ಬಾಗೇಪಲ್ಲಿ: ಸರ್ಕಾರಿ ಶಾಲೆ(Govt School)ಗಳಲ್ಲಿ ನುರಿತ ಹಾಗೂ ತರಬೇತಿ ಪಡೆದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಪೋಷಕರು ಖಾಸಗಿ ಶಾಲೆ(Private school)ಗಳ ವ್ಯಾ ಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್.ವೆಂಕಟೇಶಪ್ಪ ಮನವಿ ಮಾಡಿದರು.
ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋ ತ್ಸವ ಹಾಗೂ ಶಿಕ್ಷಕರು ಹಾಗೂ ಮಕ್ಕಳು ಸ್ವರಚಿತ ಕಥೆ ಕವನಗಳ. ಶಾಲಾ ವಾರ್ಷಿಕೋತ್ಸವ ಸಂಚಿಕೆ "ಪ್ರತಿಬಿಂಬ" ಪುಸ್ತಕ ಬಿಡುಗಡೆ ಮಾಡಿ ಉದ್ಘಾಟಿಸಿ ಮಾತನಾಡಿದರು.
ಸಾಮಾನ್ಯವಾಗಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಖಾಸಗಿ ಶಾಲೆಗಳು ಆದ್ದೂರಿಯಾಗಿ ಆಚರಣೆ ಮಾಡುತ್ತವೆ. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು, ಮಕ್ಕಳ ಪೋಷಕರು ಸಹಕಾರ ಪಡೆದು ಆದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವುದು ಶ್ಲಾಘನೀಯ.
ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಉಚಿತ ಶಿಕ್ಷಣ ಒದಗಿಸುತ್ತಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಕ್ಷೀರಭಾಗ್ಯ ಯೋಜನೆ, ಪೌಷ್ಟಿಕ ಆಹಾರ ವಿತರಣೆ ಮತ್ತಿತರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಇದೆ. ಆದರೂ, ಪೋಷಕರು ಆಂಗ್ಲಭಾಷೆ ಮತ್ತು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ದಿಂದ ಅಧಿಕ ಶುಲ್ಕ ನೀಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟರು. ವಿವಿಧ ಆಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಆರ್ ವೆಂಕಟರಾಮ್ ಬಿ.ಆರ್.ಸಿ ಗಳಾದ ಪದ್ಮಾವತಿ, ಮಂಜುನಾಥ, ಮುಖ್ಯ ಶಿಕ್ಷಕ ಶ್ರೀನಿವಾಸ್, ಶಿಕ್ಷಕರಾದ ರಾಮರಾಜು, ವೆಂಕಟೇಶ್ ಬಾಬು, ಲಕ್ಷ್ಮೀ, ಸಲ್ಮಾ ಇಂದುಮತಿ, ಸಮಾಜ ಸೇವಕಿ ಶ್ವೇತಾ ಗಂಜಮ್, ಬಿ.ಎ.ಬಾಬಾಜಾನ್ ಹಾಗೂ ಮಕ್ಕಳು ಪೋಷಕರು ಹಾಜರಿದ್ದರು