ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜನಸ್ನೇಹಿ ಆಡಳಿತಕ್ಕೆ ಆದ್ಯತೆ: ಸರ್ಕಾರಿ ನೌಕರರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಲಹೆ

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಿಂದ ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವುದು ಹಾಗೂ ಸರ್ಕಾರದ ಸೇವೆಗಳು ಜನರಿಗೆ ಸುಲಭವಾಗಿ ತಲುಪುವಂತೆ ಮಾಡುವ ಕುರಿತು ಹಲವು ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಜನಸ್ನೇಹಿ ಆಡಳಿತಕ್ಕೆ ಆದ್ಯತೆ: ಸರ್ಕಾರಿ ನೌಕರರಿಗೆ ಸಿಎಂ ಸಲಹೆ

-

Profile
Ashok Nayak Aug 12, 2026 10:01 AM

ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳು, ನೌಕರರೊಂದಿಗೆ ಸಂವಾದ; ಜಿಲ್ಲಾಧಿಕಾರಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಚಿಕ್ಕಬಳ್ಳಾಪುರ: ಸರ್ಕಾರಿ ಕಚೇರಿಗಳಿಗೆ ಬರುವ ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಪಾರದರ್ಶಕ ಹಾಗೂ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ನೌಕರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D K Shivvakumar) ಸಲಹೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಿಂದ ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವುದು ಹಾಗೂ ಸರ್ಕಾರದ ಸೇವೆಗಳು ಜನರಿಗೆ ಸುಲಭವಾಗಿ ತಲುಪುವಂತೆ ಮಾಡುವ ಕುರಿತು ಹಲವು ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ: CM DK Shivakumar: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ಜಿಲ್ಲೆಯ ಆಡಳಿತ ವರ್ಗದ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಲು ಜಿಲ್ಲಾಡಳಿತದಿಂದ ಜಿಲ್ಲೆಯ ವಿವಿಧೆಡೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನ, ಚಿಂತಾಮಣಿಯ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ, ಶಿಡ್ಲಘಟ್ಟದ ಬಾಲಾಜಿ ಕನ್ವೆಂಕ್ಷನ್ ಹಾಲ್, ಬಾಗೇಪಲ್ಲಿ ತಾಲೂಕು ಪಂಚಾಯಿತಿ ಸಭಾಂಗಣ, ಗೌರಿಬಿದನೂರಿನ ಸಮಾನತೆ ಸೌಧ, ಗುಡಿಬಂಡೆಯ ಬಿ.ಸಿ.ಎಂ. ಕಾನ್ಫರೆನ್ಸ್ ಹಾಲ್, ಚೇಳೂರು ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಮಂಚೇನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸಂವಾದ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

11cbpm2CM ಸಂವಾದ ಕಾರ್ಯಕ್ರಮ- (4) ok

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸು ವಲ್ಲಿ ಅಧಿಕಾರಿಗಳು ಮತ್ತು ನೌಕರರ ಪಾತ್ರ ಮಹತ್ವದ್ದಾಗಿದ್ದು, ಸಾರ್ವಜನಿಕರೊಂದಿಗೆ ಸೌಜನ್ಯ ದಿಂದ ವರ್ತಿಸುವ ಮೂಲಕ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಸಂದೇಶವನ್ನು ಮುಖ್ಯಮಂತ್ರಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರು ಭಾಗವಹಿಸಿದ್ದರು.