ಚಿಂತಾಮಣಿ: ನಗರದ ಹೃದಯ ಭಾಗದಲ್ಲಿರುವ ಪಿ.ಸಿ.ಆರ್ ಕಾಂಪ್ಲೆಕ್ಸ್ ಬಳಿ ಹೆಲ್ಮೆಟ್ ಧರಿಸದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ನಗರದ ಸಂಚಾರಿ ನಿಯಮಗಳ ಪಾಲನೆಗಾಗಿ ಪೊಲೀಸರು ವಾಹನ ತಪಾಸಣೆ ನಡೆಸು ತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹೆಲ್ಮೆಟ್ ಧರಿಸದ ಸವಾರರನ್ನು ತಡೆದ ಪೊಲೀಸರು ದಂಡ ವಿಧಿಸಲು ಮುಂದಾದಾಗ, ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಇದನ್ನೂ ಓದಿ: Chinthamani News: ಗಣತಿದಾರರ ಸಮಸ್ಯೆಗಳ ಬಗೆಹರಿಸುವಂತೆ ನೌಕರರ ಸಂಘದಿಂದ ಮನವಿ
ಪೊಲೀಸರು ಏಕವಚನದಲ್ಲಿ ಮಾತನಾಡುತ್ತಿದ್ದಾರೆ ಮತ್ತು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಸುರಕ್ಷತೆ ಮತ್ತು ನಿಯಮಗಳ ಪಾಲನೆಗಾಗಿ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸುವ ಬದಲು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬುದು ಪೊಲೀಸರ ವಾದವಾಗಿದೆ.
ಘಟನೆಯ ವೇಳೆ ಅಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪೊಲೀಸರು ಮತ್ತು ಯುವಕರ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆಯುತ್ತಿರುವುದು ಕಂಡುಬಂದಿದೆ.