ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Minister Dr.M.C.Sudhakar: ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆ: ಸಚಿವ ಡಾ.ಎಂ.ಸಿ.ಸುಧಾಕರ್ ಸ್ಪಷ್ಟನೆ

ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಧ್ಯಮದವರೊಂದಿಗೆ ಸವಿಸ್ತಾರವಾಗಿ ಮಾತನಾಡಿದ ಸಚಿವರು ಜಿಲ್ಲೆಯ ಹಳ್ಳಿಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿದರು. ಎಚ್.ಎನ್.ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ

ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು ಕುಡಿಯುವ ನೀರು,ರಸ್ತೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತರಲು ನಾವು ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಉನ್ನತ ಶಿಕ್ಷಣ ಹಾಗೂ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.

ಚಿಂತಾಮಣಿ: ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು ಕುಡಿಯುವ ನೀರು,ರಸ್ತೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತರಲು ನಾವು ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಉನ್ನತ ಶಿಕ್ಷಣ ಹಾಗೂ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್(Minister Dr. M.C.Sudhakar) ಹೇಳಿದರು.

ತಾಲೂಕಿನಲ್ಲಿ ಹಮ್ಮಿಕೊಂಡಿರುವ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕು ಚಿನ್ನಸಂದ್ರ ಗ್ರಾಮ ಪಂಚಾಯಿತಿ ಸೂಲದೇನಹಳ್ಳಿ ಗ್ರಾಮದ ಪರಿಶಿಷ್ಟಜಾತಿ ಕಾಲೋನಿಯ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಸುಮಾರು 60 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chinthamani News: ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಧ್ಯಮದವರೊಂದಿಗೆ ಸವಿಸ್ತಾರವಾಗಿ ಮಾತನಾಡಿದ ಸಚಿವರು ಜಿಲ್ಲೆಯ ಹಳ್ಳಿಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿದರು.

ಎಚ್.ಎನ್.ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ. ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ ಶೀಘ್ರವಾಗಿ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಉನ್ನತ ಶಿಕ್ಷಣ ಸಚಿವರಾಗಿ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲಾಗಿದೆ.ಅತಿಥಿ ಉಪನ್ಯಾಸಕರ ಸಮಸ್ಯೆ ಈಡೇರಿಸಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

sooladenahalli

ಇತ್ತೀಚಿನ ರಾಜಕೀಯ ವಿದ್ಯಮಾನಗಳು ಹಾಗೂ ವಿರೋಧ ಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ನಾವು ಅಭಿವೃದ್ಧಿಯ ರಾಜಕಾರಣ ಮಾಡುತ್ತಿದ್ದೇವೆ. ಟೀಕೆಗಳಿಗೆ ಕೆಲಸದ ಮೂಲಕವೇ ಉತ್ತರ ನೀಡುತ್ತೇವೆ ಎಂದು ನೇರವಾಗಿ ನುಡಿದರು.

ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ತಕ್ಷಣವೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ಯಾವುದೇ ಫಲಾಪೇಕ್ಷೆಯಿಲ್ಲದೆ ಜನ ಸಾಮಾನ್ಯರ ಕೆಲಸಗಳು ಆಗಬೇಕು ಎಂಬುದು ಸರ್ಕಾರದ ಆಶಯ ಎಂದು ಹೇಳಿದರು.

ಚಿಂತಾಮಣಿ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಚಿಂತಾಮಣಿ ಸಂಪೂರ್ಣ ಕಟ್ಟಡಕ್ಕೆ ಬಣ್ಣ ಕೆಲಸ, ವಿದ್ಯುತ್ ಸಂಪರ್ಕ ಹಾಗೂ ಕೊಠಡಿಗಳಿಗೆ ಫ್ಯಾನ್ ಅಳವಡಿಕೆ ಹಾಗೂ ಕೆಲವು ದುರಸ್ಥಿ ಕಾಮಗಾರಿ ಅಲ್ಲದೆ ಕೇಂದ್ರ ಪುರಸ್ಕೃತ ಅಮೃತ್ ೨.೦ ಯೋಜನೆಯಡಿ ಚಿಂತಾಮಣಿ ನಗರದ ನೆಕ್ಕುಂದಿ ದೊಡ್ಡಕೆರೆಯನ್ನು ಆಳಗೊಳಿಸಿ ಸಾಮರ್ಥ್ಯವನ್ನು 31.80 ಎಂ.ಸಿ.ಎಫ್.ಟಿ ಯಿಂದ 75.00 ಎಂ.ಸಿ.ಎಫ್.ಟಿ ಗೆ ಹೆಚ್ಚಿಸುವುದು, ಮುಖ್ಯ ಏರಿಯನ್ನು ಬಲಪಡಿಸುವುದು ಹಾಗು ಇತರೆ ಪೂರಕ ಕಾಮಗಾರಿಗಳಿಗೆ ಕೂಡ ಶನಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷರಾದ ಜಗನ್ನಾಥ್, ಮಾಜಿ ಉಪಾಧ್ಯಕ್ಞೆ ರಾಣಿಯಮ್ಮ, ನಗರಾಭಿವೃದ್ಧಿ ಅಧ್ಯಕ್ಷರಾದ ಶ್ರೀನಾಥ್ ಬಾಬು, ಸದಸ್ಯರಾದ ಆರ್ ಎಂ ಜೆ ಶ್ರೀನಿವಾಸ್,ಮುಖಂಡರಾದ ಉಮೇಶ್, ಶೇಕ್ ಸಾಧಿಕ್ ರಜ್ವಿ, ಇಂತಿಯಾಸ್ ಪಾಷಾ, ಸಿಕಂದರ್, ಚಿನ್ನಸಂದ್ರ ನಾರಾಯಣ ಸ್ವಾಮಿ, ಇರ್ಷಾದ್, ಏಜಾಜ್, ಸಿ ಕೆ ಎಲ್ ಚಾಂದ್ ಪಾಷಾ, ದಾದಾಪೀರ್, ಲಾರಿ ಅಸೋಸಿಯೇಷನ್ ಬಾಬು, ಮಾಜಿ ನಗರಸಭಾ ಸದಸ್ಯರಾದ ಜಗದೀಶ್, ಶ್ರೀನಿವಾಸ್, ಜೈ ಭೀ ಮುರಳಿ ಸೇರಿದಂತೆ ತಾಲ್ಲೂಕ್ ಮಟ್ಟದ ಅಧಿಕಾರಿಗಳು ಸಚಿವರ ಅಭಿಮಾನಿಗಳು ಭಾಗವಹಿಸಿದ್ದರು.