ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಚದುರಂಗ ಆಡುವುದರಿಂದ ಆಲೋಚನಾ ಶಕ್ತಿ, ಏಕಾಗ್ರತೆ ಹೆಚ್ಚುತ್ತದೆ : ಸಿ.ಇ.ಒ ಡಾ. ವೈ.ನವೀನ್ ಭಟ್ ಚಾಲನೆ

ಕೇರಂ ಆಡುವುದರಿಂದ ಆಟಗಾರನ ಮೆದುಳು, ಕಣ್ಣು, ಕೈ ಒಂದೆ ದಿಕ್ಕಿನಲ್ಲಿ ಸಂಯೋಜನೆ ಗೊಂಡು ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸುತ್ತದೆ. ಗ್ರಾಮೀಣ ಮಕ್ಕಳು ಕೇವಲ ಖೋಖೋ, ಕಬ್ಬಡ್ಡಿ, ವಾಲಿಬಾಲ್ ಈ ರೀತಿಯ ಕ್ರೀಡೆಗಳಲ್ಲಿ ಮಾತ್ರವೇ ತೊಡಗಿಸಿಕೊಳ್ಳದೆ ಚೆಸ್ ಹಾಗೂ ಕೇರಂ ಸೇರಿದಂತೆ ಇತರ ಚತುರ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು.

ಚದುರಂಗ ಆಡುವುದರಿಂದ ಆಲೋಚನಾ ಶಕ್ತಿ, ಏಕಾಗ್ರತೆ ಹೆಚ್ಚುತ್ತದೆ

-

Ashok Nayak
Ashok Nayak Nov 20, 2025 10:47 PM

ಚಿಕ್ಕಬಳ್ಳಾಪುರ: ಚದುರಂಗ ಆಡುವುದರಿಂದ ಆಲೋಚನಾ ಶಕ್ತಿ, ಏಕಾಗ್ರತೆ, ವಿಶ್ಲೇಷಣಾ ತ್ಮಕ ಮನೋಭಾವ ಹಾಗೂ ನೆನಪಿನ ಶಕ್ತಿ ಉತ್ತಮಗೊಳ್ಳುತ್ತದೆಂದು ಹಲವು ಸಂಶೋಧನೆ ಗಳು ತಿಳಿಸಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ. ನವೀನ್ ಭಟ್ ತಿಳಿಸಿದರು.

ನಗರದ ಗಾಂಧಿ ಭವನದಲ್ಲಿ ಗ್ರಾಮೀಣ ಮಕ್ಕಳಿಗಾಗಿ ಆಯೋಜಿಸಿದ್ದ “ಚತುರ ಆಟಗಳ ಉತ್ಸವ”ದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೇರಂ ಆಡುವುದರಿಂದ ಆಟಗಾರನ ಮೆದುಳು, ಕಣ್ಣು, ಕೈ ಒಂದೆ ದಿಕ್ಕಿನಲ್ಲಿ ಸಂಯೋಜನೆ ಗೊಂಡು ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸುತ್ತದೆ. ಗ್ರಾಮೀಣ ಮಕ್ಕಳು ಕೇವಲ ಖೋಖೋ, ಕಬ್ಬಡ್ಡಿ, ವಾಲಿಬಾಲ್ ಈ ರೀತಿಯ ಕ್ರೀಡೆಗಳಲ್ಲಿ ಮಾತ್ರವೇ ತೊಡಗಿಸಿಕೊಳ್ಳದೆ ಚೆಸ್ ಹಾಗೂ ಕೇರಂ ಸೇರಿದಂತೆ ಇತರ ಚತುರ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು.

ಇದನ್ನೂ ಓದಿ: Chikkaballapur News: ಕನ್ನಡ ಒಂದು ಭಾಷೆ ಮಾತ್ರವಲ್ಲ, ಅದು ನಮ್ಮ ಪಾದೇಶಿಕತೆಯ ಭಾವನೆ: ಡೀನ್ ಡಾ.ಎಂ.ಎಲ್.ಮಂಜುನಾಥ್

