ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಿಎಲ್‌ಡಿ, ಡಿಸಿಸಿ ಬ್ಯಾಂಕ್ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಪಿಎಲ್‌ಡಿ ಬ್ಯಾಂಕ್‌ಗೆ ಪುನಶ್ಚೇತನ ನೀಡಿರುವ ಶಾಸಕ ಸುಧಾಕರ್ ರೆಡ್ಡಿ ಅವರಿಗೆ ತಾಲೂಕಿನ ರೈತರು ಹಾಗೂ ಸಾರ್ವಜನಿಕರ ಪರವಾಗಿ ಅಭಿನಂದನೆ ಸಲ್ಲಿಸಿದ ಅವರು, ಕೋಲಾರ ಶಾಸಕ ಮಂಜುನಾಥ್ ಅವರ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕ್‌ಗೂ ಮರುಚಾಲನೆ ದೊರೆತಿದೆ. ಇದರಿಂದ ರೈತರು ಹಾಗೂ ಮಹಿಳೆಯರಿಗೆ ಸಾಲ ಸೌಲಭ್ಯ ಸೇರಿದಂತೆ ಹಲವು ಪ್ರಯೋಜನಗಳು ದೊರೆಯುವ ನಿರೀಕ್ಷೆಯಿದೆ ಎಂದರು

ಪಿಎಲ್‌ಡಿ, ಡಿಸಿಸಿ ಬ್ಯಾಂಕ್ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

-

Profile
Ashok Nayak Sep 23, 2026 9:15 PM

ಚಿಂತಾಮಣಿ: ಪಿಎಲ್‌ಡಿ ಹಾಗೂ ಡಿಸಿಸಿ ಬ್ಯಾಂಕ್‌(DCC Bank)ಗಳ ಪುನಶ್ಚೇತನದಿಂದ ತಾಲೂಕಿನ ರೈತರು ಮತ್ತು ಮಹಿಳೆಯರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಂಘದ ಮುಖಂಡ ಮುರುಗಮಲ್ಲ ಲಕ್ಷ್ಮೀನಾರಾಯಣ ರೆಡ್ಡಿ ಹೇಳಿದರು. ತಾಲ್ಲೂಕಿನ ನಂದಿಗಾನ ಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಪಿಎಲ್‌ಡಿ ಬ್ಯಾಂಕ್‌ಗೆ ಪುನಶ್ಚೇತನ ನೀಡಿರುವ ಶಾಸಕ ಸುಧಾಕರ್ ರೆಡ್ಡಿ ಅವರಿಗೆ ತಾಲೂಕಿನ ರೈತರು ಹಾಗೂ ಸಾರ್ವಜನಿಕರ ಪರವಾಗಿ ಅಭಿನಂದನೆ ಸಲ್ಲಿಸಿದ ಅವರು, ಕೋಲಾರ ಶಾಸಕ ಮಂಜುನಾಥ್ ಅವರ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕ್‌ಗೂ ಮರುಚಾಲನೆ ದೊರೆತಿದೆ. ಇದರಿಂದ ರೈತರು ಹಾಗೂ ಮಹಿಳೆಯರಿಗೆ ಸಾಲ ಸೌಲಭ್ಯ ಸೇರಿದಂತೆ ಹಲವು ಪ್ರಯೋಜನಗಳು ದೊರೆಯುವ ನಿರೀಕ್ಷೆಯಿದೆ ಎಂದರು.

ಇದನ್ನೂ ಓದಿ: Megastar Dr Chiranjeevi: ಮೆಗಾಸ್ಟಾರ್ ಕೈಯಿಂದ ಪ್ರಶಸ್ತಿ ಸ್ವೀಕಾರ: ಸಮಾಜಸೇವೆಗೆ ಚಿರಂಜೀವಿ ಅವರ ಪ್ರೇರಣೆಯೇ ಬಲ: ನಾರಾಯಣಸ್ವಾಮಿ

ಹಿಂದೆ ರೈತರಿಗೆ 2ರಿಂದ 3 ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯು ತ್ತಿತ್ತು. ಸಾಲ ಮರುಪಾವತಿಯೂ ಉತ್ತಮವಾಗಿತ್ತು. ಸ್ಥಗಿತಗೊಂಡಿದ್ದ ಈ ವ್ಯವಸ್ಥೆಗೆ ಮತ್ತೆ ಚಾಲನೆ ನೀಡುತ್ತಿರುವುದು ರೈತರು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನೆರವಾಗಲಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ರೈತರ ಹಿತ ಕಾಪಾಡಲು ಹಾಗೂ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುರುಗಮಲ್ಲ ಹೋಬಳಿ ವ್ಯಾಪ್ತಿ ಯಲ್ಲಿ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಚೆಕ್‌ಡ್ಯಾಂಗಳನ್ನು ನಿರ್ಮಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವ ಹಾಗೂ ನೀರು ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಮಸ್ತೇನಹಳ್ಳಿ, ಮುರುಗಮಲ್ಲ, ಕನ್ನಶೆಟ್ಟಿಹಳ್ಳಿ ಹಾಗೂ ಕಾಗತಿ ಭಾಗದಲ್ಲಿ ಸುಮಾರು 3,595 ಎಕರೆ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಯೋಜನೆ ರೂಪಿಸಲಾಗಿದೆ. ಇದರಿಂದ ರೈತರ ಮಕ್ಕಳು ಹಾಗೂ ಸ್ಥಳೀಯ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಮತ್ತು ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ದೊರೆಯಲಿದೆ ಎಂದು ಹೇಳಿದರು.

ಸಭೆಯಲ್ಲಿ ಸಂಘದ ಅಧ್ಯಕ್ಷ ಎಸ್.ಕೃಷ್ಣಮೂರ್ತಿ ಮಾತನಾಡಿ, ಸಂಘದ ಯಶಸ್ಸಿಗೆ ಸಹಕರಿಸಿದ ಹಾಲಿ ಹಾಗೂ ಮಾಜಿ ನಿರ್ದೇಶಕರು, ಅಧ್ಯಕ್ಷರು, ಸದಸ್ಯರು ಮತ್ತು ರೈತ ಬಾಂಧವರಿಗೆ ಕೃತಜ್ಞತೆ ಸಲ್ಲಿಸಿದರು. ಎಲ್ಲರೂ ಒಗ್ಗಟ್ಟಿನಿಂದ ಸಲಹೆ-ಸೂಚನೆಗಳನ್ನು ನೀಡುವ ಮೂಲಕ ಸಂಘವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಉಪಾಧ್ಯಕ್ಷೆ ರತ್ನಮ್ಮ, ನಿರ್ದೇಶಕರಾದ ಎನ್.ಸಿ.ಆಂಜನೇಯ ರೆಡ್ಡಿ, ವಿ.ನಾರಾಯಣಸ್ವಾಮಿ, ಬಿ.ಎನ್.ರಘುನಾಥ್ ರೆಡ್ಡಿ, ಜಯರಾಮ್ ರೆಡ್ಡಿ, ಬಿ.ಅಮೀರ್ ಜಾನ್, ಚನ್ನಕೇಶವ ರೆಡ್ಡಿ, ಎಸ್.ಕೃಷ್ಣಪ್ಪ, ಕೆ.ಎನ್.ಬೈರೆಡ್ಡಿ, ರಾಜಣ್ಣ, ಎಸ್.ಶೋಭಾ, ಮಾಜಿ ಗ್ರಾಪಂ ಅಧ್ಯಕ್ಷ ಹಾಜಿ ಅನ್ಸರ್ ಖಾನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಚೌಡರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತ ರಿದ್ದರು.