ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Dr. M.C. Sudhakar: ಬಿಸಿಗಾಳಿ ತಡೆಗೆ ಮುನ್ನೆಚ್ಚರಿಕೆ ಅಗತ್ಯ : ಕುಡಿಯುವ ನೀರಿನ ಸಮಸ್ಯೆಗೆ ಸಮರೋಪಾದಿ ಕ್ರಮ ವಹಿಸಿ: ಸಚಿವ ಡಾ.ಎಂ.ಸಿ. ಸುಧಾಕರ್ ಮನವಿ

ರಾಜ್ಯದಲ್ಲಿ ಈ ವರ್ಷ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದ ಮಳೆ ಆಗಲಿದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗಬಹುದು ಎಂದು ಅಭಿಪ್ರಾಯಿಸಿದೆ. ಮಳೆಯ ವೈಪರೀತ್ಯಗಳು ಏನೇ ಆದರೂ ನೀರು ಪೂರೈಕೆ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೊರೆದಿರುವ ೩೧೩ ಕೊಳವೆ ಬಾವಿಗಳಿಗೆ ಒಂದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ನೀರು ಪೂರೈಸಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಬಿಸಿಗಾಳಿ ತಡೆಗೆ ಮುನ್ನೆಚ್ಚರಿಕೆ ಅಗತ್ಯ :ಕುಡಿಯುವ ನೀರಿನ ಸಮಸ್ಯೆಗೆ ಸಮರೋಪಾದಿ ಕ್ರಮವಹಿಸಿ  ಎಂದು  ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಮನವಿ ಮಾಡಿದರು.

ಚಿಕ್ಕಬಳ್ಳಾಪುರ: ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಾರ್ವಜನಿಕರು ಆರೋಗ್ಯ ಇಲಾಖೆಯವರು ಕಾಲಕಾಲಕ್ಕೆ ನೀಡಲಿರುವ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್(Dr. M.C. Sudhakar) ಮನವಿ ಮಾಡಿದರು.

ನಗರ ಹೊರವಲಯ  ಜಿಲ್ಲಾ ಪಂಚಾಯತ್ ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹವಾಮಾನ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಈ ವರ್ಷ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದ ಮಳೆ ಆಗಲಿದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗಬಹುದು ಎಂದು ಅಭಿಪ್ರಾಯಿಸಿದೆ. ಮಳೆಯ ವೈಪರೀತ್ಯಗಳು ಏನೇ ಆದರೂ ನೀರು ಪೂರೈಕೆ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೊರೆದಿರುವ ೩೧೩ ಕೊಳವೆ ಬಾವಿಗಳಿಗೆ ಒಂದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ನೀರು ಪೂರೈಸಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅಲ್ಲದೆ ಕುಡಿಯುವ ನೀರಿನ ಪೂರೈಕೆಯ ತುರ್ತು ಕ್ರಮಕ್ಕಾಗಿ ರಾಜ್ಯ ಸರ್ಕಾರ 1.5 ಕೋಟಿ ಹಣವನ್ನು ಜಿಲ್ಲೆಗೆ ಬಿಡುಗಡೆ ಮಾಡಿದೆ. ಜೊತೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಅಗತ್ಯಕ್ಕೆ ತಕ್ಕಂತೆ ಅನುದಾನವನ್ನು ಕಾಲ ವಿಳಂಬವಿಲ್ಲದೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Dr. M.C. Sudhakar: ಸುಸಜ್ಜಿತ ನಗರ ನಿರ್ಮಾಣಕ್ಕೆ “ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರ” ಸಹಾಯಕಾರಿ: ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಮತ್ತು ಗೋಪಾಲಕೃಷ್ಣ ಅಮಾನಿ ಕರೆಗೆ ನಗರದ ಚರಂಡಿ ನೀರು ಸೇರುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಯಲು ಚಿಕ್ಕಬಳ್ಳಾಪುರ ನಗರಕ್ಕೆ ಪೂರ್ಣಪ್ರಮಾಣದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸಲು ೩೦ ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಕಾರ್ಯ ಟೆಂಡರ್ ಪ್ರಕ್ರಿಯೆಯ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ಕಳೆದ ಫೆಬ್ರವರಿಯಲ್ಲಿ 12 ಗ್ರಾಮಗಳು, ಮಾರ್ಚ್ ನಲ್ಲಿ 23 ಗ್ರಾಮಗಳು, ಪ್ರಸ್ತುತ 31 ಗ್ರಾಮ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರಿನ ಸಮರ್ಪಕ ಪೂರೈಕೆಗಾಗಿ ಖಾಸಗಿ ಕೊಳವೆ ಮಾಲಿಕರ ಸಹಕಾರ ಪಡೆದು ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರ್ತಿಸಲಾಗಿದೆ. ಅದಕ್ಕೆ ತಕ್ಕಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದು ಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