ಈ ಚತುರ ಆಟಗಳನ್ನು ಆಡುವ ಜೊತೆಗೆ ಗ್ರಾಮ ಪಂಚಾಯಿತಿಗಳಲ್ಲಿ ತೆರೆದಿರುವ ಗ್ರಂಥಾ ಲಯಗಳಿಗೆ ಭೇಟಿ ನೀಡಿ ಅಲ್ಲಿನ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳಸಿಕೊಳ್ಳಬೇಕು. ಅಲ್ಲಿನ ಗಣಕ ಯಂತ್ರ ಹಾಗೂ ಅಂತರ್ಜಾಲ ವ್ಯವಸ್ಥೆಯ ಅನುಕೂಲಗಳನ್ನು ಪರಿಚಯಿ ಸುವ ನಿಟ್ಟಿನಲ್ಲಿ ಈ ಉತ್ಸವ ಬಹಳ ಸಹಕಾರಿಯಾಗುತ್ತದೆ ಎಂಬ ಉದ್ದೇಶದಿಂದ ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿ ಮಾತ್ರ ಈ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದೇವೆ. ಈ ರೀತಿಯ ಚತುರ ಆಟಗಳು ಮಕ್ಕಳಿಗೆ ಶೈಕ್ಷಣಿಕ ಕಲಿಕೆಗೆ ಪೂರಕವಾಗಲಿವೆ ಎಂದು ಹೇಳಿದರು.

ಅಂಕಗಳ ಗಳಿಕೆಗೆ, ಗಣಿತದ ಕಲಿಕೆಗೆ ಉತ್ತೇಜನಕಾರಿಯಾಗಿವೆ. ವಿರಾಮದ ಕಾಲವನ್ನು ಸದುಪಯೋಗಪಡಿಸಿಕೊಂಡು ದೈಹಿಕ ಹಾಗೂ ಭೌತಿಕ ವಿಕಾಸಕ್ಕೆ ಸಹಾಯಕವಾಗುವ ಆಟಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕು. ಮುಖ್ಯವಾಗಿ ಇಂದಿನ ದಿನಮಾನದಲ್ಲಿ ಅತಿಯಾದ ಮೊಬೈಲ್ ಬಳಕೆಯ ಗೀಳಿಗೆ ಒಳಗಾಗಿರುವ ಮಕ್ಕಳನ್ನು ಚತುರ ಆಟಗಳು ಪರಿವರ್ತಿಸುವಂತಹ ಶಕ್ತಿಯನ್ನು ಹೊಂದಿವೆ. ಮೊಬೈಲ್ ಗೇಮಿಂಗ್ ಬದಲಾಗಿ ಚತುರ ಆಟಗಳಲ್ಲಿ ಮಕ್ಕಳು ಲೀನವಾಗಬೇಕು. ಆ ಹಿನ್ನೆಲೆಯಲ್ಲಿ ಗ್ರಾಮ ಮಟ್ಟದಲ್ಲಿ ಈ ಕಾರ್ಯ ಕ್ರಮಕ್ಕೆ ಜಿಲ್ಲೆಯಾದ್ಯಂತ ಮಕ್ಕಳ ದಿನಾಚರಣೆಯ ನವೆಂಬರ್ ೧೪ ರಂದು ಚಾಲನೆ ನೀಡಲಾಗಿತ್ತು. ಈ ಉತ್ಸವದಲ್ಲಿ ಜಿಲ್ಲೆಯ ಗ್ರಾಮೀಣ ಮಕ್ಕಳು ಬಹಳ ಉತ್ಸುಕತೆಯಿಂದ ೫,೫೦೪ ಮಕ್ಕಳು ಭಾಗವಹಿಸಿದ್ದರು.

ಗ್ರಾಮ ಮಟ್ಟದಲ್ಲಿ ವಿಜೇತರಾದವರು ತಾಲ್ಲೂಕು ಮಟ್ಟದಲ್ಲಿ ಭಾಗವಹಿಸಿರುತ್ತಾರೆ. ಅಲ್ಲಿ ವಿಜೇತರಾದವರು ಇಂದು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಪ್ರತಿ ಹಂತದಲ್ಲೂ ವಿಜೇತರಿಗೆ ಆಕರ್ಷಕ ನಗದು ಬಹುಮಾನವನ್ನು ಹಾಗೂ ಪ್ರಮಾಣ ಪತ್ರಗಳನ್ನು ನೀಡಲಾಗಿದ್ದು, ಇದಕ್ಕಾಗಿ ಸುಮಾರು ೨೧ ಲಕ್ಷಗಳನ್ನು ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಚೆಸ್ ಚಾಂಪಿಯನ್ ಶಿಪ್ ಆಯೋಜನೆ

