ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಪರೀಕ್ಷೆ ಆಯೋಜಿಸಿ: ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ

10ನೇ ತರಗತಿಯ ಪರೀಕ್ಷೆಗಳು ಇದೆ ತಿಂಗಳ 18 ರಿಂದ ಏಪ್ರಿಲ್ 2 ರವರೆಗೆ ಜಿಲ್ಲೆಯಲ್ಲಿನ 53 ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ನಿಗಾ ವ್ಯವಸ್ಥೆಯ ನಿಗಾದಡಿ ನಡೆಯುತ್ತವೆ. ರಾಜ್ಯ ಮಟ್ಟದ ಅಧಿಕಾರಿಗಳು ವೆಬ್ ಕಾಸ್ಟಿಂಗ್ ಆನ್ ಲೈನ್ ವ್ಯವಸ್ಥೆ ಮುಖಾಂತರವೇ ಮೇಲುಸ್ತುವಾರಿ ಮಾಡು ತ್ತಿರುತ್ತಾರೆ

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುವ ವೇಳೆ ವಿದ್ಯುತ್ ಪೂರೈಕೆಯಲ್ಲಿ ಒಂದು ನಿಮಿಷವೂ ವ್ಯತ್ಯಯ ಆಗದಂತೆ ನಿರಂತರವಾಗಿ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಚಿಕ್ಕಬಳ್ಳಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುವ ವೇಳೆ ವಿದ್ಯುತ್ ಪೂರೈಕೆ ಯಲ್ಲಿ ಒಂದು ನಿಮಿಷವೂ ವ್ಯತ್ಯಯ ಆಗದಂತೆ ನಿರಂತರವಾಗಿ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್‌ನ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಅವರು ಬುಧವಾರ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೇಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

10ನೇ ತರಗತಿಯ ಪರೀಕ್ಷೆಗಳು ಇದೆ ತಿಂಗಳ 18 ರಿಂದ ಏಪ್ರಿಲ್ 2 ರವರೆಗೆ ಜಿಲ್ಲೆಯಲ್ಲಿನ 53 ಪರೀಕ್ಷಾ ಕೇಂದ್ರಗಳ್ಲಲಿ ಸಿ.ಸಿ.ಟಿ.ವಿ ನಿಗಾ ವ್ಯವಸ್ಥೆಯ ನಿಗಾದಡಿ ನಡೆಯುತ್ತವೆ. ರಾಜ್ಯ ಮಟ್ಟದ ಅಧಿಕಾರಿಗಳು ವೆಬ್ ಕಾಸ್ಟಿಂಗ್ ಆನ್ ಲೈನ್ ವ್ಯವಸ್ಥೆ ಮುಖಾಂತರವೇ ಮೇಲುಸ್ತು ವಾರಿ ಮಾಡುತ್ತಿರುತ್ತಾರೆ ಎಂದರು.

ಇದನ್ನೂ ಓದಿ: Chikkaballapur News: ಭಾನುವಾರ ಬಂದ್ ಕರೆ ಸಮಂಜಸವಲ್ಲ, ವ್ಯಾಪಾರಕ್ಕೆ ತೊಂದರೆ, ಬೇರೆ ದಿನದಲ್ಲಿ ಬಂದ್‌ ಮಾಡಿ: ಮಂಜುನಾಥ್ ಆಗ್ರಹ

ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೇಕಿರುವ ಬೆಳಕಿನ ವ್ಯವಸ್ಥೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಗಳನ್ನು ಒದಗಿಸಲು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕತ್ಯವ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು ಸಿದ್ದತೆಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಬೇಕು. ಮುಖ್ಯವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಸೊಳ್ಳೆಗಳ ನಿಯಂತ್ರಣಕ್ಕೆ ಪಾಗಿಂಗ್ ಮಾಡಿಸಬೇಕು ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ದಿನ ಗಳಂದು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ಬಂದು ಹೋಗಲು ಬಸ್ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕು.

cbpm1l

ಪರೀಕ್ಷಾ ಪರಿಕರಗಳು, ಪ್ರಶ್ನೆ ಪತ್ರಿಕೆ, ಉತ್ತರ ಬರೆಯುವ ಲಿಪಿಕ ವಸ್ತುಗಳನ್ನು ಸರಿಯಾಗಿ ಒದಗಿಸಬೇಕು. ಪ್ರಶ್ನೆ ಪತ್ರಿಕೆಗಳು ಹಾಗೂ ಇತರ ಗೌಪ್ಯ ವಸ್ತುಗಳನ್ನು ಖಜಾನೆಯಲ್ಲಿ ಪೊಲೀಸ್ ಭದ್ರತೆಯೊಂದಿಗೆ ಕಾಯ್ದಿರಿಸಬೇಕು. ನಿಗದಿತ ವೇಳೆಗೆ ಪೊಲೀಸ್ ಬೆಂಗಾವಲಿ ನೊಂದಿಗೆ ಪಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ ಪರೀಕ್ಷೆ ನಡೆಯುವ ದಿನಾಂಕಗಳಂದು ನಿಷೇಧಾಜ್ಞೆ ಜಾರಿಯಲ್ಲಿದ್ದು, ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಂಡು ಸುಲಲಿತ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

11cbpm1sslc (1)

ಪರೀಕ್ಷಾ ಪೂರ್ವ ಅವಧಿಯ ಮುಂದಿನ ಒಂದು ವಾರದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಗಳನ್ನು ಹಾಗೂ ಪುನರ್ ಮನನ ಅಭ್ಯಾಸದ ಸುಲಲಿತ ವಿಧಾನಗಳನ್ನು ತಿಳಿಸಿ ಕೊಡಬೇಕು. ಒಟ್ಟಾರೆ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದು ಸೂಚಿಸಿದರು. ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ಹಾಗೂ ಶಿಕ್ಷಕರು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಪರೀಕ್ಷೆ ಎದುರಿಸುವಂತೆ ಈ ವೇಳೆ ಜಿಲ್ಲಾಧಿಕಾರಿಗಳು ಶುಭ ಕೋರಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಆಗಿರುವ ಮೇಲ್ವಿಚಾರಕರು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.