ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರೌಡಿಶೀಟರ್‌ಗಳ ಮೇಲೆ ಪೊಲೀಸರ ಕಟ್ಟುನಿಟ್ಟಿನ ನಿಗಾ: ಗೈರು ಹಾಜರಿಗೆ ಕ್ರಮ

ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಅವರ ನೇತೃತ್ವದಲ್ಲಿ ರೌಡಿ ಶೀಟರ್‌ಗಳ ಪರೇಡ್ ನಡೆಸಲಾಯಿತು. ಈ ವೇಳೆ ಠಾಣಾ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್‌ ಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಪರಿಶೀಲನೆ ನಡೆಸಲಾಯಿತು. ಗೈರು ಹಾಜರಾಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿ ದರು.

ಶಿಡ್ಲಘಟ್ಟ: ರೌಡಿ ಶೀಟರ್‌ಗಳ ಮೇಲಿನ ಪೊಲೀಸ್ ನಿಗಾವಣೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಪರೇಡ್‌ಗೆ ಗೈರುಹಾಜರಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಡಿವೈಎಸ್ಪಿ ಮುರಳಿಧರ್ ಎಚ್ಚರಿಕೆ ನೀಡಿದರು.

ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಅವರ ನೇತೃತ್ವದಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಲಾಯಿತು. ಈ ವೇಳೆ ಠಾಣಾ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್‌ಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಪರಿಶೀಲನೆ ನಡೆಸಲಾಯಿತು. ಗೈರು ಹಾಜರಾಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿ ದರು.

ಇದನ್ನೂ ಓದಿ: Shidlaghatta News: ಜನಗಣತಿ ಪ್ರಕ್ರಿಯೆ ಸುಗಮಗೊಳಿಸಲು ಶಿಕ್ಷಕರಿಗೆ ವಿಶೇಷ ತರಬೇತಿ

ಶಿಡ್ಲಘಟ್ಟ ನಗರ, ಗ್ರಾಮಾಂತರ ಹಾಗೂ ದಿಬ್ಬೂರಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತ್ಯಂತ ಪ್ರಮುಖವಾಗಿದೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ಇಂತಹ ನಿಯಮಿತ ಪರೇಡ್‌ಗಳ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸು ವುದರ ಜೊತೆಗೆ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವುದು ಪೊಲೀಸರ ಉದ್ದೇಶ ವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ ಆನಂದ್, ಪಿಎಸ್‌ಐ ವೇಣುಗೋಪಾಲ್, ಸುನಿಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.