1k ಒಕ

ಖಚಿತ ಮಾಹಿತಿಯಿರಬೇಕು!
ಬೇಸಿಗೆ ತೀವ್ರಗೊಂಡಿದ್ದು ಬಿಸಿಹವೆ ಹೆಚ್ಚಾಗಿದ್ದು ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗ ಬಹುದು. ಇದನ್ನು ಮನಗಂಡು ತಹಶೀಲ್ದಾರ್ ಮತ್ತು ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯ ಮಾಹಿತಿ, ತಹಶೀಲ್ದಾರ್‌ಗಳು ನಡೆಸುವ  ಪಿಡಿಒ ಇತ್ಯಾದಿ ಸಂಬಂಧಿತ ಅಧಿಕಾರಿಗಳ ನೇತೃತ್ವದಲ್ಲಿ ನಡೆಸುವ ಸಭೆಯ ಮಾಹಿತಿ ಒಂದೇ ಆಗಿರಬೇಕು. ನಿಮ್ಮ ತಾಲೂಕಿನಲ್ಲಿ ಎಷ್ಟು ಹಳ್ಳಿಗಳಲ್ಲಿ ಹೋಬಳಿ ಪಂಚಾಯಿತಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಯಿದೆ ಎಂಬುದನ್ನು ಖಚಿತ ಅಂಕಿ ಅಂಶಗಳ ಸಹಿತಿ ತಿಳಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಾಕೀತು ಮಾಡಿದರು.
*

ನೀರಿನ ಕೊರತೆ ನೀಗಿಸುವ ಸಲುವಾಗಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ಸಮಸ್ಯೆ ನೀಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ವರ್ಗ-1ರ ಅನುದಾನದಲ್ಲಿ ಶೇ.30-40ರಷ್ಟು ಕುಡಿಯುವ ನೀರಿಗೆ ಬಳಸಲು ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಮಾತನಾಡಿದ ಸಣ್ಣ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ, ಮತ್ತು ಜೆಜೆಎಂ ಅಧಿಕಾರಿಗಳು ಯುದ್ಧದ ತೀವ್ರತೆ ಬೋರ್‌ವೆಲ್ ಕೊರೆಸುವುದರ ಮೇಲೂ ಆಗಿದೆ .ಎಸ್.ಆರ್.ಬೆಲೆಗಿಂತ ಹೆಚ್ಚಾಗಿದೆ.ಬಿಟ್‌ಗಳ ಬೆಲೆ ಹೆಚ್ಚಳವಾಗಿರುವುದೇ ಹೊಸ ಬೋರ್‌ವೆಲ್ ಕೊರೆಸಲು ಏಜೆನ್ಸಿಗಳು ಮುಂದೆ ಬರದಂತೆ ಆಗಿದೆ. ಆ ಪ್ರಕಾರ ಮಂಚೇನ ಹಳ್ಳಿ- 3, ಚಿಕ್ಕಬಳ್ಳಾಪುರ -8, ಗೌರಿಬಿದನೂರು-15 ಬಾಗೇಪಲ್ಲಿ-1 ಹೊಸ ಬೋರ್ ಕೊರೆಯಬೇಕಿದೆ ಎಂದರು.

