ಚಿಕ್ಕಬಳ್ಳಾಪುರ : ಯಾವುದೇ ಅಂಗನವಾಡಿ ಕೇಂದ್ರಗಳಿಗೆ ನಳ ಸಂಪರ್ಕ ಇಲ್ಲದೆ ನೀರು ಪೂರೈಕೆ ಯ ವ್ಯವಸ್ಥೆ ಇಲ್ಲದಿದ್ದರೆ ಕೂಡಲೆ ಅಂತಹ ಕೇಂದ್ರಗಳ ಮಾಹಿತಿ ನೀಡುವಂತೆ ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್ ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ನಗರಹೊರವಲಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ “ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮುನಿಕೃಷ್ಣ ವಿರೋಧ ಆಯ್ಕೆ
ಜಲ್ ಜೀವನ್ ಮಿಷನ್ ಯೋಜನೆಯಡಿ ಸ್ವಂತ ಕಟ್ಟಡದಲ್ಲಿ ನಡೆಯುತ್ತಿರುವ ಅಥವಾ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಯಾವುದೇ ಅಂಗನವಾಡಿ ಕಟ್ಟಡಗಳಿಗೆ, ಸರ್ಕಾರಿ ಶಾಲಾ ಕಾಲೇಜು ಗಳಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗ್ರಾಮಾಂತರ ಪ್ರದೇಶದಲ್ಲಿ ನಳ ಸಂಪರ್ಕ ವ್ಯವಸ್ಥೆ ಕಲ್ಪಿಸಿ ನೀರು ಸರಬರಾಜು ಮಾಡಲು ಅವಕಾಶವಿದೆ. ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಲು ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಒಂದೇ ದಿನದಲ್ಲಿ ಮಾಹಿತಿ ನೀಡಬೇಕು. ಈ ಕುರಿತು ಈಗಾಗಲೇ ಹಿಂದಿನ ಸಭೆಯಲ್ಲಿ ತಿಳಿಸಲಾಗಿತ್ತು. ಈ ವರೆಗೆ ಮಾಹಿತಿ ನೀಡಿರುವುದಿಲ್ಲ. ಆದ್ದರಿಂದ ನಿರ್ಲಕ್ಷ್ಯ ತೋರದೆ ಮಾಹಿತಿ ನೀಡುವಂತೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿಯಲ್ಲಿ ಹಲವು ನೀರು ಪೂರೈಕೆಯ ಕಾಮಗಾರಿಗಳಿಗೆ ಅನುಮೋದನೆ ಪಡೆಯಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷ, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.