Chikkaballapur News: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಪೋಸ್ಟರ್: ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ವಾಗ್ವಾದ
ಅವಹೇಳನಕಾರಿ ಪೋಸ್ಟರ್‌ಗಳನ್ನು ನಗರದ ಹಲವೆಡೆ ಅಂಟಿಸುವುದು ಹಾಗೂ ಸಾಗಿಸುತ್ತಿರುವುದರ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ನಗರ ಸಭಾ ಅಧ್ಯಕ್ಷ ಎ.ಗಜೇಂದ್ರ ಸೇರಿದಂತೆ ಹಲವರು ಸ್ಥಳಕ್ಕೆ ಆಗಮಿಸಿದ್ದಾರೆ. ವಾಹನದಲ್ಲಿದ್ದ ಪೋಸ್ಟರ್‌ಗಳನ್ನು ಕಂಡು ಸಂಸದರ ವಿರುದ್ಧ ಅವಹೇಳನಕಾರಿಯಾಗಿ ಪ್ರಚಾರ ಕೈಗೊಳ್ಳುತ್ತಿರು ವುದು ಏಕೆ? ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

ಸಂಸದ ಸುಧಾಕರ್ ಭಾವಚಿತ್ರವುಳ್ಳ ಅಪಪ್ರಚಾರದ ಪೋಸ್ಟರ್‌ಗಳನ್ನು ತಡರಾತ್ರಿ ನಗರದ ಪ್ರಮುಖ ಬೀದಿಗಳಲ್ಲಿ ಅಂಟಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ವಾಗ್ವಾದ ನಡೆದು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ ಭಾವಚಿತ್ರವುಳ್ಳ ಅಪಪ್ರಚಾರದ ಪೋಸ್ಟರ್‌ಗಳನ್ನು ತಡರಾತ್ರಿ ನಗರದ ಪ್ರಮುಖ ಬೀದಿಗಳಲ್ಲಿ ಅಂಟಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ವಾಗ್ವಾದ ನಡೆದು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಅವಹೇಳನಕಾರಿ ಪೋಸ್ಟರ್‌ಗಳನ್ನು ನಗರದ ಹಲವೆಡೆ ಅಂಟಿಸುವುದು ಹಾಗೂ ಸಾಗಿಸುತ್ತಿರುವುದರ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ನಗರ ಸಭಾ ಅಧ್ಯಕ್ಷ ಎ.ಗಜೇಂದ್ರ ಸೇರಿದಂತೆ ಹಲವರು ಸ್ಥಳಕ್ಕೆ ಆಗಮಿಸಿದ್ದಾರೆ. ವಾಹನದಲ್ಲಿದ್ದ ಪೋಸ್ಟರ್‌ಗಳನ್ನು ಕಂಡು ಸಂಸದರ ವಿರುದ್ಧ ಅವಹೇಳನಕಾರಿಯಾಗಿ ಪ್ರಚಾರ ಕೈಗೊಳ್ಳುತ್ತಿರು ವುದು ಏಕೆ? ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ. ಈ ವೇಳೆ ಪರಸ್ಪರರ ನಡುವೆ ಮಾತಿನ ಚಕಮಕಿ ನಡೆದು ಸವಾಲು ಪ್ರತಿಸವಾಲು ಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Chikkaballapur News: ರಾಜಲಕ್ಷ್ಮೀ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ
ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಚಾಣಾಕ್ಷತೆ ಪ್ರದರ್ಶಿಸಿ ಎರಡೂ ಗುಂಪುಗಳನ್ನು ಚದುರಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪರ-ವಿರೋಧದ ಚರ್ಚೆಗಳು ಜೋರಾಗಿದೆ.
ಈ ಸಂಬAಧ ನಗರದ ಪೊಲೀಸ್ ಠಾಣೆ ಮುಂಭಾಗ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಮುಖಂಡರು ಸಂಸದರ ಮಾನಹಾನಿ ಮಾಡುವ ಪೋಸ್ಟರ್‌ಗಳನ್ನು ಕಾಂಗ್ರೆಸ್ ಮುಖಂಡ ರಾದ ವಿನಯ್ ಬಂಗಾರಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಕ ಸದಸ್ಯ ಹಮೀಮ್ ಸೇರಿ ಹಂಚುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಪೊಲೀಸರನ್ನು ಒತ್ತಾಯಿಸಿದರು.