ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಹಂಪಸಂದ್ರ ಗ್ರಾಮದಲ್ಲಿ ಶಾಂತಿ ಸಭೆ; ಜಾತಿಭೇದ ಮರೆತು ಸೌಹಾರ್ದದಿಂದ ಬದುಕಲು ಕರೆ

ತಾಲ್ಲೂಕಿನ ಹೊಸೂರು ಹೋಬಳಿಯ ಹಂಪಸಂದ್ರ ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸಹೋದರರಂತೆ ಜೀವನ ನಡೆಸಬೇಕು. ಗ್ರಾಮದಲ್ಲಿನ ದೇವಸ್ಥಾನಗಳು, ಕ್ಷೌರದ ಅಂಗಡಿಗಳು, ಹೋಟೆಲ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಮತ್ತು ಗೌರವ ನೀಡಬೇಕು ಎಂದು ತಿಳಿಸಿದರು.

ಅಸ್ಪೃಶ್ಯತೆ ಆಚರಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಡಿವೈಎಸ್ಪಿ ಪ್ರಕಾಶ್

-

Profile
Ashok Nayak Oct 21, 2026 7:24 AM

ಗೌರಿಬಿದನೂರು: ಕಾನೂನನ್ನು ಗೌರವಿಸಿದರೆ ಕಾನೂನು ನಿಮ್ಮನ್ನು ಗೌರವಿಸುತ್ತದೆ. ಗ್ರಾಮದಲ್ಲಿ ಅಸ್ಪೃಶ್ಯತೆ ಹಾಗೂ ಜಾತಿಭೇದಕ್ಕೆ ಅವಕಾಶ ನೀಡದೆ ಎಲ್ಲರೂ ಸಮಾನತೆ, ಸಹಬಾಳ್ವೆ ಮತ್ತು ಸೌಹಾರ್ದದಿಂದ ಬದುಕಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಪ್ರಕಾಶ್ ಎಚ್ಚರಿಸಿದರು.

ತಾಲ್ಲೂಕಿನ ಹೊಸೂರು ಹೋಬಳಿಯ ಹಂಪಸಂದ್ರ ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸಹೋದರರಂತೆ ಜೀವನ ನಡೆಸಬೇಕು. ಗ್ರಾಮದಲ್ಲಿನ ದೇವಸ್ಥಾನಗಳು, ಕ್ಷೌರದ ಅಂಗಡಿಗಳು, ಹೋಟೆಲ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಮತ್ತು ಗೌರವ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Gauribidanur News: ಕೆಲಸದ ಒತ್ತಡದ ನಡುವೆಯೂ ಶರನ್ನವರಾತ್ರಿಯಲ್ಲಿ ಹೂವಿನ ರಂಗೋಲಿ ರಚನೆ; ಉಚಿತವಾಗಿ ಕಲಿಸುವ ಆಸಕ್ತಿ

ನಾವೆಲ್ಲರೂ ಮನುಷ್ಯರು. ನಮ್ಮ ನಡುವೆ ಜಾತಿಯ ಆಧಾರದ ಮೇಲೆ ತಾರತಮ್ಯ ಇರಬಾರದು. ಹಿಂದಿನ ಘಟನೆಗಳನ್ನು ಮರೆತು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಸೌಹಾರ್ದ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ ಮಾತನಾಡಿ, ಗ್ರಾಮಸ್ಥರು ಒಗ್ಗಟ್ಟಿನಿಂದ ಬದುಕಬೇಕು. ಅಸ್ಪೃಶ್ಯತೆ ಆಚರಣೆ ಕಾನೂನುಬಾಹಿರವಾಗಿದ್ದು, ಇಂತಹ ಕೃತ್ಯ ಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಷ್ಠೆ ಬದಿಗಿಟ್ಟು ಎಲ್ಲರೂ ಸಮಾನರು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಕುಟುಂಬಗಳು ಆರ್ಥಿಕವಾಗಿ ಸಬಲರಾಗಬೇಕು. ಜತೆಗೆ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಗ್ರಾಮಸ್ಥರು ಕೈಜೋಡಿಸ ಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಅಂಜನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಪ್ಪ ಗೌಡ ನಾಯ್ಕರ್ ಮಾತನಾಡಿದರು.

ಆರಕ್ಷಕ ಉಪ ನಿರೀಕ್ಷಕರಾದ ಹರೀಶ್ ಮತ್ತು ಮಮತ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಅಂಜಿನಪ್ಪ, ರಮಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಿಂಹಮೂರ್ತಿ, ಗ್ರಾಮದ ಹಿರಿಯರು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.