ಈ ವೇಳೆ ಮಾತನಾಡಿದ ಸಚಿವರ 15 ದಿನಗಳಲ್ಲಿ ಹೊಸ ಬೋರ್ ಕೊರೆಸಬೇಕು. ಇಲ್ಲವಾ ದಲ್ಲಿ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಲೆಕ್ಕ ಪ್ರತ್ಯೇಕವಾಗಿರಲಿ
ಜಿಲ್ಲೆಯಲ್ಲಿ ಒಟ್ಟು 1272 ಶುದ್ಧಕುಡಿಯುವ ನೀರಿನ ಘಟಕಗಳಿದ್ದು ಈ ಪೈಕಿ 120 ಕೆಲಸ ಮಾಡುತ್ತಿಲ್ಲ, 30 ದುರಸ್ಥಿಯಲ್ಲಿವೆ. ಉಳಿದಂತೆ 1152 ಕೆಲಸ ಮಾಡುತ್ತಿವೆ.ಇವುಗಳನ್ನು   ಸುಸ್ಥಿತಿಯಲ್ಲಿಟ್ಟುಕೊಂಡು ಅವುಗಳಿಂದ ಬರುವ ಹಣದ ಲೆಕ್ಕಚಾರವನ್ನು ಪ್ರತ್ಯೇಕವಾಗಿ ಇಡುವ ವ್ಯವಸ್ಥೆ ಆಗಬೇಕು. 2012-13ರಲ್ಲಿ ಇವುಗಳು ಕಾರ್ಯಾರಂಭ ಮಾಡಿದಾಗ 20 ಲೀಟರ್‌ಗೆ 5 ರೂಪಾಯಿ ಪಡೆಯಲಾಗುತ್ತಿತ್ತು. ನಂತರದಲ್ಲಿ 10 ರೂಪಾಯಿ ಗೇರಿಸಲಾಗಿದೆ. ಇಷ್ಟಾದರೂ ಇದರ ಲೆಕ್ಕಾಚಾರ ಅಸ್ಪಷ್ಟವಾಗಿದೆ.ಇದು ಸೇವಾವಲಯವಾಗಿದ್ದು ಲಾಭದ ದೃಷ್ಟಿ ಇರಬಾರದು.ಇಲ್ಲಿನ ಹಣ ಇದರ ಯಂತ್ರೋಪಕರಣಗಳ ದುರಸ್ಥಿಗೆ ಬಳಸಬೇಕು. ಆದರೆ ಇದರ ಉಸ್ತುವಾರಿ ಮಾಡುತ್ತಿದ್ದವರು ಲಕ್ಷಗಟ್ಟಲೆ ವಿದ್ಯುತ್ ಬಿಲ್ ಬಾಕಿ ಉಳಿಸಿ ಕೊಂಡಿದ್ದಾರೆ. ಮುಂದೆ ಹೀಗಾಗಬಾರದು ಎಂದು ಎಚ್ಚರಿಸಿದರು.

