ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gauribidanur News: ಮಕ್ಕಳ ಪ್ರತಿಭೆ ಗುರುತಿಸುವ ಉತ್ತಮ ವೇದಿಕೆ ಪ್ರತಿಭಾ ಕಾರಂಜಿ : ಶಿವಕುಮಾರರೆಡ್ಡಿ

ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಪ್ರತಿಭೆ ಮತ್ತು ಕ್ರೀಯಾಶೀಲತೆ ಅಡಗಿರು ತ್ತದೆ, ಶಿಕ್ಷಕರು ಅದಕ್ಕೆ ಅಗತ್ಯವಾದ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಿದಲ್ಲಿ ಅವರು ಸಮಾಜಕ್ಕೆ ಆಸ್ತಿಗಳಾಗುತ್ತಾರೆ, ಪೋಷಕರು ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಗೆ ಪ್ರೇರಣಾದಾತರಾದಾಗ ಮಾತ್ರ ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಲ್ಲಿ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಸಾಧ್ಯವಾಗುತ್ತದೆ

ಮಕ್ಕಳ ಪ್ರತಿಭೆ ಗುರುತಿಸುವ ಉತ್ತಮ ವೇದಿಕೆ ಪ್ರತಿಭಾ ಕಾರಂಜಿ

ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸುವ ಉತ್ತಮ ವೇದಿಕೆಗಳಾಗಿವೆ ಎಂದು ಗ್ರಾ.ಪಂ ಅಧ್ಯಕ್ಷರಾದ ಶಿವಕುಮಾರರೆಡ್ಡಿ ತಿಳಿಸಿದರು. -

Ashok Nayak
Ashok Nayak Nov 28, 2025 8:26 PM

ಗೌರಿಬಿದನೂರು: ಪ್ರತಿಭಾ ಕಾರಂಜಿಯAತಹ ವೇದಿಕೆಗಳು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸುವ ಉತ್ತಮ ವೇದಿಕೆಗಳಾಗಿವೆ ಎಂದು ಗ್ರಾ.ಪಂ ಅಧ್ಯಕ್ಷ ಶಿವಕುಮಾರರೆಡ್ಡಿ ತಿಳಿಸಿದರು.

ತಾಲ್ಲೂಕಿನ ಕಾಚಮಾಚೇನಹಳ್ಳಿ ಸಮೀಪದ ಶ್ರೀಬೊಮ್ಮಲಿಂಗೇಶ್ವರ ದೇವಾಲಯದ ಸಭಾಂಗಣ ದಲ್ಲಿ ಶುಕ್ರವಾರ ಆಯೋಜಿಸಿದ್ದ ಗೆದರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಚಾಳನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಪ್ರತಿಭೆ ಮತ್ತು ಕ್ರೀಯಾಶೀಲತೆ ಅಡಗಿರು ತ್ತದೆ, ಶಿಕ್ಷಕರು ಅದಕ್ಕೆ ಅಗತ್ಯವಾದ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಿದಲ್ಲಿ ಅವರು ಸಮಾಜಕ್ಕೆ ಆಸ್ತಿಗಳಾಗುತ್ತಾರೆ, ಪೋಷಕರು ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಗೆ ಪ್ರೇರಣಾದಾತರಾದಾಗ ಮಾತ್ರ ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಲ್ಲಿ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಸಾಧ್ಯವಾಗುತ್ತದೆ ಎಂದ ಅವರು ಕ್ಲಸ್ಟರ್ ಮಟ್ಟದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸ್ಥಳೀಯ ಗ್ರಾ.ಪಂ ಯಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Gauribidanur News: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದು ರೈತರ ಹಿತ ಕಾಪಾಡಬೇಕು: ಎಂ .ಆರ್. ಲಕ್ಷ್ಮೀನಾರಾಯಣ್ ಆಗ್ರಹ

ಮುಖಂಡರಾದ ಜಿ.ಬೊಮ್ಮಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ದೇಶಕ್ಕೆ ಮಕ್ಕಳೇ ನಿಜವಾದ ಆಸ್ತಿ, ಅವರ ಪ್ರಾಥಮಿಕ ಶಿಕ್ಷಣವನ್ನು ಗುಣಾತ್ಮಕ ಮತ್ತು ಮೌಲ್ಯಾಧಾರಿತವಾಗಿ ರೂಪಿಸಿದಲ್ಲಿ ಸಮಸಮಾಜದ ಜತೆಗೆ ಸದೃಢವಾದ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಸಹಕಾರಿ ಯಾದಂತಾಗುತ್ತೇವೆ. ಪ್ರತೀ ವಿದ್ಯಾರ್ಥಿಯಲ್ಲಿನ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ನೀಡುವುದು ಅಗತ್ಯ ವಾಗಿದೆ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಆರ್.ಮಂಜುನಾಥ್ ಮಾತನಾಡಿ, ಸರ್ಕಾರಿ ಶಾಲೆಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬದುಕಿಗೆ ಭದ್ರ ಬುನಾದಿಯನ್ನು ನೀಡುತ್ತಿವೆ. ಸರ್ಕಾ ರವು ಮಕ್ಕಳ ಕಲಿಕೆಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ 'ಪ್ರತಿಭಾ ಕಾರಂಜಿ' ಯು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ನಿವೃತ್ತ ಶಿಕ್ಷಕರಾದ ಜಯರಾಮಯ್ಯ, ಹನುಮಂತರಾಯಪ್ಪ ಮತ್ತು ಚಾಂದ್ ಬಾಷ ರವರನ್ನು ಶಿಕ್ಷಕರು ಮತ್ತು ಪೋಷಕರು ಆತ್ಮೀಯವಾಗಿ ಅಭಿನಂಧಿಸಿದರು. ಎಲ್ಲ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಧ್ಯಾಹ್ನ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ನಾಗರಾಜಪ್ಪ, ಲಕ್ಷ್ಮಿನರಸಮ್ಮ, ಸುಕನ್ಯ, ನಾಗರಾಜು, ರಾಜೇಶ್, ಎಸ್ ಡಿ ಎಂಸಿ ಅಧ್ಯಕ್ಷರಾದ ಕೆ.ಸಿ.ನರಸಿಂಹಮೂರ್ತಿ, ಬಿ ಆರ್ ಪಿ ರವೀಂದ್ರ, ಸಿ ಆರ್ ಪಿ ಗಳಾದ ನಾಗರಾಜ್, ಬಾಲರಾಜು, ಕಾಂತರಾಜು, ರಮೇಶ್ ಬಾಬು, ಮುಖ್ಯ ಶಿಕ್ಷಕರಾದ ನಾರಾಯಣಪ್ಪ, ರಾಮಕೃಷ್ಣಪ್ಪ, ಶಿವಣ್ಣ, ನಾಗರಾಜು, ಪದ್ಮಾವತಮ್ಮ, ಲಕ್ಷ್ಮಿನರಸಪ್ಪ, ಮಲ್ಲಿಕಾರ್ಜುನ, ರಫೀ ಉಲ್ಲಾ, ಶಿವಕುಮಾರ್, ಶ್ರೀನಾಥ್,  ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಮತ್ತು ಪೋಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.