ವಿನೂತವಾಗಿ ಆರಂಭಿಸಿರುವ ಚತುರ ಆಟಗಳ ಉತ್ಸವಕ್ಕೆ ಮುಂದಿನ ದಿನಗಳಲ್ಲಿ ಚದುರಂಗ ಹಾಗೂ ಕೇರಂ ಜೊತೆಗೆ ಇತರ ಕ್ರೀಡೆಗಳನ್ನು ಸೇರಿಸಲು ಚಿಂತಿಸಲಾಗಿದೆ. ಮುಖ್ಯವಾಗಿ ಚದುರಂಗದಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದವರನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಕಳುಹಿಸಬೇಕು. ಹೆಚ್ಚಿನ ಕಲಿಕೆಗೆ ಒಲವು ತೋರುವವರಿಗೆ ಚದುರಂಗ ತಜ್ಞರಿಂದ ತರಬೇತಿ ನೀಡಿ ಜಿಲ್ಲೆಯಲ್ಲಿ ಚೆಸ್ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸ ಬೇಕು. ಆ ಮೂಲಕ ಜಿಲ್ಲೆಯಲ್ಲಿಯೆ ಒಂದು ಚೆಸ್ ಚಾಂಪಿಯನ್ ಶಿಪ್ ಆಯೋಜಿಸು ವಂತಾಗಬೇಕು ಎಂದು ತಿಳಿಸಿದರು.

ಈ ಚತುರ ಉತ್ಸವಕ್ಕೆ ಒಲವು ತೋರಿದ ಮಕ್ಕಳು ಹಾಗೂ ಅವರ ಪೋಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಣ ಇಲಾಖೆ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಯ ಅಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯ್ತಿಯ ಎಲ್ಲಾ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗಕ್ಕೆ ವಂದನೆಗಳನ್ನು ತಿಳಿಸಿದ್ದರು.

ಜಿಲ್ಲಾ ಪಂಚಾಯತ್ ನ ಸಹಾಯಕ ಕಾರ್ಯದರ್ಶಿ ಮುನಿರಾಜು ಅವರು ಮಾತನಾಡಿ, ೬ ರಿಂದ ೧೪ ವರ್ಷದೊಳಗಿನ ಗ್ರಾಮೀಣ ಮಕ್ಕಳು ಚತುರ ಆಟಗಳ ಸ್ಪರ್ಧೆಗಳಲ್ಲಿ ಭಾಗವಹಿಸಿರುತ್ತಾರೆ. ಈ ಚತುರ ಆಟಗಳ ಉತ್ಸವವು ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋ ಭಾವನೆಯನ್ನು ಗ್ರಾಮೀಣ ಮಕ್ಕಳಲ್ಲಿ ಸೃಷ್ಟಿಸುತ್ತದೆ.

ಗ್ರಾಮ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರಿಗೆ ೩೦೦೦ , ದ್ವಿತೀಯ ಸ್ಥಾನ ಪಡೆದವರಿಗೆ ೨೦೦೦ ಹಾಗೂ ತೃತೀಯ ಸ್ಥಾನ ಪಡೆದವರಿಗೆ ೧೦೦೦ ನಗದು ಹಾಗೂ ಪುಸ್ತಕ ಮತ್ತು ಪ್ರಮಾಣ ಪತ್ರಗಳನ್ನು ಬಹುಮಾನವಾಗಿ ವಿತರಿಸಲಾಗಿದೆ. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರಿಗೆ ೫೦೦೦, ದ್ವಿತೀಯ ಸ್ಥಾನ ಪಡೆದವರಿಗೆ ೩೦೦೦ ಹಾಗೂ ತೃತೀಯ ಸ್ಥಾನ ಪಡೆದವರಿಗೆ ೨೦೦೦ನಗದು ಹಾಗೂ ಪುಸ್ತಕ ಮತ್ತು ಪ್ರಮಾಣ ಪತ್ರಗಳನ್ನು ಬಹುಮಾನವಾಗಿ ವಿತರಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರಿಗೆ ೧೦,೦೦೦, ದ್ವಿತೀಯ ಸ್ಥಾನ ಪಡೆದವರಿಗೆ ೭,೫೦೦ ಹಾಗೂ ತೃತೀಯ ಸ್ಥಾನ ಪಡೆದವರಿಗೆ ೫,೦೦೦ ನಗದು ಹಾಗೂ ಪುಸ್ತಕ ಮತ್ತು ಪ್ರಮಾಣ ಪತ್ರ ಗಳನ್ನು ಬಹುಮಾನವಾಗಿ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಮುನಿರಾಜು, ಗುಡಿಬಂಡೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ನಾಗಮಣಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿ.ರಮೇಶ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ಹಾಗೂ ಸಿಬ್ಬಂದಿ ವರ್ಗದವರು, ಪೋಷಕರು, ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.