12 ದಿನಕ್ಕೊಮ್ಮೆ ನೀರು ಆಶ್ಚರ್ಯ!!
ಬಾಗೇಪಲ್ಲಿ ಪಟ್ಟಣದಲ್ಲಿ 15 ದಿನಕ್ಕೊಮ್ಮೆ ನೀರು ಬಿಡುತ್ತಾರೆ. ಜನತೆಗೆ ಏನೆಂದು ಉತ್ತರ ಕೊಡಬೇಕು ಹೇಳಿ ಸಾರ್ ಎಂದು ಶಾಸಕ ಸುಬ್ಬಾರೆಡ್ಡಿ ಸಚಿವರು ಮತ್ತು ಜಿಲ್ಲಾಧಿಕಾರಿ ಗಳನ್ನು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ ಸಚಿವರು ಇದು ಅನ್ಯಾಯ. 3 ದಿನಕ್ಕೊಮ್ಮೆ ಶುದ್ಧಕುಡಿಯುವ ನೀರು ಹರಿಸಲು ಕ್ರಮವಹಿಸಿ,ಬೇಸಿಗೆಯಲ್ಲಿ ಹೀಗೆ ಮಾಡಿದರೆ ಹೇಗೆ? ಎಂದು ಬೇಸರಿಸಿದರು.ಈ ವೇಳೆ ಮಾತನಾಡಿದ ಅಧಿಕಾರಿಗಳು ಬಾಗೇಪಲ್ಲಿ ಪಟ್ಟಣದಲ್ಲಿ ನೀರು ವಿತರಣಾ ವ್ಯವಸ್ಥೆ ವೈಜ್ಞಾನಿಕವಾಗಿ ಇಲ್ಲದಿರುವುದು ಕೂಡ ಸಮಸ್ಯೆಗೆ ಕಾರಣವಾಗಿದೆ ಎಂದರು. ಈ ವೇಳೆ ದನಿಗೂಡಿಸಿದ ಜಿಲ್ಲಾಧಿಕಾರಿಗಳು ನಗರ ಪಟ್ಟಣ ಸ್ಥಳಿಯ ಸಂಸ್ಥೆಗಳಲ್ಲಿ 135 ಎಲ್‌ಪಿಸಿಡಿ ಕೊಡಲು ಸಾಧ್ಯವಿದೆ. ಶಿಡ್ಲಘಟ್ಟ, ಗೌರಿಬಿದನೂರು ತಾಲೂಕುಗಳಲ್ಲಿ ಈಗಾಗಲೇ ಕ್ರಮ ವಹಿಸಲಾಗಿದೆ. ಮುಂದಿನ 3 ವರ್ಷಗಳಲ್ಲಿ ಎಲ್ಲಾ ತಾಲೂಕುಗಳಲ್ಲಿ ಇದು ಅಂತಿಮ ಆಗಲಿದೆ ಎಂದರು.

ಎತ್ತಿನಹೊಳೆ ಯೋಜನೆ!!!
ಎತ್ತಿನಹೊಳೆ ನೀರು ಜಿಲ್ಲೆಗೆ ಬರುವಷ್ಟರ, ಜಕ್ಕಲಮೊಡಗು ಶ್ರೀನಿವಾಸಸಾಗರ, ಗೋಪಾಲ ಕೃಷ್ಣ ಕೆರೆ ಹೀಗೆ ಪ್ರತಿ ತಾಲೂಕಿಗೆ ಎರಡು ಮೂರು ಕೆರೆಗಳಂತೆ ಸಂಗ್ರಹಾಗಾರಗಳನ್ನು ಸಜ್ಜುಗೊಳಿಸಿಕೊಳ್ಳಬೇಕು. ಜಕ್ಕಲಮೊಡಗಿಗೆ ಹರಿಸಿದರೆ ದೊಡ್ಡಬಳ್ಳಾಪುರದ ಪಾಲಿನ ವಿಚಾರ ಬರಬಹುದು. ಇವನ್ನೆಲ್ಲಾ ನೋಡಿಕೊಂಡು ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಡಾ. ಎನ್. ಮಂಜುಳ, ಶಾಸಕರಾದ ಸುಬ್ಬಾರೆಡ್ಡಿ, ಕೆ.ಹೆಚ್.ಪುಟ್ಟಸ್ವಾಮಿಗೌಡ, ಬಿ.ಎನ್.ರವಿಕುಮಾರ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗಡೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್, ಚಿಮುಲ್ ಅಧ್ಯಕ್ಷ ಮಂಜುನಾಥರೆಡ್ಡಿ, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.