ 37839 ಕ್ವಿಂಟಲ್ ರಾಗಿ ನೋಂದಣಿಯಾಗಿದ್ದಾರೆ. ದಿನಕ್ಕೆ 1,500 ರಿಂದ 2,000 ಕ್ವಿಂಟಲ್ ರಾಗಿ ಖರೀದಿ ಮಾಡುವ ಗುರಿ ಹೊಂದಲಾಗಿದೆ. ಮುಂದಿನ 40 ದಿನಗಳ ಅವಧಿಯಲ್ಲಿ ನೋಂದಾಯಿತ ಎಲ್ಲಾ ರೈತರಿಂದಲೂ ರಾಗಿ ಖರೀದಿಸಲಾಗುವುದು. ರೈತರ ಅನುಕೂಲಕ್ಕಾಗಿ ಖರೀದಿ ಕೇಂದ್ರಗಳ ಮುಂದೆ ನೋಡಲ್ ಅಧಿಕಾರಿಗಳ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಒಳಗೊಂಡ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಅಲ್ಲದೆ, ಕೇಂದ್ರಕ್ಕೆ ಬರುವ ರೈತರಿಗಾಗಿ ಕುಡಿಯುವ ನೀರು, ನೆರಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಸರ್ಕಾರದ ಈ ನೇರ ಖರೀದಿ ಯೋಜನೆಯಿಂದ ರೈತರಿಗೆ ಆರ್ಥಿಕವಾಗಿ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಾಹಿತಿ ಹಂಚಿಕೊಂಡರು.
ಈ ಸಮಯದಲ್ಲಿ ಗುಡಿಬಂಡೆ ಕಂದಾಯ ಇಲಾಖೆಯ ಆಹಾರ ನಿರೀಕ್ಷಕಿ ಪುಷ್ಪಾ, ಖರೀದಿ ಅಧಿಕಾರಿಗಳಾದ ಸಾಗರ್, ಜಯಂತ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ರೈತರು ಹಾಜರಿದ್ದರು.