ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Lok Adalat: ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮಾ.14ರಂದು ಲೋಕ್ ಅದಾಲತ್‌ನಲ್ಲಿ ಭಾಗವಹಿಸಿ: ನ್ಯಾ.ರೋಷನ್ ಷಾ

ಅಪರಾಧಿಕ ರಾಜಿಯೋಗ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗ ಸಂಬಂಧಿತ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನ ಪ್ರಕರಣಗಳು, ಗ್ರಾಹಕರ ವೇದಿಕೆ ಸಂಬಂಧಿತ ವ್ಯಾಜ್ಯಗಳು, ರಿಯಲ್ ಎಸ್ಟೇಟ್ ಪ್ರಕರಣಗಳು, ಸಾಲ ವಸೂಲಾತಿ, ಚೆಕ್ ಅಮಾ ನತ್ತು ಪ್ರಕರಣಗಳು, ಭೂಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ ಪ್ರಕರಣಗಳು ಸೇರಿದಂತೆ ಸಾರ್ವಜನಿಕ ಉಪಯುಕ್ತ ಸೇವೆಗಳ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸ ಬಹುದು

ಮಾ.14ರಂದು ಲೋಕ್ ಅದಾಲತ್‌ನಲ್ಲಿ ಭಾಗವಹಿಸಿ

ಶಿಡ್ಲಘಟ್ಟ ನ್ಯಾಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಲೋಕ್ ಅದಾಲತ್ ಕುರಿತು ಮಾಹಿತಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ ಪೋಟೊ.. -

Ashok Nayak
Ashok Nayak Mar 11, 2026 11:33 PM

ಶಿಡ್ಲಘಟ್ಟ: ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಗಳ ಸಹಯೋಗದಲ್ಲಿ ಮಾ.14ರಂದು ಲೋಕ್ ಅದಾಲತ್ ಆಯೋಜಿಸ ಲಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ರೋಷನ್ ಷಾ ಹೇಳಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Adalat on March 14:ಮಾ.14ಕ್ಕೆ ಬೃಹತ್ ಲೋಕಾ ಅದಾಲತ್: 12222 ಪ್ರಕರಣಗಳ ಇತ್ಯರ್ಥದ ಗುರಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯೋಗ್ಯ ಪ್ರಕರಣಗಳನ್ನು ಕಡಿಮೆ ಅವಧಿಯಲ್ಲಿ ಹಾಗೂ ಕಡಿಮೆ ವೆಚ್ಚದಲ್ಲಿ ಇತ್ಯರ್ಥಪಡಿಸುವ ಉದ್ದೇಶದಿಂದ ಲೋಕ್ ಅದಾಲತ್ ಆಯೋಜಿಸಲಾಗುತ್ತಿದೆ. ಅಪರಾಧಿಕ ರಾಜಿಯೋಗ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗ ಸಂಬಂಧಿತ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನ ಪ್ರಕರಣಗಳು, ಗ್ರಾಹಕರ ವೇದಿಕೆ ಸಂಬಂಧಿತ ವ್ಯಾಜ್ಯಗಳು, ರಿಯಲ್ ಎಸ್ಟೇಟ್ ಪ್ರಕರಣಗಳು, ಸಾಲ ವಸೂಲಾತಿ, ಚೆಕ್ ಅಮಾನತ್ತು ಪ್ರಕರಣಗಳು, ಭೂಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ ಪ್ರಕರಣಗಳು ಸೇರಿದಂತೆ ಸಾರ್ವಜನಿಕ ಉಪಯುಕ್ತ ಸೇವೆಗಳ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಬಹುದು ಎಂದು ಹೇಳಿದರು.

ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ) ಕೂಡ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಅವಕಾಶವಿದೆ. ನ್ಯಾಯಾಲಯಗಳಲ್ಲಿ ದಾಖಲಾಗದಿರುವ ವ್ಯಾಜ್ಯಗಳನ್ನು ಸಹ ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣಿಸಿ ಸಂಧಾನದ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಇಬ್ಬರು ಪಕ್ಷಕಾರರು ಪರಸ್ಪರ ಒಪ್ಪಿಗೆಯೊಂದಿಗೆ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ಇದರಿಂದ ಸಮಯ ಹಾಗೂ ಹಣ ಎರಡನ್ನೂ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಂಡು ತಮ್ಮ ನಡುವೆ ಇರುವ ವ್ಯಾಜ್ಯಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಿ.ಎಸ್. ಸುಕನ್ಯಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಸ್. ರಂಜಿತಾ, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಉಪಸ್ಥಿತರಿದ್ದರು.