ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

PrajaSeva: ಸೆ.12ರಂದು ಬಶೆಟ್ಟಹಳ್ಳಿಯಲ್ಲಿ ಪ್ರಜಾ ಸೇವಾ ಆಂದೋಲನ: ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಗಗನ ಸಿಂಧು ಮನವಿ

ಸೆ.12ರಂದು ಬಶೇಟಹಳ್ಳಿ ಕೆಎನ್‌ಎಸ್ ಶಾಲೆಯಲ್ಲಿ ಪ್ರಜಾ ಸೇವಾ ಆಂದೋಲನ ನಡೆಯಲಿದೆ. ಬಶೆಟ್ಟ ಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳು ಮತ್ತು ಅಹವಾಲು ಗಳನ್ನು ಕಾರ್ಯಕ್ರಮದಲ್ಲಿ ಸಲ್ಲಿಸಬಹುದಾಗಿದೆ. ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ

ಶಿಡ್ಲಘಟ್ಟ: ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಂಬAಧಪಟ್ಟ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರತಿ ಶನಿವಾರ ‘ಪ್ರಜಾ ಸೇವಾ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಸೆ.12ರಂದು ಬಶೆಟ್ಟಹಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಗಗನ ಸಿಂಧು ಹೇಳಿದರು.

ತಾಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಜನರು ತಮ್ಮ ಸಮಸ್ಯೆಗಳಿಗಾಗಿ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸಿ, ಆಡಳಿತ ವ್ಯವಸ್ಥೆಯನ್ನು ಜನರ ಬಳಿಗೆ ಕೊಂಡೊಯ್ಯುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಇದನ್ನೂ ಓದಿ; Shidlaghatta News: ಶಿಡ್ಲಘಟ್ಟ ನಗರದಲ್ಲಿ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ

ಸೆ.12ರಂದು ಬಶೇಟಹಳ್ಳಿ ಕೆಎನ್‌ಎಸ್ ಶಾಲೆಯಲ್ಲಿ ಪ್ರಜಾ ಸೇವಾ ಆಂದೋಲನ ನಡೆಯಲಿದೆ. ಬಶೆಟ್ಟಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಕಾರ್ಯಕ್ರಮದಲ್ಲಿ ಸಲ್ಲಿಸಬಹುದಾಗಿದೆ. ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗೆ ಸಂಬಂಧಿಸಿದ ಅರ್ಜಿಗಳನ್ನು ಸರಿಯಾದ ರೀತಿಯಲ್ಲಿ ಬರೆದು ಕೊಂಡು, ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿಯಲ್ಲಿ ಸಮಸ್ಯೆಯನ್ನು ಸ್ಪಷ್ಟವಾಗಿ ನಮೂದಿಸುವುದರಿಂದ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದರು.

“ಬಶೆಟ್ಟಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇಂದು ನಡೆಯುವ ಪ್ರಜಾ ಸೇವಾ ಆಂದೋಲನದಲ್ಲಿ ಭಾಗವಹಿಸಿ. ನಿಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಿರಿ. ಸಮಸ್ಯೆಗೆ ಸಂಬಂಧಿಸಿದ ಅರ್ಜಿಯನ್ನು ಸರಿಯಾಗಿ ಸಿದ್ಧಪಡಿಸಿಕೊಂಡು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಿ.

ಸಾರ್ವಜನಿಕರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ತ್ವರಿತವಾಗಿ ನಿಯಮಾನುಸಾರ ಪರಿಹಾರ ಕಲ್ಪಿಸಲು ಅಧಿಕಾರಿಗಳು ಸ್ಪಂದಿಸಲಿದ್ದಾರೆ. ಆದ್ದರಿಂದ ಯಾರೂ ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಹಶೀಲ್ದಾರ್ ಗಗನ ಸಿಂಧು ಸಾರ್ವಜನಿಕರಿಗೆ ಮನವಿ ಮಾಡಿದರು.