ಚಿಕ್ಕಬಳ್ಳಾಪುರ: ಹೆಣ್ಣು ಮಕ್ಕಳಿಗೆ ಅವಕಾಶಗಳನ್ನು ನೀಡಿದಾಗ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಪದವಿ, ಸಿಇಟಿ ಸೇರಿದಂತೆ ವಿವಿಧ ಹಂತದ ಕೋರ್ಸುಗಳಲ್ಲಿ ಹೆಣ್ಣುಮಕ್ಕಳೇ ಮೊದಲ ರ‍್ಯಾಂಕ್‌ಗಳನ್ನು ಪಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಜಿ.ಶಿವಶಂಕರೇಗೌಡ ಅಭಿಪ್ರಾಯಪಟ್ಟರು.
ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಇಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಬಾಲ್ಯ ವಿವಾಹ ಮುಕ್ತ ಅಭಿಯಾನ ಹಾಗೂ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಪಿಡುಗು !!
ಹೆಣ್ಣುಮಕ್ಕಳಿಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ಸಮಾಜ ನೀಡಬೇಕು. ಹೆಣ್ಣು ಮಕ್ಕಳು ಎಲ್ಲಾ ರಂಗಗಳಲ್ಲಿಯೂ ಉತ್ತಮ ಜ್ಞಾನ ಹೊಂದುವ ಜೊತೆಗೆ ಉತ್ತಮ ಸಾಧನೆಗಳನ್ನು ಮಾಡುತ್ತಿರು ವುದು ಆರೋಗ್ಯಕರ ಬೆಳವಣಿಗೆ. ಹೆಣ್ಣುಮಕ್ಕಳು ವಿವಿಧ ರಂಗಗಳಲ್ಲಿ ತಮ್ಮ ಪ್ರಾತಿನಿಧ್ಯ ಸಾಧಿಸು ತ್ತಿರುವ ಇಂದಿನ ದಿನಗಳಲ್ಲಿಯೂ ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳು ಜೀವಂತ ವಾಗಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಿದೆ. ಇನ್ನಾದರೂ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸ್ವಾತಂತ್ರ‍್ಯಕ್ಕೆ ಒತ್ತು ನೀಡಿ ಅವರನ್ನು ಸಮಾಜದ ಪ್ರಧಾನವಾಹಿನಿಗೆ ತರಬೇಕು. ಬಾಲ್ಯವಿವಾಹ ದಂತ ಅನಿಷ್ಟ ಪದ್ದತಿಗಳಿಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.
ಪ್ರಕರಣ ದಾಖಲಿಸಿ !!!
ರಾಜ್ಯದಲ್ಲಿ 34 ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಕಚೇರಿಗಳು ಕಾರ್ಯ ನಿರ್ವಹಿಸು ತ್ತಿದ್ದು, ಈ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಒಂದು ಕಚೇರಿಯಿದೆ. ಆದರೆ, ಚಿಕ್ಕಬಳ್ಳಾಪುರ ಆಯೋಗದ ಕಚೇರಿಗೆ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ. ಆಯೋಗದ ಜಿಲ್ಲಾ ಕಚೇರಿಗಳಲ್ಲಿ ಪ್ರಕರಣ ದಾಖಲಿಸಿ ಗ್ರಾಹಕರು ಸೂಕ್ತ ನ್ಯಾಯ ಮತ್ತು ಪರಿಹಾರ ಪಡೆದುಕೊಳ್ಳು ವುದು ಸುಲಭ ಎಂದರು.
2ನೇ ಸ್ಥಾನದಲ್ಲಿದೆ!!
ರಾಜ್ಯ ಗ್ರಾಹಕರ ವೇದಿಕೆಗಳಲ್ಲಿ ಬೆಳೆ ವಿಮೆ, ಜೀವವಿಮೆ, ವೈದ್ಯಕೀಯ ನಿರ್ಲಕ್ಷ್ಯ ಸೇರಿದಂತೆ ವಿವಿಧ ವಿಮಾ ಕಂಪನಿಗಳ ವಿರುದ್ಧ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಕಳೆದ 7 ತಿಂಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದು, ಆ ಸಂದರ್ಭ ದಲ್ಲಿ ರಾಜ್ಯ ಆಯೋಗವು ದೇಶದ 28 ರಾಜ್ಯಗಳ ಪೈಕಿ 28ನೇ ಸ್ಥಾನದಲ್ಲಿತ್ತು. ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲು ಒತ್ತು ನೀಡಿದ ಪರಿಣಾಮ ಈಗ ಕರ್ನಾಟಕ ರಾಜ್ಯದ ಆಯೋಗ ಪ್ರಕರಣಗಳ ವಿಲೇವಾರಿಯಲ್ಲಿ ರಾಷ್ಟ್ರಮಟ್ಟದಲ್ಲಿ 2ನೆಯ ಸ್ಥಾನದಲ್ಲಿದೆ ಎಂದರು.
