ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Power Cut: ಜೂ.8ರಂದು ಚಿಕ್ಕಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Power Cut: ಚಿಕ್ಕಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಜೂ.8 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.

ಜೂ.8ರಂದು ಚಿಕ್ಕಬಳ್ಳಾಪುರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಸಾಂದರ್ಭಿಕ ಚಿತ್ರ.

Profile Siddalinga Swamy Jun 6, 2025 9:57 PM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಜೂ.8 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Power Cut) ಉಂಟಾಗಲಿದೆ.

66/11 ಕೆವಿ ನಗರ ಉಪ ವಿದ್ಯುತ್ ವಿತರಣಾ ಕೇಂದ್ರದ ಸರಬರಾಜಾಗುವ ಎಫ್-2 ಎ.ಪಿ.ಎಂ.ಸಿ ಯಾರ್ಡ್, ಎಫ್-07 ಲೋಕಲ್, ಎಫ್-12 ಬಿಬಿ ರಸ್ತೆ, ಫೀಡರ್‌ಗಳು ಮತ್ತು 66/11 ಕೆವಿ ಉಪ ವಿದ್ಯುತ್ ವಿತರಣಾ ಕೇಂದ್ರ ಕೈಗಾರಿಕಾ ಪ್ರದೇಶ ಚಿಕ್ಕಬಳ್ಳಾಪುರ ಕೇಂದ್ರಗಳಿಂದ ಸರಬರಾಜಾಗುವ ಎಫ್-07 ಕೈಗಾರಿಕಾ ಪ್ರದೇಶ, ಎಫ್-08 ಲೋಕಲ್, ಎಫ್-11 ಕೆಳಗಿನತೋಟ ಮತ್ತು ಗೌರಿಬಿದನೂರು 66/11 ಕೆವಿ ಉಪ ವಿದ್ಯುತ್ ವಿತರಣಾ ಕೇಂದ್ರದಿಂದ ಸಸರಬರಾಜಾಗುವ ಎಫ್-08 ಇಂಡಸ್ಟ್ರಿಯಲ್ ಫೀಡರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Eco Friendly Fashion 2025: ಗ್ಲಾಮರಸ್ ವಿನ್ಯಾಸದಲ್ಲಿ ಕಾಲಿಟ್ಟ ಪರಿಸರ ಸ್ನೇಹಿ ಉಡುಪುಗಳು