ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ಖಾಸಗಿ ಬೋರ್‌ವೆಲ್ ಮಾಲೀಕರು ನಗರಸಭೆಗೆ ಸಹಕರಿಸಿ : ಸಾರ್ವಜನಿಕರಿಗೆ ನೀರು ಮಿತ ಬಳಕೆಗೆ ಮನವಿ

ಖಾಸಗಿ ಬೋರ್‌ವೆಲ್ ಹೊಂದಿರುವವರು ನಗರಸಭೆಗೆ ಮಾಹಿತಿ ನೀಡಿ ಸಹಕರಿಸಿದರೆ, ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ತುರ್ತು ಸಂದರ್ಭಗಳಲ್ಲಿ ನೀರು ಪೂರೈಸಲು ಅನುಕೂಲವಾಗುತ್ತದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಗರಸಭೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಶಿಡ್ಲಘಟ್ಟ : ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಖಾಸಗಿ ಬೋರ್‌ವೆಲ್ ಹೊಂದಿರುವವರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಅಮೃತ್ ಜಿ ಮನವಿ ಮಾಡಿದ್ದಾರೆ.

ನಗರಸಭೆ ಕಚೇರಿಯಲ್ಲಿ ಮಾತನಾಡಿದ ಅವರು ನಗರದ ವಿವಿಧ ವಾರ್ಡ್‌ಗಳಲ್ಲಿ ನೀರಿನ ಕೊರತೆ ಕಾಣಿಸಿಕೊಂಡಿರುವ ಹಿನ್ನೆಲೆ ನಗರಸಭೆ ವತಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕಾರ್ಯ ನಡೆಯುತ್ತಿದೆ. ಹೆಚ್ಚು ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಆದ್ಯತೆ ನೀಡಿ ನೀರು ಪೂರೈಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Shidlaghatta News: ಗುರುಗಳ ಆಶೀರ್ವಾದವೇ ಬದುಕಿನ ದೊಡ್ಡ ಸಂಪತ್ತು: ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ನಗರದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು. ಅನಗತ್ಯವಾಗಿ ನೀರು ವ್ಯರ್ಥ ಮಾಡದೆ ಜವಾಬ್ದಾರಿಯಿಂದ ಬಳಕೆ ಮಾಡಿದರೆ ನೀರಿನ ಸಮಸ್ಯೆಯನ್ನು ನಿಯಂತ್ರಿಸಲು ಸಹಕಾರಿ ಯಾಗುತ್ತದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

ಖಾಸಗಿ ಬೋರ್‌ವೆಲ್ ಹೊಂದಿರುವವರು ನಗರಸಭೆಗೆ ಮಾಹಿತಿ ನೀಡಿ ಸಹಕರಿಸಿದರೆ, ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ತುರ್ತು ಸಂದರ್ಭಗಳಲ್ಲಿ ನೀರು ಪೂರೈಸಲು ಅನುಕೂಲವಾಗುತ್ತದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಗರಸಭೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಚ್ಚಿರುವ ನೀರಿನ ಘಟಕಗಳು ಶೀಘ್ರ ಪುನರಾರಂಭ: ನಗರದಲ್ಲಿ ಒಟ್ಟು ಏಳು ಕುಡಿಯುವ ನೀರಿನ ಘಟಕಗಳಿದ್ದು, ಅವುಗಳಲ್ಲಿ ಐದು ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಎರಡು ಘಟಕಗಳು ಮುಚ್ಚಿರುವುದು ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಚ್ಚಿರುವ ಘಟಕಗಳನ್ನು ಶೀಘ್ರದಲ್ಲೇ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತರು ಅಮೃತ ಜಿ  ತಿಳಿಸಿದ್ದಾರೆ.