ಗ್ರಾಹಕರ ವೇದಿಕೆಗಳು ಮತ್ತು ಹಕ್ಕುಗಳ ಬಗ್ಗೆ ಆಶಾ,ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘಗಳು ಗ್ರಾಮೀಣ ಭಾಗಗಳ ಜನರಲ್ಲಿ ವ್ಯಾಪಕ ಅರಿವು ಮೂಡಿಸಬೇಕು. ಇದರಿಂದ ಗ್ರಾಹಕರ ವೇದಿಕೆ ಮತ್ತು ನ್ಯಾಯಾಲಯಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯ ವಾಗುತ್ತದೆ ಎಂದರು.
ಕಚೇರಿ ನಗರದಲ್ಲಿರಲಿ!!
ಚಿಕ್ಕಬಳ್ಳಾಪುರ ಜಿಲ್ಲಾ ಆಯೋಗದ ಕಚೇರಿಯಲ್ಲಿ ಒಬ್ಬರು ಅಧ್ಯಕ್ಷರು ಮತ್ತು ಒಬ್ಬ ಸದಸ್ಯರಿದ್ದು, ಸಿಬ್ಬಂದಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಈ ಕಚೇರಿಯಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಆಯೋಗದ ಕಚೇರಿಯು ನಗರದ ಹೊರವಲಯದಲ್ಲಿರುವ ಕಾರಣ, ಕಚೇರಿ ದೂರವಿದೆ ಎಂದು ಸಾರ್ವಜನಿಕರು ಆಯೋಗದಲ್ಲಿ ಪ್ರಕರಣಗಳನ್ನು ದಾಖಲಿಸಲು ಬರಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಕೇಂದ್ರವೂ ಆಗಿರುವ ಚಿಕ್ಕಬಳ್ಳಾಪುರ ನಗರದ ಹೃದಯ ಭಾಗದ ಒಂದು ಕಡೆಯಲ್ಲಿ ಕಚೇರಿ ಸ್ಥಳಾಂತರಿಸಲು ಸೂಕ್ತ ಸ್ಥಳ ನೀಡಬೇಕು. ಅದರಲ್ಲೂ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಮೀಪದಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಯ ಹಳೆಯ ಕಟ್ಟಡ ಸದ್ಯ ಖಾಲಿಯಿದ್ದು, ಈ ಕಟ್ಟಡಕ್ಕೆ ಜಿಲ್ಲಾ ಆಯೋಗದ ಕಚೇರಿ ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತದ ಗಮನಕ್ಕೆ ತಂದರು.
ಬಾಲ್ಯ ವಿವಾಹ ಶೂನ್ಯಕ್ಕೆ ತನ್ನಿ!!
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ, ಮಾತನಾಡಿ, ದೇಶಕ್ಕೆ ಸ್ವಾತಂತ್ರ‍್ಯ ಬಂದು ೭೫ ವರ್ಷಗಳು ಕಳೆದರೂ ಬಾಲ್ಯ ವಿವಾಹಗಳು ಇನ್ನೂ ಜೀವಂತವಾಗಿರುವುದು ಖೇದಕರ. ಹೆಣ್ಣುಮಗುವಿಗೆ ೧೮ ವರ್ಷಗಳ ಒಳಗೆ ಮದುವೆ ಮಾಡುವುದು ಶಿಕ್ಷಾರ್ಹ ಅಪರಾಧ. ೧೮ ವರ್ಷದೊಳಗಿನ ಹೆಣ್ಣುಮಗು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿ ಬೆಳೆದಿರುವುದಿಲ್ಲ. ಇದು ವೈಜ್ಞಾನಿಕವಾಗಿಯೂ ದೃಢಪಟ್ಟಿದೆ. ಸಮೀಪದ ಎಲ್ಲಿಯೇ ಆಗಲಿ ಬಾಲ್ಯ ವಿವಾಹ ಆಗುತ್ತಿರುವುದು ಕಂಡು ಬಂದಲ್ಲಿ ಕೂಡಲೇ ಸಂಬಂಧಪಟ್ಟ ಇಲಾಖೆ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು.ಬಾಲ್ಯ ವಿವಾಹಗಳನ್ನು ಶೂನ್ಯಕ್ಕೆ ತರಲು ಪ್ರತಿ ಯೊಬ್ಬರೂ ಪ್ರಯತ್ನಿಸಬೇಕು. ಅದು ದೇಶದ ಪ್ರತಿಯೊಬ್ಬರ ಜವಾಬ್ದಾರಿಯೂ ಆಗಬೇಕು ಎಂದರು.
ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಟಿ,ಪಿ.ರಾಮಲಿಂಗೇಗೌಡ, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಸಿಇಒ ಡಾ.ವೈ.ನವೀನ್ ಭಟ್, ಎಸ್ಪಿ ಕುಶಲ್ ಚೌಕ್ಸೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ. ವಿ ಅಭಿಲಾಷ್, ಸ್ಕೂಲ್ ಆಫ್ ಲಾ ರಾಮಯ್ಯ ಯೂನಿವರ್ಸಿಟಿ ಆಫ್ ಅಪೈಡ್ ಸೈನ್ಸಸ್ ನ ಉಪಾಧಿ ಕಾರಿ ಅಶೋಕ್ ರಾವ್, ಹೆಚ್.ಒ.ಡಿ ಅರುಣಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ರೈತರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.