ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ದೇವಾಲಯಗಳ ಅಭಿವೃದ್ಧಿಗೆ ಆದ್ಯತೆ: ಅರ್ಚಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ: ತಹಶೀಲ್ದಾರ್ ಗಗನ ಸಿಂಧು

ನಗರದ ಕೋಟೆ ವೃತ್ತದಲ್ಲಿರುವ ಶ್ರೀ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಶಿಡ್ಲಘಟ್ಟ ತಾಲ್ಲೂಕು ಶಾಖೆ ವತಿಯಿಂದ ಆಯೋಜಿಸಿದ್ದ ಮುಜರಾಯಿ ಇಲಾಖೆಯ ದೇವಾಲಯಗಳ ಅರ್ಚಕರು ಹಾಗೂ ಪುರೋಹಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು

ಅರ್ಚಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ

-

Profile
Ashok Nayak Jun 17, 2026 9:45 PM

ಶಿಡ್ಲಘಟ್ಟ: ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳ ಅಭಿವೃದ್ಧಿ, ಆಸ್ತಿಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರು ಮತ್ತು ಪುರೋಹಿತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಗಗನ ಸಿಂಧು ಹೇಳಿದರು.

ನಗರದ ಕೋಟೆ ವೃತ್ತದಲ್ಲಿರುವ ಶ್ರೀ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಶಿಡ್ಲಘಟ್ಟ ತಾಲ್ಲೂಕು ಶಾಖೆ ವತಿಯಿಂದ ಆಯೋಜಿಸಿದ್ದ ಮುಜರಾಯಿ ಇಲಾಖೆಯ ದೇವಾಲಯಗಳ ಅರ್ಚಕರು ಹಾಗೂ ಪುರೋಹಿತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: Shidlaghatta News: ಕಾಂಗ್ರೆಸ್ ಒಗ್ಗಟ್ಟಿನ ಮಹೋತ್ಸವ: ಬಿ.ಕೆ. ಹರಿಪ್ರಸಾದ್ ಪದಗ್ರಹಣ, ಸಿದ್ದರಾಮಯ್ಯಗೆ ಕೃತಜ್ಞತೆ

ದೇವಾಲಯಗಳಿಗೆ ಸೇರಿದ ಜಾಗಗಳ ಒತ್ತುವರಿ ತೆರವು, ದೇವಾಲಯಗಳ ಅಭಿವೃದ್ಧಿ ಕಾಮಗಾರಿಗಳು, ಆಸ್ತಿಗಳ ರಕ್ಷಣೆ, ಅರ್ಚಕರು ಮತ್ತು ಪುರೋಹಿತರಿಗೆ ಗುರುತಿನ ಚೀಟಿ ವಿತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ದೇವಾಲಯಗಳ ಮೂಲ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಲು ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಭರವಸೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಅರ್ಚಕರು ಹಾಗೂ ಪುರೋಹಿತರು ತಮ್ಮ ಸಮಸ್ಯೆಗಳು ಮತ್ತು ಬೇಡಿಕೆ ಗಳನ್ನು ಅಧಿಕಾರಿಗಳ ಮುಂದಿಟ್ಟರು. ದೇವಾಲಯಗಳ ಆಸ್ತಿಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈ ಗೊಳ್ಳಬೇಕು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮುಜರಾಯಿ ಇಲಾಖೆಯ ಗುಮಾಸ್ತ ಅಂಬರೀಶ್, ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಅಧ್ಯಕ್ಷ ಕೆ.ವಿ. ಸತ್ಯನಾರಾಯಣ ಚಾರ್, ಎಸ್. ಸತ್ಯನಾರಾಯಣ ರಾವ್, ವೈ.ಎನ್.ಬಿ. ಜನಾರ್ಧನ್, ರಾಮ ಮೂರ್ತಿ, ಚಂದ್ರಶೇಖರ್ ಸೇರಿದಂತೆ ತಾಲೂಕಿನ ವಿವಿಧ ಮುಜರಾಯಿ ದೇವಾಲಯಗಳ ಅರ್ಚಕರು, ಆಗಮಿಕರು ಹಾಗೂ ಪುರೋಹಿತರು ಉಪಸ್ಥಿತರಿದ್ದರು.