ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ಜೂ.21ರ ಪದಗ್ರಹಣ ಸಮಾರಂಭಕ್ಕೆ ಶಿಡ್ಲಘಟ್ಟದಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರ ಭಾಗವಹಿಸುವ ನಿರೀಕ್ಷೆ: ರಾಜೀವ್ ಗೌಡ

ಮೇಕೆದಾಟು(Mekedaatu) ಪಾದಯಾತ್ರೆ ವೇಳೆ ಶಿಡ್ಲಘಟ್ಟದಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯ ಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಶಿಡ್ಲಘಟ್ಟದ ಕಾರ್ಯಕರ್ತರ ಸಂಘಟನಾ ಶಕ್ತಿ ಮತ್ತು ಉತ್ಸಾಹವನ್ನು ಮೆಚ್ಚಿಕೊಂಡಿದ್ದರು.

ಶಿಡ್ಲಘಟ್ಟ: ಕಾಂಗ್ರೆಸ್ ಪಕ್ಷವನ್ನು ಪಂಚಾಯಿತಿ ಮಟ್ಟದಿಂದಲೇ ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಸರ್ಕಾರದ ಜನಪರ ಯೋಜನೆಗಳು ಹಾಗೂ ಪಕ್ಷದ ತತ್ವಗಳನ್ನು ಮನೆಮನೆಗೆ ತಲುಪಿ ಸುವ ಕೆಲಸ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಜೂ.21ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Chief Minister D K Shivkumar) ಅವರ ನೇತೃತ್ವದಲ್ಲಿ ನಡೆಯಲಿರುವ ಬಿ.ಕೆ.ಹರಿಪ್ರಸಾದ್(B K Hariprasad) ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: Shidlaghatta News: ನಗರದಲ್ಲಿ ಪೇಜಾವರ ಶ್ರೀಗಳ ಸಂಚಾರ; ಮನೆ ಮನೆಗೆ ಪಾದಪೂಜೆ, ಭಕ್ತರಿಗೆ ಆಶೀರ್ವಾದ

ಮೇಕೆದಾಟು(Mekedaatu) ಪಾದಯಾತ್ರೆ ವೇಳೆ ಶಿಡ್ಲಘಟ್ಟದಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಶಿಡ್ಲಘಟ್ಟದ ಕಾರ್ಯಕರ್ತರ ಸಂಘಟನಾ ಶಕ್ತಿ ಮತ್ತು ಉತ್ಸಾಹವನ್ನು ಮೆಚ್ಚಿಕೊಂಡಿದ್ದರು. ಇದೀಗ ಪದಗ್ರಹಣ ಸಮಾರಂಭವನ್ನೂ ಅಷ್ಟೇ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಕಾರ್ಯಕರ್ತರನ್ನು ಕರೆತರಲು ಪಕ್ಷದ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

cbpm6s

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಹತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಅವರ ಅನುಕೂಲ ಕ್ಕಾಗಿ ಸುಮಾರು ನೂರು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಸಮಾರಂಭವು ಕಾಂಗ್ರೆಸ್ ಪಕ್ಷದ ಸಂಘಟನಾ ಬಲ, ಐಕ್ಯತೆ ಹಾಗೂ ಕಾರ್ಯಕರ್ತರ ಶಕ್ತಿಯ ಪ್ರದರ್ಶನವಾಗಲಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ರಾಜೀವ್ ಗೌಡ ಕರೆ ನೀಡಿದರು.

ಸಭೆಯಲ್ಲಿ ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ, ಅಪ್ಸರ್ ಪಾಷಾ, ರಾಯಪಲ್ಲಿ ಅಶ್ವತ್ ರೆಡ್ಡಿ, ಹಿರಿಯ ಹೋರಾಟಗಾರ ವೆಂಕಟೇಶ್, ಹಿರಿಯ ಕಾಂಗ್ರೆಸ್ ಮುಖಂಡರಾದ ಗುಡಿಯಪ್ಪ, ನಾರಾಯಣಸ್ವಾಮಿ, ಗುಡಿಹಳ್ಳಿ ನಾರಾಯಣಸ್ವಾಮಿ, ಕಂಪನಿ ದೇವರಾಜು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಓಬಳಪ್ಪ, ಮುನೇಗೌಡ, ಕೇಶವಮೂರ್ತಿ, ಸಾದಲಿ ಗೋವಿಂದರಾಜು, ಶೆಟ್ಟಹಳ್ಳಿ ರಾಮಚಂದ್ರ, ತನು, ಸೈಯದ್, ಸಲಾಂ, ಗೋಪಾಲ್, ಗಾಯತ್ರಿ, ಯಾಸ್ಮಿನ್ ತಾಜ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

image

"ಜೆಡಿಎಸ್-ಬಿಜೆಪಿ ಮೈತ್ರಿ ಚುನಾವಣಾ ಅಧಿಕಾರಿಗಳನ್ನು ಕೈಗೊಂಬೆಯನ್ನಾಗಿ ಬಳಸುತ್ತಿದೆ" "ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಜೆಡಿಎಸ್ ಮತ್ತೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಚುನಾವಣೆ ಸಂದರ್ಭದಲ್ಲಿ ಆಡಳಿತ ಯಂತ್ರ ಹಾಗೂ ಚುನಾವಣಾ ಅಧಿಕಾರಿಗಳನ್ನು ಕೈಗೊಂಬೆಯನ್ನಾಗಿ ಬಳಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸವಾಲು ಗಳ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಿ ಜನರ ವಿಶ್ವಾಸ ಗಳಿಸಬೇಕು. ಜನರ ಆಶೀರ್ವಾದ ಹಾಗೂ ಕಾರ್ಯಕರ್ತರ ಪರಿಶ್ರಮದ ಬಲದಿಂದ ಮುಂದಿನ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದು ಖಚಿತ."

– ರಾಜೀವ್ ಗೌಡ, ಕಾಂಗ್ರೆಸ್ ಮುಖಂಡ