ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ತಂದೆ ತಾಯಿ
ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿ ವ್ಯಾಪ್ತಿಯ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆ ಯಲ್ಲಿ ನಟರಾಜ್ ಅಂಜಲಿ ದಂಪತಿಗಳ ಪುತ್ರ ನಾದ ಯಶ್ವಂತ್(೮ ವರ್ಷದ) ಬಾಲಕ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಾಲೆಯ ಶಿಕ್ಷಕಿ ಸರಸ್ವತಿ ಕೂಲಿನಿಂದ ಬೇರೆ ಬಾಲಕನಿಗೆ ಹೊಡೆಯಲು ಹೋಗಿ ಯಶ್ವಂತ್ ಕಣ್ಣಿಗೆ ಕೋಲು ಬಿದ್ದ ಕಾರಣ ಬಲಭಾಗದ ಕಣ್ಣು ಹಾನಿಯಾಗಿದೆ.

೧ನೇ ತರಗತಿ ವಿದ್ಯಾರ್ಥಿ ಕಣ್ಣು ಕಳೆದುಕೊಂಡು ಹಿನ್ನೆಲೆ ಬಾಲಕನ ತಂದೆ ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ಕೂತ ಘಟನೆ ಚಿಂತಾಮಣಿ ನಗರದಲ್ಲಿ ಇಂದು ನಡೆದಿದೆ.

ಚಿಂತಾಮಣಿ: 1ನೇ ತರಗತಿ ವಿದ್ಯಾರ್ಥಿ ಕಣ್ಣು ಕಳೆದುಕೊಂಡು ಹಿನ್ನೆಲೆ ಬಾಲಕನ ತಂದೆ ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ಕೂತ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿ ವ್ಯಾಪ್ತಿಯ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆ ಯಲ್ಲಿ ನಟರಾಜ್ ಅಂಜಲಿ ದಂಪತಿಗಳ ಪುತ್ರನಾದ ಯಶ್ವಂತ್(೮ ವರ್ಷದ) ಬಾಲಕ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಶಾಲೆಯ ಶಿಕ್ಷಕಿ ಸರಸ್ವತಿ ಕೂಲಿನಿಂದ ಬೇರೆ ಬಾಲಕನಿಗೆ ಹೊಡೆಯಲು ಹೋಗಿ ಯಶ್ವಂತ್ ಕಣ್ಣಿಗೆ ಕೋಲು ಬಿದ್ದ ಕಾರಣ ಬಲಭಾಗದ ಕಣ್ಣು ಹಾನಿಯಾಗಿದೆ.
ಇದನ್ನೂ ಓದಿ: Chikkaballapur News: ಎರಡು ಸಲ ಕಳ್ಳತನ ಮಾಡಿದರೆ ಶಿಕ್ಷೆ ಪ್ರಮಾಣ ದ್ವಿಗುಣವಾಗಲಿದೆ
ಕೂಡಲೇ ಪೋಷಕರು ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು ಕೊನೆಗೆ ವೈದ್ಯರು ಬಾಲಕನ ಕಣ್ಣು ಕಾಣುವುದಿಲ್ಲ ಎಂದು ದೃಢಕರಿಸಿದ ಹಿನ್ನೆಲೆ ಪೋಷಕರು ಶಿಕ್ಷಕಿಯ ವಿರುದ್ಧ ಪೊಲೀಸ್ ಠಾಣೆಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಯಾವುದೇ ರೀತಿಯ ಕ್ರಮ ಜರುಗಿಸದೆ ಇರುವ ಕಾರಣಕ್ಕೆ ಇಂದು ನಾಯಕ್ಕಾಗಿ ಕಣ್ಣು ಕಳೆದುಕೊಂಡ ಬಾಲಕ ಹಾಗೂ ಅವರ ತಂದೇ ತಾಯಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ಕೂತಿದ್ದು ಶಿಕ್ಷಕಿಯ ಮೇಲೆ ಕ್ರಮ ಜರುಗಿಸುವವರೆಗೂ ನಾವು ಕಾನೂನು ಹೋರಾಟ ಮಾಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.