ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

1000 ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚುಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧಿ ದಾಸ್ತಾನು ಮತ್ತು ವಿತ ರಣಾ ಕೊಠಡಿ, ಅಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ನಮ್ಮ ಕ್ಲಿನಿಕ್ ಸಂಜೀವಿನಿ

ಬೇಡಿಕೆಗನುಗುಣವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ಎಸ್. ಎನ್.ಸುಬ್ಬಾರೆಡ್ಡಿ ತಿಳಿಸಿದರು.

Profile Ashok Nayak Mar 16, 2025 10:14 PM

ಬಾಗೇಪಲ್ಲಿ: "ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಪುರಸಭೆ ವ್ಯಾಪ್ತಿಯ ಜನ ವಸತಿ ಪ್ರದೇಶದಲ್ಲಿ ಬೇಡಿಕೆ ಗನುಗುಣವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್ ಸಾರ್ವಜನಿಕ ರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ಎಸ್. ಎನ್.ಸುಬ್ಬಾರೆಡ್ಡಿ ತಿಳಿಸಿದರು. ಅವರು ಘಂಟಂವಾರಿಪಲ್ಲಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಡಿಪೋ ರಸ್ತೆ ಯಲ್ಲಿ ಇರುವ ನಮ್ಮ ಕ್ಲಿನಿಕ್ ಉದ್ಘಾಟನೆ ಮಾಡಿ ಮಾತನಾಡಿದರು. ಜನರ ಉತ್ತಮ ಆರೋಗ್ಯಕ್ಕಾಗಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸುಧಾರಿತ ವ್ಯವಸ್ಥೆ ಗಳನ್ನು ನಿರ್ಮಿಸಲು ಸರ್ಕಾರ ಒತ್ತು ನೀಡಿದೆ’ ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ಗುಣಮಟ್ಟ ಕಾಪಾಡುವ ಮೂಲಕ ಅತ್ಯುತ್ತಮ ಸದನ ನಿರ್ಮಾಣವಾಗಬೇಕು

ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ ಮಾತನಾಡಿ, ಬೆಳಗಿ ನಿಂದ ಸಂಜೆಯವರೆಗೆ ಕಾರ್ಯನಿರ್ವಹಣೆ ಇನ್ನು ಈ ಕ್ಲಿನಿಕ್‌ಗಳು ಬೆಳಗ್ಗೆ 9 ರಿಂದ 4.30 ರವರೆಗೆ ಪ್ರತಿ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸಲಿವೆ. 1000 ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಅಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಾಕ್ಟರ್ ಹೇಳಿ ದರು.

ಈ ಕುರಿತು ಹೆಚ್ಚಿನ ಮಾಹಿತಿ ನೀಡಿದ ನಮ್ಮ ಕ್ಲಿನಿಕ್ ಡಾಕ್ಟರ್ ಹೆಚ್.ಪವನ್ ರೆಡ್ಡಿ ‘ನಮ್ಮ ಕ್ಲಿನಿಕ್’ಗಳಲ್ಲಿ ತಲಾ ಒಬ್ಬರು ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಲಭ್ಯವಿದ್ದು, ಬಡವರು, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ಇದು ಸಂಜೀವಿನಿಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಮಹೇಶ್ ಬಾಬು, ಆರ್.ಸಿ.ಹೆಚ್. ಓ.ಡಾ.ಸಂತೋಷ ಬಾಬು,ನಮ್ಮ ಕ್ಲಿನಿಕ್ ಡಾ.ಪವನ್ ಆರ್.ಹನುಮಂತ ರೆಡ್ಡಿ, ಅರೋಗ್ಯ ಅಧಿಕಾರಿಗಳಾದ ಸರಸ್ವತಮ್ಮ, ಮಹಮ್ಮದ್ ಮುಸ್ತಾಕ್, ಚೇತನ್, ಪಕೃದ್ದೀನ್ ಸಾಬ್, ಮಂಜುನಾಥ್ ಈಶ್ವರಪ್ಪ, ಕವಿತ, ಘಂಟಂವಾರಿಪಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್.ಎಸ್.ನವೀನ್ ಹಾಗೂ ಸಾರ್ವಜನಿಕರು ಹಾಜರಿದ್ದರು.